ಮಹಿಳೆಯರ ಕೈಗೆ ಶಕ್ತಿ ತುಂಬಿದ ರಾಜ್ಯ ಸರ್ಕಾರ: ಟಿ.ಡಿ.ರಾಜೇಗೌಡ

KannadaprabhaNewsNetwork |  
Published : Sep 08, 2026, 01:30 AM IST
೦೭ಬಿಹೆಚ್‌ಆರ್ ೧: ಬಾಳೆಹೊನ್ನೂರಿನಲ್ಲಿ ನಡೆದ ಹೋಬಳಿ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಶಾಸಕ ಟಿ.ಡಿ.ರಾಜೇಗೌಡ ಉದ್ಘಾಟಿಸಿದರು. ಡಾ. ಕೆ.ಪಿ.ಅಂಶುಮಂತ್, ಶಿವಾನಂದಸ್ವಾಮಿ, ಚಂದ್ರಮ್ಮ, ಮಹಮ್ಮದ್ ಹನೀಫ್, ನಟರಾಜ್, ಹೇಮಲತಾ, ರತ್ನಾಕರ್, ರಾಜು ಇದ್ದರು. | Kannada Prabha

ಸಾರಾಂಶ

ಬಾಳೆಹೊನ್ನೂರುಮಹಿಳೆಯರ ಕೈಗೆ ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು

ಮಹಿಳೆಯರ ಕೈಗೆ ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಜಿಲ್ಲಾ - ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸೋಮವಾರ ಆಯೋಜಿಸಿದ್ದ ಹೋಬಳಿ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತ ನಾಡಿ ಕಳೆದ ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚಿಸಿದ ಕೂಡಲೆ ಕಾಂಗ್ರೆಸ್ ನಾಯಕರು ರಾಜ್ಯದ ಮಹಿಳೆಯರಿಗೆ ಆರ್ಥಿಕ ಭದ್ರತೆ ನೀಡಿ ವಿವಿಧ ಗ್ಯಾರಂಟಿ ಒದಗಿಸಿದರು.

ಕರೋನಾ ಬಂದಾಗ ಜನ ಅನುಭವಿಸಿದ ಕಷ್ಟ ಅರಿತ ಕಾಂಗ್ರೆಸ್ಅಂ ದಿನ ದಿನಗಳಲ್ಲಿಯೇ ಜನರಿಗೆ ಆರ್ಥಿಕ ಭದ್ರತೆ ನೀಡಬೇಕೆಂಬ ಉದ್ದೇಶದಿಂದ ಯೋಜನೆ ಆಲೋಚನೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆ ಯಶಸ್ವಿಯಾಗಿದೆ ರಾಜ್ಯದಲ್ಲಿ ಕೋಟ್ಯಂತರ ಜನರು ಯೋಜನೆ ಫಲಾನುಭವಿಗಳಾಗಿದ್ದಾರೆ ಎಂದರು.

ಭದ್ರಾ ಕಾಡಾ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ಮಾತನಾಡಿ ಕಾಂಗ್ರೆಸ್ ಜನ ಸಾಮಾನ್ಯರು, ಬಡವರು, ದೀನ ದಲಿತರ ಪರವಾಗಿ ಕಾರ್ಯನಿರ್ವಹಿಸುವ ಪಕ್ಷ. ಶೀಘ್ರ ಶೃಂಗೇರಿಯಲ್ಲಿ ಕೆಎಸ್‌ಆರ್‌ಟಿಸಿ ಡಿಪೋ ಆರಂಭಗೊಳ್ಳಲಿದ್ದು, ಇದರಿಂದ ಶಕ್ತಿ ಯೋಜನೆಗೆ ಇನ್ನಷ್ಟು ಬಲ ಬರಲಿದೆ. ಹೆಚ್ಚಿನ ಸರ್ಕಾರಿ ಬಸ್‌ಗಳು ಸಂಚಾರ ಆರಂಭಿಸಲಿದೆ ಎಂದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ ರಾಜ್ಯದ ಪ್ರತಿಯೊಬ್ಬ ವ್ಯಕ್ತಿ ಸದೃಢವಾಗುವಂತೆ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ. ಕೆಲ ವ್ಯಕ್ತಿಗಳು ಮಾತ್ರ ಗ್ಯಾರಂಟಿ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ಯಾರೇ ಬಂದರೂ ಇದನ್ನು ನಿಲ್ಲಿಸಲು ಆಗುವುದಿಲ್ಲ ಎಂದರು.

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಮ್ಮ,ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹನೀಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಎಂ.ನಟರಾಜ್, ಬಗರ್‌ಹುಕುಂ ಸಮಿತಿ ಸದಸ್ಯೆ ಹೇಮಲತಾ, ಕೊಪ್ಪ ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಓಣಿತೋಟ ರತ್ನಾಕರ್, ಶೃಂಗೇರಿ ತಾಲೂಕು ಅಧ್ಯಕ್ಷ ರಾಜು, ಪಿಎಸಿಎಸ್ ಅಧ್ಯಕ್ಷ ಕೆ.ಕೆ.ವೆಂಕಟೇಶ್, ಮೆಸ್ಕಾಂ ಎಇಇ ಗೌತಮ್, ಗ್ರಾಪಂ ಆಡಳಿತಾಧಿಕಾರಿ ಡಾ.ಪ್ರೀತಮ್‌ಕುಮಾರ್, ಗ್ಯಾರಂಟಿ ಸಮಿತಿ ಸದಸ್ಯರಾದ ಟಿ.ಟಿ. ಇಸ್ಮಾಯಿಲ್, ಅರುಣ್ ಪೂಜಾರಿ, ಕೆ.ಕೆ.ಗೌತಮ್, ಎನ್.ಎ.ಹೂವಮ್ಮ, ಸಂದೀಪ್ ಮತ್ತಿತರರು ಹಾಜರಿದ್ದರು. ೦೭ಬಿಹೆಚ್‌ಆರ್ ೧:

ಬಾಳೆಹೊನ್ನೂರಿನಲ್ಲಿ ನಡೆದ ಹೋಬಳಿ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಶಾಸಕ ಟಿ.ಡಿ.ರಾಜೇಗೌಡ ಉದ್ಘಾಟಿಸಿದರು. ಡಾ. ಕೆ.ಪಿ.ಅಂಶುಮಂತ್, ಶಿವಾನಂದ ಸ್ವಾಮಿ, ಚಂದ್ರಮ್ಮ, ಮಹಮ್ಮದ್ ಹನೀಫ್, ನಟರಾಜ್, ಹೇಮಲತಾ, ರತ್ನಾಕರ್, ರಾಜು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಕ್ತದಾನದಿಂದ ಸಂಕಷ್ಟದಲ್ಲಿರುವ ರೋಗಿಯ ಜೀವ ಉಳಿಸಲು ಸಾಧ್ಯ: ಬಸವಪ್ರಭು
ಆನೆಕೊಂಡದ ಶ್ರೀ ಮರಡಿ ಬಸವೇಶ್ವರ ಕಾರ್ಣಿಕೋತ್ಸವ