ರಾಜ್ಯ ಸರ್ಕಾರ ರೈತರಿಗೆ ಬೆಳೆ ಪರಿಹಾರ ಘೋಷಣೆ ಮಾಡಬೇಕು: ದರ್ಶನ್ ಪುಟ್ಟಣ್ಣಯ್ಯ

KannadaprabhaNewsNetwork |  
Published : Jul 06, 2026, 01:45 AM IST
5ಕೆಎಂಎನ್ ಡಿ13 | Kannada Prabha

ಸಾರಾಂಶ

ಡ್ಯಾಂನಹಳ್ಳಿ ನೀರಿನ ಕೊರತೆ ಕಡಿಮೆ ಇರುವ ಕಾರಣ ರೈತರು ಬೆಳೆ ಬೆಳೆಯದಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಶಾಸಕರು, ಸರ್ಕಾರ ರೈತರಿಗೆ ಬೆಳೆ ಪರಿಹಾರ ಘೋಷಣೆ ಮಾಡಬೇಕು, ರೈತರು ಭೂಮಿಯನ್ನೆ ನೆಚ್ಚಿಕೊಂಡು ಬದುಕು ನಡೆಸುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ವಿವಿಧ ಗ್ರಾಮದಲ್ಲಿ ವಿವಿಧ ಇಲಾಖೆಯ ಅನುದಾನದಡಿ ಅಂದಾಜು 2.40 ಕೋಟಿ ರು. ಅನುದಾನದಲ್ಲಿ ರಸ್ತೆ, ಚೆಕ್ ಡ್ಯಾಂ ಹಾಗೂ ಸಂತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿಪೂಜೆ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ರಸ್ತೆಗಳು ಹಾಗೂ ಚರಂಡಿ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಲೋಕೋಪಯೋಗಿ ಇಲಾಖೆ, ಎಸ್‌ಸಿಪಿ ಯೋಜನೆಯಡಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ, ಸಣ್ಣ ನೀರಾವರಿ ಇಲಾಖೆಯಿಂದ ಚೆಕ್ಯ್ ಡ್ಯಾಂ ಅಭಿವೃದ್ಧಿಗೆ ಭೂಮಿ ಪೂಜೆ ಸಲ್ಲಿಸಿದ್ದೇವೆ ಎಂದರು.

ಲೋಕೋಪಯೋಗಿ ಇಲಾಖೆಯಿಂದ ತಾಲೂಕಿನ ಕನಗನಹಳ್ಳಿಯಲ್ಲಿ 20 ಲಕ್ಷ, ಕಾಳೇಗೌಡನಕೊಪ್ಪಲು ಗ್ರಾಮದಲ್ಲಿ 20 ಲಕ್ಷ ರು. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಸಲ್ಲಿಸಿದರು. ಎಸ್‌ಸಿಪಿ ಯೋಜನೆಯಡಿ ಗಮ್ಮನಹಳ್ಳಿ ಹೊಸೂರು ಕಾಲೋನಿಯಲ್ಲಿ 25 ಲಕ್ಷ ಹಾಗೂ ಮೊಳ್ಳೇನಹಳ್ಳಿಯಲ್ಲಿ 25 ಲಕ್ಷ ರು., ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗೆ, ಚಿನಕುರಳಿ ಗ್ರಾಮದಲ್ಲಿ ಕೆಆರ್ ಐಡಿಎಲ್ ಇಲಾಖೆಯಿಂದ 50 ಲಕ್ಷ ರು. ಯೋಜನೆಯಡಿ ಸಂತೆ ಅಭಿವೃದ್ಧಿಗೆ ಹಾಗೂ ಸಣ್ಣ ನೀರಾವರಿ ಇಲಾಖೆಯಿಂದ ಚಿಕ್ಕಬೋಗನಹಳ್ಳಿ-ಹಸನ್ ಪುರ ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಲಾಗಿದೆ ಎಂದರು.

ಡ್ಯಾಂನಹಳ್ಳಿ ನೀರಿನ ಕೊರತೆ ಕಡಿಮೆ ಇರುವ ಕಾರಣ ರೈತರು ಬೆಳೆ ಬೆಳೆಯದಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಶಾಸಕರು, ಸರ್ಕಾರ ರೈತರಿಗೆ ಬೆಳೆ ಪರಿಹಾರ ಘೋಷಣೆ ಮಾಡಬೇಕು, ರೈತರು ಭೂಮಿಯನ್ನೆ ನೆಚ್ಚಿಕೊಂಡು ಬದುಕು ನಡೆಸುತ್ತಿದ್ದಾರೆ. ಮಂಡ್ಯ ಜಿಲ್ಲೆಯಲ್ಲೂ ಸಹ ಕಬ್ಬು ಬೆಳೆ ಒಣಗುತ್ತಿದೆ. ಹಾಗಾಗಿ ನಾಲೆಗೆ ಒಂದು ಕಟ್ಟು ನೀರು ಹರಿಸಬೇಕೆಂದು ನಮ್ಮ ಒತ್ತಾಯವಾಗಿದೆ. ಸಂಘಟನೆಯಿಂದ ಪ್ರತಿಭಟನೆ ನಡೆಸುತ್ತಿದ್ದೇವೆ, ಹಾಗಾಗಿ ಸರ್ಕಾರ ರೈತರಿಗೆ ಸೂಕ್ತವಾದ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ರೈತಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲೂಕು ಅಧ್ಯಕ್ಷ ಮಂಜುನಾಥ್, ಗೋವಿಂದೇಗೌಡ, ಮುಖಂಡರಾದ ಕಣಿವೆರಾಮು, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್.ರಮೇಶ್, ಸಿದ್ದಲಿಂಗೇಗೌಡ, ಪುಟ್ಟೇಗೌಡ, ಬಿ.ಜೆ.ಸ್ವಾಮಿ, ಶ್ಯಾಮ್, ಬಿಎಂಟಿಸಿ ಸೋಮಕುಮಾರ್, ಕುಮಾರ್ ಹುಚ್ಚ, ರಮೇಶ್, ಹೊಸೂರು ಸ್ವಾಮಿ ಸೇರಿದಂತೆ ಎಲ್ಲಾ ಗ್ರಾಮದ ರೈತ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮತ್ತೊಮ್ಮೆ ಮೇಲುಕೋಟೆ ಬರುತ್ತೇನೆ: ಡಾ.ನಾಗಲಕ್ಷ್ಮಿ ಚೌಧರಿ
ರೈತರ ಬಾಕಿ 50 ರು. ನೀಡದೆ ಕಬ್ಬು ಅರೆಯುವಿಕೆ ಆರಂಭ: ಆಕ್ರೋಶ