ಮೂಲ್ಕಿ: ರಾಜ್ಯದ ಕಾಂಗ್ರೆಸ್ ಸರ್ಕಾರ ಎಲ್ಲ ರಂಗದಲ್ಲಿ ವಿಫಲಗೊಂಡಿದ್ದು, ಗ್ಯಾರಂಟಿ ಭಾಗ್ಯಗಳಿಂದ ಜನರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ, ಬೆಲೆ ಏರಿಕೆ ಹಾಗೂ ಲಂಚಗುಳಿತನ, ಅವ್ಯವಹಾರ ಗಳಿಂದ ಸರ್ಕಾರ ಮುಳುಗಿ ಹೋಗಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತಷ್ಟು ಪ್ರತಿಭಟನೆಗಳನ್ನು ನಡೆಸುವ ಮೂಲಕ ಜನ ಜಾಗೃತಿ ಮೂಡಿಸಲಾಗುವುದು ಎಂದು ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಹೇಳಿದರು.
ಪಾದಯಾತ್ರೆಯು ಮೈಲೋಟ್ಟಿ ನಿಂದ ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿವರೆಗೆ ನಡೆಯಿತು. ಅತಿಕಾರಿಬೆಟ್ಟು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶೈಲಜಾರವರಿಗೆ ಮನವಿಯನ್ನು ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುನಿಲ್ ಆಳ್ವ, ಈಶ್ವರ ಕಟೀಲು, ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮನೋಹರ ಕೋಟ್ಯಾನ್ ಮತ್ತಿತರರಿದ್ದರು.