ಭೀಕರ ಬರ ಆವರಿಸಿದರೂ ಸ್ಪಂದಿಸದ ರಾಜ್ಯ ಸರ್ಕಾರ: ಬಿಎಸ್‌ವೈ

KannadaprabhaNewsNetwork |  
Published : Apr 30, 2024, 02:05 AM IST
ಯಡಿಯೂರಪ್ಪ | Kannada Prabha

ಸಾರಾಂಶ

ರಾಜ್ಯದಲ್ಲಿ ಭೀಕರ ಬರ ಆವರಿಸಿದೆ. ಕುಡಿಯಲು ನೀರಿಲ್ಲ. ಶೇ.90ರಷ್ಟು ಬಿತ್ತನೆಯಾಗಿಲ್ಲ. ಆದರೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಬದಲಾಗಿ ಕುಂಟುನೆಪ ಹೇಳಿ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ರಾಜ್ಯದಲ್ಲಿ ಭೀಕರ ಬರ ಆವರಿಸಿದೆ. ಕುಡಿಯಲು ನೀರಿಲ್ಲ. ಶೇ.90ರಷ್ಟು ಬಿತ್ತನೆಯಾಗಿಲ್ಲ. ಆದರೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಬದಲಾಗಿ ಕುಂಟುನೆಪ ಹೇಳಿ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು.

ಬಾಗಲಕೋಟೆಯ ನವನಗರದಲ್ಲಿ ಸೋಮವಾರ ಬಾಗಲಕೋಟೆ, ವಿಜಯಪುರ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಾರ್ಥವಾಗಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ, ಮೋದಿ ಗಾಳಿ ಬೀಸುತ್ತಿದೆ. ಇದರಿಂದ ಕಂಗೆಟ್ಟಿರುವ ಕಾಂಗ್ರೆಸ್ ನಾಯಕರು ದುರುದ್ದೇಶದಿಂದ ಕೇಂದ್ರದ ವಿರುದ್ಧ ಕೀಳುಮಟ್ಟದ ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಪ್ರಧಾನಿ ಮೋದಿ ಅವರು ಅನೇಕ ಜನಪರ ಯೋಜನೆಗಳ ಜಾರಿ ಮಾಡಿದ್ದಾರೆ. ದೇವೇಗೌಡರೂ ಸಹ ಮೋದಿ ಬೆಂಬಲಕ್ಕೆ ನಿಂತಿದ್ದಾರೆ. ಇಬ್ಬರೂ ಅಭ್ಯರ್ಥಿಗಳನ್ನು 2 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ನೇಹಾ ಹತ್ಯೆ ಪ್ರಕರಣದಲ್ಲಿ ವೈಯಕ್ತಿಕ ಎಂದು ಆರೋಪಿಯನ್ನು ರಕ್ಷಿಸುವ ಕೆಲಸ ಮಾಡಲಾಗುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹೊರಗೆ ಹೋದ ಮಗಳು ಸುರಕ್ಷಿತವಾಗಿ ಮನೆಗೆ ಬರುವಳೇ ಎಂಬ ಆತಂಕ ಪೋಷಕರನ್ನು ಕಾಡುತ್ತಿದೆ ಎಂದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ಸನಾತನ ಧರ್ಮ ಉಳಿಸಲು 5 ಲಕ್ಷ ಮತಗಳ ಅಂತರದಿಂದ ಗದ್ದಿಗೌಡರನ್ನು ಗೆಲ್ಲಿಸಬೇಕು. ಬಾಗಲಕೋಟೆ ಜನ ಸ್ವಾಭಿಮಾನಿಗಳು ಎನ್ನುವುದನ್ನು ತೋರಿಸಬೇಕು. ಇಲ್ಲದಿದ್ದರೆ ಡಿಸಿಸಿ ಬ್ಯಾಂಕ್, ಬಸವೇಶ್ವರ ಸಂಘ ಎಲ್ಲ ಹೊಡಕೊಂಡ ಹೋಗ್ತಾರೆ ಎಂದು ಎಚ್ಚರಿಸಿದರು.

ಮಾಜಿ ಸಚಿವ ಮುರುಗೇಶ ನಿರಾಣಿ ಮಾತನಾಡಿ, ರಾಜದಲ್ಲಿ 28 ಸ್ಥಾನಗಳನ್ನೂ ಗೆಲ್ಲುತ್ತೇವೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದರು. ಈ ವೇಳೆ ಶಾಸಕ ಸಿ.ಸಿ. ಪಾಟೀಲ, ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಇತರರು ಮಾತನಾಡಿದರು.ಕಣ್ಣಿದ್ದು ಕುರುಡ, ಬಾಯಿದ್ದು ಮೂಗನಂತೆ ಕಾಂಗ್ರೆಸ್ ಸರ್ಕಾರ ವರ್ತಿಸುತ್ತಿದೆ. ತೀವ್ರ ಬರ ಬಿದ್ದರೂ ರೈತರಿಗೆ ಭಿಕ್ಷೆಯಂತೆ ಕೇವಲ ₹ 2 ಸಾವಿರ ಪರಿಹಾರ ನೀಡಿದೆ. ಹಿಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಪ್ರವಾಹ ಸಂದರ್ಭದಲ್ಲಿ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಾಣಕ್ಕೆ ₹ 5 ಲಕ್ಷ, ಬೆಳೆಹಾನಿಗೆ ಹೆಕ್ಟೇರ್ ₹16 ಸಾವಿರ ಪರಿಹಾರ ನೀಡಿದ್ದರು.

-ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀರ್ಘಾವಧಿ ಸಿಎಂ ಸಂಭ್ರಮಕ್ಕೆ ಗೃಹಲಕ್ಷ್ಮಿ ಹಣ ನೀಡಿದ ಮಹಿಳೆ!
4 ಜಿಲ್ಲೆಗಳಲ್ಲಿ 13 ಸಾವಿರ ಕೇಸ್‌ ಬಾಕಿ : ಸಚಿವ ತರಾಟೆ