ರಾಜ್ಯ ಸರ್ಕಾರದ ಮಾರ್ಗಸೂಚಿ ಹಿಂಪಡೆಯಲಿ: ಮಾಜಿ ಶಾಸಕ ಸುನಿಲ ಹೆಗಡೆ

KannadaprabhaNewsNetwork |  
Published : Sep 30, 2026, 02:30 AM IST
ಕೆಸರೊಳ್ಳಿ ಗ್ರಾಮದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಸುನೀಲ ಹೆಗಡೆ ಮಾತನಾಡಿದರು. | Kannada Prabha

ಸಾರಾಂಶ

ಕೆಸರೊಳ್ಳಿ ಗ್ರಾಮದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಸುನಿಲ ಹೆಗಡೆ ಅವರು, ಅರಣ್ಯ, ಬೆಟ್ಟ, ಸರ್ಕಾರಿ ಭೂಮಿ, ಗ್ರಾಮಠಾಣ ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಿರ್ಮಿಸಲಾಗಿರುವ ಮನೆಗಳ ಆಸ್ತಿ ತೆರಿಗೆ ಸ್ವೀಕಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಹಳಿಯಾಳ: ತಾಲೂಕು ಬಿಜೆಪಿ ಮಂಡಲದ ವತಿಯಿಂದ ಸೋಮವಾರ ತಾಲೂಕಿನ 16 ಗ್ರಾಮ ಪಂಚಾಯಿತಿಗಳಲ್ಲಿ ‘ನಮ್ಮ ಮನೆ ನಮ್ಮ ಹಕ್ಕು’ ಘೋಷವಾಕ್ಯದೊಂದಿಗೆ ಪ್ರತಿಭಟನೆ ನಡೆಸಿ ಇಡೀ ಗ್ರಾಮಾಂತರ ಭಾಗಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಲಾಯಿತು.

ಬಿಜೆಪಿ ಕಾರ್ಯಕರ್ತರು, ಜನಪ್ರತಿನಿಧಿಗಳೊಂದಿಗೆ ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ತೆರಳಿ, ಪಿಡಿಒ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರವನ್ನು ರವಾನಿಸಿದರು.

ತಾಲೂಕಿನ ಕೆಸರೊಳ್ಳಿ ಗ್ರಾಮದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಸುನಿಲ ಹೆಗಡೆ ಅವರು, ಅರಣ್ಯ, ಬೆಟ್ಟ, ಸರ್ಕಾರಿ ಭೂಮಿ, ಗ್ರಾಮಠಾಣ ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಿರ್ಮಿಸಲಾಗಿರುವ ಮನೆಗಳ ಆಸ್ತಿ ತೆರಿಗೆ ಸ್ವೀಕಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಅರಣ್ಯ, ಸರ್ಕಾರಿ ಹಾಗೂ ಇನ್ನಿತರ ಪ್ರದೇಶಗಳಲ್ಲಿ ಹಲವು ವರ್ಷಗಳಿಂದ, ತಲೆತಲಾಂತರಗಳಿಂದ ವಾಸಿಸುತ್ತಿರುವ ಸಾವಿರಾರು ಕುಟುಂಬಗಳಿದ್ದು, ಸರ್ಕಾರದ ಈ ಕ್ರಮದಿಂದ ಅಂತಹ ಕುಟುಂಬಗಳಿಗೆ ತೊಂದರೆಯಾಗಲಿದೆ. ಜನಸಾಮಾನ್ಯರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು ಈ ಜನವಿರೋಧಿ ಮಾರ್ಗಸೂಚಿಯನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಈ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ಸಂಗ್ರಹಣೆ ಸೇರಿದಂತೆ ಆಡಳಿತಾತ್ಮಕ ಚಟುವಟಿಕೆಗಳ ಮೇಲೆಯೂ ಪರಿಣಾಮ ಬೀರುವ ಪರಿಸ್ಥಿತಿ ನಿರ್ಮಾಣವಾಗಬಹುದು. ಆದ್ದರಿಂದ ರಾಜ್ಯ ಸರ್ಕಾರವು ಕೂಡಲೇ ಆದೇಶವನ್ನು ಹಿಂಪಡೆದು, ಗ್ರಾಮೀಣ ಭಾಗದ ಜನರಿಗೆ ನ್ಯಾಯ ಒದಗಿಸಬೇಕು ಎಂದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ವಿಠ್ಠಲ ಸಿದ್ದಣ್ಣವರ, ಮಂಡಲ ಪ್ರದಾನ ಕಾರ್ಯದರ್ಶಿ ಸಂತೋಷ ಘಟಕಾಂಬಳೆ, ಸೇರಿದಂತೆ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಮತ್ತು ತಾಲೂಕು ಪದಾಧಿಕಾರಿಗಳು, ಮೋರ್ಚಾ ಪದಾಧಿಕಾರಿಗಳು ಮಹಾಶಕ್ತಿ ತಂಡ, ಶಕ್ತಿ ಕೇಂದ್ರ ಪ್ರಮುಖರು ಮತ್ತು ಪ್ರಭಾರಿಗಳು, ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ವಿವಿಧ ಗ್ರಾಪಂಗಳಲ್ಲಿ ನಡೆದ ಪ್ರತಿಭಟನೆಯ ಮುಖಂಡತ್ವವನ್ನು ಬಿಜೆಪಿಯ ಗ್ರಾಮೀಣ ಭಾಗದ ನಾಯಕರು ವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಡಿಯುವ ನೀರಿಗೆ ಅಭಾವ ಆಗದಿರಲಿ: ಜಿಲ್ಲಾಧಿಕಾರಿ ಸೂಚನೆ
ಪರೀಕ್ಷಾ ಪ್ರಾಧಿಕಾರ ನಿಯಮದಂತೆ ಪರೀಕ್ಷೆ ನಡೆಸಿ: ಡಿಸಿ