ಜನೌಷಧಿ ಕೇಂದ್ರಗಳ ಬಂದ್ ಆದೇಶ ರಾಜ್ಯ ಸರ್ಕಾರ ಹಿಂಪಡೆಯಲಿ

KannadaprabhaNewsNetwork |  
Published : May 31, 2025, 12:41 AM IST
ರಾಣಿಬೆನ್ನೂರಿನ ಸರ್ಕಾರಿ ಆಸ್ಪತ್ರೆ ಎದುರು ಮೌನ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ಜನೌಷಧಿ ಕೇಂದ್ರದಲ್ಲಿ ಬಡವರು, ಮಧ್ಯಮ ವರ್ಗದವರು ಔಷಧಿ ತೆಗೆದುಕೊಂಡರೆ ನಮ್ಮ ಕಾಂಗ್ರೆಸ್ ಸರ್ಕಾರಕ್ಕೇನು ಲಾಭ ಎಂಬಂತಿದೆ. ರಾಜ್ಯ ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು.

ರಾಣಿಬೆನ್ನೂರು: ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಬಡವರ ಪಾಲಿಗೆ ಸಂಜೀವಿನಿ ಆಗಿದ್ದ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಕೈಗೆ ಕಪ್ಪುಬಟ್ಟೆ ಕಟ್ಟಿಕೊಂಡು ಶುಕ್ರವಾರ ನಗರದ ಹಲಗೇರಿ ರಸ್ತೆಯ ಸಾರ್ವಜನಿಕ ಆಸ್ಪತ್ರೆ ಎದುರು ಮೌನ ಪ್ರತಿಭಟನೆ ನಡೆಸಿದರು. ಈ ಸಮಯದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅರುಣಕುಮಾರ ಪೂಜಾರ ಕನ್ನಡಪ್ರಭದೊಂದಿಗೆ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಾರಂಭಿಸಿದ ಜನೌಷಧಿ ಕೇಂದ್ರಗಳು ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಸಂಜೀವಿನಿಯಾಗಿದ್ದವು. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಮೆಡಿಸಿನ್ ಮಾಫಿಯಾಗೆ ಬಲಿಯಾಗಿ ಬಡವರ ಪಾಲಿನ ಸಂಜೀವಿನಿಯಾದ ಜನೌಷಧಿಗೆ ಬೀಗ ಹಾಕುತ್ತಿದ್ದಾರೆ. ಜನೌಷಧಿ ಕೇಂದ್ರದಲ್ಲಿ ಬಡವರು, ಮಧ್ಯಮ ವರ್ಗದವರು ಔಷಧಿ ತೆಗೆದುಕೊಂಡರೆ ನಮ್ಮ ಕಾಂಗ್ರೆಸ್ ಸರ್ಕಾರಕ್ಕೇನು ಲಾಭ ಎಂಬಂತಿದೆ. ರಾಜ್ಯ ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಡಾ. ಬಸವರಾಜ ಕೇಲಗಾರ, ಶಹರ ಘಟಕದ ಅಧ್ಯಕ್ಷ ರಮೇಶ ಗುತ್ತಲ, ಜಿಪಂ ಮಾಜಿ ಸದಸ್ಯ ಸಂತೋಷಕುಮಾರ ಪಾಟೀಲ, ಕೆ. ಶಿವಲಿಂಗಪ್ಪ, ಭಾರತಿ ಜಂಬಗಿ, ಸಿದ್ಧು ಚಿಕ್ಕಬಿದರಿ, ಎ.ಬಿ. ಪಾಟೀಲ, ಕುಬೇರ ಕೊಂಡಜ್ಜಿ, ಮಾಳಪ್ಪ ಪೂಜಾರ, ಮಲ್ಲಿಕಾರ್ಜುನ ಅಂಗಡಿ, ಪ್ರಕಾಶ ಪೂಜಾರ, ಮೈಲಪ್ಪ ಗೋಣಿಬಸಮ್ಮನವರ, ಅಮೋಘ ಬದಾಮಿ, ನಿಂಗಪ್ಪ ಕೋಡಿಹಳ್ಳಿ, ಪವನಕುಮಾರ ಮಲ್ಲಾಡದ, ರಾಮಪ್ಪ ಕರಡೇಣ್ಣನವರ, ಪಾರ್ವತಿ ಹೊಸಮನಿ, ಚನ್ನಮ್ಮ ಗುರುಪಾದೇವರಮಠ, ಯುವರಾಜ ಬಾರಾಟಕ್ಕೆ ಮತ್ತಿತರರಿದ್ದರು.ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟನೆ

ಸವಣೂರು: ಜನೋಪಯೋಗಕ್ಕಾಗಿ ಕೇಂದ್ರ ಸರ್ಕಾರ ಪ್ರಾರಂಭಿಸಿದ್ದ ಜನೌಷಧಿ ಕೇಂದ್ರವನ್ನು ಸ್ಥಗಿತಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನೀತಿಯನ್ನು ಖಂಡಿಸಿ ಬಿಜೆಪಿ ಸವಣೂರು ಮಂಡಲದ ಕಾರ್ಯಕರ್ತರು ಕೈಗೆ ಕಪ್ಪುಪಟ್ಟಿ ಕಟ್ಟಿಕೊಂಡು ತಾಲೂಕು ಆಸ್ಪತ್ರೆಯ ಸಭಾಂಗಣದಲ್ಲಿರುವ ಜನೌಷಧಿ ಕೇಂದ್ರದ ಮುಂಭಾಗದಲ್ಲಿ ಮೌನ ಪ್ರತಿಭಟನೆ ನಡೆಸಿದರು.

ಸವಣೂರು ಬಿಜೆಪಿ ಮಂಡಲ ನಿಕಟಪೂರ್ವ ಅಧ್ಯಕ್ಷ ಗಂಗಾಧರ ಬಾಣದ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಲು ಮುಂದಾಗಿ ಆದೇಶ ಹೊರಡಿಸಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸಲು ಮುಂದಾಗಿರುವುದು ಖಂಡನೀಯ ಎಂದರು.ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಗಾಣಿಗೇರ, ಕಾರ್ಯದರ್ಶಿ ಶ್ರೀನಿವಾಸ ಗಿತ್ತೆ, ಅಶೋಕ ಎಲಿಗಾರ, ಚನ್ನಬಸಯ್ಯ ದುರ್ಗದಮಠ, ಮಲ್ಲಿಕಾರ್ಜುನ ಕಳ್ಳಿಮನಿ, ನಿಂಗರಾಜ ಡವಗಿ, ಪ್ರವೀಣ ಬಾಲೆಹೋಸೂರ, ಶಂಕರ ಪಾಟೀಲ, ಕಿರಣ ದೊಡ್ಡಮನಿ, ಗಜಾನನ ರಾಶಿನಕರ, ಚಿದಾನಂದ ಬಡಿಗೇರ, ಗಾಳೆಪ್ಪ ದೊಡ್ಡಪೂಜಾರ, ರತ್ನಮ್ಮ ಅರಗೋಳ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ