ಡ್ರಗ್ ಮಾಫಿಯಾ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ: ಬೊಮ್ಮಾಯಿ

KannadaprabhaNewsNetwork |  
Published : Dec 29, 2025, 02:45 AM IST
ಬಸವರಾಜ ಬೊಮ್ಮಾಯಿ | Kannada Prabha

ಸಾರಾಂಶ

ಯಾವ ಅಧಿಕಾರಿಗಳ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ನಡೆಯುತ್ತಿದೆಯೋ ಆ ಅಧಿಕಾರಿಗಳನ್ನು ಬದಲಾಯಿಸಬೇಕು. ಮುಖ್ಯಮಂತ್ರಿಗಳು ಎಚ್ಚೆತ್ತುಕೊಳ್ಳಬೇಕು. ಡ್ರಗ್ ಟ್ರಾಫಿಕಿಂಗ್ ಮಾಡುವವರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಗದಗ: ಮಹಾರಾಷ್ಟ್ರ ಪೊಲೀಸರು ಕರ್ನಾಟಕಕ್ಕೆ ಬಂದು ಡ್ರಗ್ ಟ್ರಾಫಿಕಿಂಗ್ ಮಾಡುವವರನ್ನು ಪತ್ತೆ ಹೆಚ್ಚುತ್ತಾರೆ ಎಂದರೆ ಇಲ್ಲಿನ ಪೊಲೀಸರು ಡ್ರಗ್ ಟ್ರಾಫಿಕಿಂಗ್‌ನಲ್ಲಿ ಶಾಮೀಲಾಗಿದ್ದಾರೆಯೇ ಎಂಬ ಅನುಮಾನ ಮೂಡುತ್ತದೆ. ರಾಜ್ಯ ಸರ್ಕಾರವು ಡ್ರಗ್ ಮಾಫಿಯಾ ನಿಯಂತ್ರಣದಲ್ಲಿದೆ. ಸರ್ಕಾರ ತಕ್ಷಣವೇ ಎಚ್ಚೆತ್ತುಕೊಳ್ಳದಿದ್ದರೆ ಉಡ್ತಾ ಕರ್ನಾಟಕ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಎಚ್ಚರಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಡ್ರಗ್ಸ್ ಬಳಕೆ ಕರ್ನಾಟಕದಲ್ಲಿ ಅತಿ ಹೆಚ್ಚಿದೆ. ಅದನ್ನು ನಿಯಂತ್ರಿಸಲು ಸರ್ಕಾರ ಸ್ಪೆಷಲ್ ಸ್ಕ್ವಾಡ್ ಮಾಡಿದೆ. ಆದರೆ, ಪೊಲೀಸರ ಭಯ ಇಲ್ಲ. ಹಲವಾರು ಪ್ರಸಂಗಗಳಲ್ಲಿ ಪೊಲೀಸರು ಕೆಲವರನ್ನು ಬಂಧಿಸಿದ್ದಾರೆ. ಇದಕ್ಕಾಗಿ ವಿಶೇಷ ಕಾನೂನಿದೆ. ಅದನ್ನು ಬಳಕೆ ಮಾಡುತ್ತಿಲ್ಲ. ಮಹಾರಾಷ್ಟ್ರದವರು ಬಂದು ಇಲ್ಲಿ ಡ್ರಗ್ಸ್ ಪತ್ತೆ ಹೆಚ್ಚುತ್ತಾರೆ ಎಂದರೆ ಇಲ್ಲಿನ ಪೊಲೀಸರು ಡ್ರಗ್ ಟ್ರಾಫಿಕಿಂಗ್‌ನಲ್ಲಿ ಶಾಮೀಲಾಗಿದ್ದಾರೆ ಎಂಬ ಅನುಮಾನ ಮೂಡುತ್ತದೆ. ಹಾವೇರಿ ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲೂ ಡ್ರಗ್ಸ್ ಮುಕ್ತವಾಗಿ ಮಾರಾಟವಾಗುತ್ತಿದೆ. ಇದೇ ರೀತಿ ಮುಂದುವರಿದರೆ ಪಂಜಾಬ್ ಆದ ಹಾಗೆ ಆಗುತ್ತದೆ ಎಂದರು.

ಯಾವ ಅಧಿಕಾರಿಗಳ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ನಡೆಯುತ್ತಿದೆಯೋ ಆ ಅಧಿಕಾರಿಗಳನ್ನು ಬದಲಾಯಿಸಬೇಕು. ಮುಖ್ಯಮಂತ್ರಿಗಳು ಎಚ್ಚೆತ್ತುಕೊಳ್ಳಬೇಕು. ಡ್ರಗ್ ಟ್ರಾಫಿಕಿಂಗ್ ಮಾಡುವವರನ್ನು ಶಿಕ್ಷೆಗೆ ಒಳಪಡಿಸಬೇಕು. ಡ್ರಗ್ ಟ್ರಾಫಿಕಿಂಗ್ ಮಾಡುವವರನ್ನು ಶಿಕ್ಷಿಸಲು ಕಠಿಣ ಕಾನೂನು ತರಬೇಕು ಎಂದರು.

ರಾಜ್ಯ ಸರ್ಕಾರ ದ್ವೇಷ ಭಾಷಣ ಮಾಡುವುದರ ವಿರುದ್ಧ ಕಾನೂನು ತರುವ ಬದಲು ರೈತರ ಗೊಬ್ಬರ ಕಳ್ಳತನ ಮಾಡುವವರಿಗೆ ಕಠಿಣ ಕಾನೂನು ರೂಪಿಸಲಿ. ಡ್ರಗ್ ಮಾರುವವರು, ಕಳ್ಳಭಟ್ಟಿ ಮಾಡುವವರಿಗೂ ಬಿಗಿ ಕಾನೂನಿಲ್ಲ. ಸಂಪೂರ್ಣ ಕಾನೂನು ಸುವ್ಯವಸ್ಥೆ ಅಲ್ಲದೇ ಅನೈತಿಕ ಚಟುವಟಿಯಿಕೆಯಿಂದ ಕೂಡಿದ ರಾಜ್ಯವಾಗಿದೆ. ಈ ಸರ್ಕಾರ ಸಂಪೂರ್ಣ ಕಚ್ಚಾಟದಲ್ಲಿ ಮುಳುಗಿದೆ. ಹೀಗಾಗಿ ಡ್ರಗ್ ಮಾಫಿಯಾ ಮುಕ್ತವಾಗಿದೆ ಎಂದು ಹೇಳಿದರು.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ಬಾಂಗ್ಲಾ ಸರ್ಕಾರ ಜನರ ಮೇಲೆ ನಿಯಂತ್ರಣ ಕಳೆದುಕೊಂಡಿದೆ. ಅಲ್ಪಸಂಖ್ಯಾತರು ಅಸುರಕ್ಷಿತವಾಗಿದ್ದಾರೆ. ಯೂನಸ್ ಸರ್ಕಾರ ಹಿಂದೂ ಜನರು, ಸಂಸ್ಥೆಗಳು ಮತ್ತು ಮನೆಗಳಿಗೆ ರಕ್ಷಣೆ ಕೊಡಬೇಕು. ಇಲ್ಲದಿದ್ದರೆ ದಕ್ಷಿಣ ಏಷ್ಯಾ ಪ್ರದೇಶ ಸಮಸ್ಯೆಗೆ ಸಿಲುಕಲಿದೆ. ಅದಕ್ಕಾಗಿ ಅವರು ಬೆಲೆ ತೆರಬೇಕಾಗುತ್ತದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವರದಾ-ಬೇಡ್ತಿ ಯೋಜನೆಗೆ ಅಡ್ಡಿ: ಕಾಗೇರಿ ವಿರುದ್ಧ ರೈತರ ಆಕ್ರೋಶ
ಶಿಕ್ಷಕರ ಬೇಕು ಬೇಡಿಕೆ ಸಂಘ ಈಡೇರಿಸಲಿ