ಹುಬ್ಬಳ್ಳಿ: ನೀರಾವರಿ, ಲೋಕೋಪಯೋಗಿ, ಕಾರ್ಮಿಕ ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ. ನಮ್ಮ ಸರ್ಕಾರ ಅಭಿವೃದ್ಧಿಯೆಡೆಗೆ ನಡೆಯುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನವಲಗುಂದ ಕ್ಷೇತ್ರ ಪ್ರಗತಿ ಪಥದಲ್ಲಿ ದಾಪುಗಾಲು ಹಾಕುತ್ತಿರುವುದು ಹೆಮ್ಮೆಯ ಸಂಗತಿ. ಶಾಸಕ ಕೋನರಡ್ಡಿ ರೈತರ ಪರವಾಗಿ ಸದನದ ಒಳಗೆ ಮತ್ತು ಹೊರಗೆ ಗಮನ ಸೆಳೆಯುತ್ತಾರೆ. ಅವರು ಪ್ರಾಮಾಣಿಕ ಶಾಸಕರಾಗಿದ್ದಾರೆ. ₹80 ಕೋಟಿಯನ್ನು ಸೇತುವೆ ನಿರ್ಮಾಣಕ್ಕೆ ನೀಡಲಾಗಿದೆ. ಈ ಭಾಗದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಜನಪರ ಕಾರ್ಯಗಳು ಈ ಭಾಗದಲ್ಲಿ ನಡೆಯಲಿ ಎಂದು ಆಶಿಸಿದರು.
ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮಾತನಾಡಿ, ಕೇಂದ್ರ ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರವಿದ್ದಾಗಲೂ ಬೆಣ್ಣೆಹಳ್ಳ ಪ್ರವಾಹ ತಡೆ ಯೋಜನೆ ಬಗ್ಗೆ ಯೋಚಿಸಲಿಲ್ಲ. ಸದ್ಯ ಸಿಎಂ ಸಿದ್ದರಾಮಯ್ಯ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಬಿಜೆಪಿಯವರು ಕೇವಲ ಮಾತನಾಡುತ್ತಾರೆ, ಅವರು ಈ ಕಾಮಗಾರಿಗೆ ಮಾಡಲಿಲ್ಲ. ಕಳಸಾ ಬಂಡೂರಿ ಯೋಜನೆಗೆ ಈಗಾಗಲೇ ₹1,300 ಕೋಟಿ ಟೆಂಡರ್ ಮೂಲಕ ಕರೆದು ಅವರಿಗೆ ಒಪ್ಪಿಸಲಾಗಿದೆ. ಕೇಂದ್ರ ವನ್ಯಜೀವಿ ಮಂಡಳಿಯಿಂದ ಅನುಮತಿ ನೀಡಿದ ತಕ್ಷಣವೇ ಕಾಮಗಾರಿ ಆರಂಭಿಸಲಾಗುವುದು ಎಂದರು.ಅಮೆರಿಕಾ-ಭಾರತ ವ್ಯಾಪಾರ ಒಪ್ಪಂದದಲ್ಲಿ ಅಮೆರಿಕದ ವಸ್ತುಗಳಿಗೆ ನಮ್ಮಲ್ಲಿ ಶೂನ್ಯ ಟ್ಯಾಕ್ಸ್ ವಿಧಿಸಲಾಗುತ್ತದೆ. ಇದು ಭಾರತದ ರೈತರಿಗೆ ಮುಳುವಾಗಲಿದೆ. ಈ ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರ ರೈತರ ₹78 ಸಾವಿರ ಕೋಟಿ ಸಾಲ ಮನ್ನಾ ಮಾಡಿದೆ. ಆದರೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿ ರೈತರ ಒಂದು ರುಪಾಯಿ ಕೂಡ ಸಾಲಮನ್ನಾ ಮಾಡಿಲ್ಲ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯಸಚೇತಕರಾದ ಸಲೀಂ ಅಹ್ಮದ್, ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ, ವಿಧಾನ ಪರಿಷತ್ ಸದಸ್ಯರಾದ
ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ಸ್ವಾಗತಿಸಿದರು.