ನಾಳೆಯಿಂದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

KannadaprabhaNewsNetwork | Published : May 22, 2024 12:52 AM

ಸಾರಾಂಶ

ಜಿಲ್ಲಾಮಟ್ಟದಲ್ಲಿ ವಿಜೇತ ಕ್ರೀಡಾಪಟುಗಳಿಗೆ ಪ್ರಮಾಣಪತ್ರ, ಪದಕಗಳನ್ನು ವಿತರಿಸಿ, ಗೌರವಿಸಲಾಗುವುದು. ಈ ಸ್ಪರ್ಧೆಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆ ಒಟ್ಟು ೭೦ ಜನ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರನ್ನು ನಿಯೋಜಿಸಲಾಗಿದೆ.

ಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ೨೦೨೪ರ ಮೇ ೨೩ ಮತ್ತು ೨೪ ರಂದು ಎರಡು ದಿನಗಳ ಕಾಲ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಈ. ಕೃಷ್ಣೇಗೌಡ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಮೇ ೨೩ರ ಗುರುವಾರದಂದು ಬೆಳಗ್ಗೆ ೧೦:೩೦ ಗಂಟೆಗೆ ಜರುಗುವ ಜಿಲ್ಲಾ ಸರಕಾರಿ ನೌಕರರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಜಿಲ್ಲಾಧಿಕಾರಿಗಳು ನೆವೇರಿಸಲ್ಲಿದ್ದಾರೆ. ಜಿಲ್ಲೆಯ ಹಿರಿಯ ಎಲ್ಲಾ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈಗಾಗಲೇ ಜಿಲ್ಲೆಯ ಒಟ್ಟು ೧೮೦೦ ಅಧಿಕಾರಿ/ನೌಕರರು ನೋಂದಣಿ ಮಾಡಿಕೊಂಡಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾ ಸ್ಪರ್ಧಿಗಳಿಗೆ ಕ್ಯಾಪ್ ವಿತರಿಸಲಾಗುವುದು ಮತ್ತು ಕ್ರೀಡಾಪಟುಗಳಿಗೆ ಎರಡು ದಿನಗಳ ಕಾಲ ಊಟದ ವ್ಯವಸ್ಥೆ ಮಾಡಲಾಗಿದೆ. ಮೊದಲ ದಿನ ನೋಂದಣಿ ಸಮಯದಲ್ಲಿ ತಮ್ಮ ಇಲಾಖೆಯಿಂದ ಕೊಟ್ಟಿರುವ ಗುರುತಿನ ಚೀಟಿ, ಸೇವಾ ಪ್ರಮಾಣ ಪತ್ರ ತೋರಿಸಿ ಹಾಜರಾತಿ ಪ್ರಮಾಣಪತ್ರ ಪಡೆಯಬೇಕು. ಜಿಲ್ಲಾಮಟ್ಟದಲ್ಲಿ ವಿಜೇತ ಕ್ರೀಡಾಪಟುಗಳಿಗೆ ಪ್ರಮಾಣಪತ್ರ, ಪದಕಗಳನ್ನು ವಿತರಿಸಿ, ಗೌರವಿಸಲಾಗುವುದು. ಈ ಸ್ಪರ್ಧೆಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆ ಒಟ್ಟು ೭೦ ಜನ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರನ್ನು ನಿಯೋಜಿಸಲಾಗಿದೆ. ಸ್ಪರ್ಧೆಗಳು ಅತ್ಯಂತ ಪಾರದರ್ಶಕತೆಯಿಂದ ನಡೆಯುವಂತೆ ನೋಡಿಕೊಳ್ಳಲಾಗುವುದು. ಜಿಲ್ಲೆಯ ಎಲ್ಲಾ ಇಲಾಖೆಗಳ ನೌಕರರು, ವೃಂದ ಸಂಘಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮನವಿ ಮಾಡಿದರು.

ಸ್ಪರ್ಧೆ-ಸ್ಪರ್ಧಾ ಸ್ಥಳಗಳ ವಿವರ, ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಟೆನ್ನಿಕ್ವಾಯಿಟ್, ಕಬಡ್ಡಿ, ಥ್ರೋ ಬಾಲ್ ಕ್ರೀಡೆಗಳು ಮತ್ತು ಒಳಾ ಕ್ರೀಡಾಂಗಣದಲ್ಲಿ ಟೇಬಲ್ ಟೆನ್ನಿಸ್, ಷಟಲ್ ಬ್ಯಾಡ್ಮಿಂಟನ್, ಪವರ್‌ಲಿಪ್ಟಿಂಗ್, ದೇಹದಾರ್ಢ್ಯತೆ ಸ್ಪರ್ಧೆ ಹಾಗೂ ಈಜುಕೊಳದಲ್ಲಿ ಈಜು ಸ್ಪರ್ಧೆ, ಪುಟ್ಬಾಲ್, ಹಾಕಿ, ಬಾಸ್ಕೆಟ್ ಪಂದ್ಯಗಳು. ಚೆಸ್, ಕೇರಂ ಆಟಗಳು, ಟೆನ್ನಿಸ್ ಆಟ, ಬಾಲ್ ಬ್ಯಾಡ್ಮಿಂಟನ್ ಆಟಗಳು, ಹ್ಯಾಂಡ್ ಬಾಲ್ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಜರುಗಲಿವೆ. ಈ ಕ್ರೀಡಾಕೂಟಕ್ಕೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿ/ನೌಕರರು ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ಸಂಘದ ಮೂಲಕ ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸರಕಾರಿ ನೌಕರರ ಸಂಘದ ಖಜಾಂಚಿ ಬಿ.ಎಂ. ಸುರೇಶ್, ಹಿರಿಯ ಉಪಾಧ್ಯಕ್ಷ ಉಮೇಶ್, ಗೌರವಾಧ್ಯಕ್ಷ ಕುಮಾರಸ್ವಾಮಿ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಡಾ. ಬಿ.ಎಂ. ಲಕ್ಷ್ಮೀಕಾಂತ್, ಕ್ರೀಡಾ ಕಾರ್ಯದರ್ಶಿ ಸಿ.ಕೆ. ರಘು ಇತರರು ಇದ್ದರು.

Share this article