ರಾಜ್ಯಮಟ್ಟದ ಬಾಸ್ಕೆಟ್‌ಬಾಲ್ ವಿಭಾಗಮಟ್ಟದ ಹಾಕಿ ಪಂದ್ಯಾವಳಿಗೆ ಚಾಲನೆ

KannadaprabhaNewsNetwork |  
Published : Oct 17, 2026, 01:30 AM IST
16ಎಚ್ಎಸ್ಎನ್4 :  | Kannada Prabha

ಸಾರಾಂಶ

ಕ್ರೀಡೆಯು ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವುದರ ಜತೆಗೆ ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ, ತಂಡದೊಂದಿಗೆ ಕೆಲಸ ಮಾಡುವ ಮನೋಭಾವ ಹಾಗೂ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಗುಣಗಳನ್ನು ಬೆಳೆಸುತ್ತದೆ. ಇಂತಹ ಪಂದ್ಯಾವಳಿಗಳು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದ ಸ್ಪರ್ಧೆಗಳಿಗೆ ಸಿದ್ಧರಾಗಲು ಉತ್ತಮ ವೇದಿಕೆಯಾಗಿವೆ ಎಂದರು. ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ವಿದ್ಯಾರ್ಥಿಗಳಿಗೆ ಪಂದ್ಯಾವಳಿಗಳಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ಅವಕಾಶ ಕಲ್ಪಿಸಲಾಗಿದೆ. ಕ್ರೀಡಾಕೂಟ ಸುಗಮವಾಗಿ ನಡೆಯಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಕ್ರೀಡಾಪಟುಗಳು ಮತ್ತು ತಂಡಗಳ ವ್ಯವಸ್ಥಾಪಕರಿಗೆ ಅನುಕೂಲಕರ ವ್ಯವಸ್ಥೆ ಮಾಡಲಾಗಿದೆ.

ಕನ್ನಡಪ್ರಭ ವಾರ್ತೆ ಹಾಸನ

ಯುವ ಕ್ರೀಡಾಪಟುಗಳ ಪ್ರತಿಭೆ ಅನಾವರಣಗೊಳಿಸುವ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಬಾಸ್ಕೆಟ್‌ಬಾಲ್ ಮತ್ತು ಮೈಸೂರು ವಿಭಾಗಮಟ್ಟದ ಬಾಸ್ಕೆಟ್‌ಬಾಲ್ ಹಾಗೂ ಹಾಕಿ ಪಂದ್ಯಾವಳಿಗಳಿಗೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಲರಾಮ್ ಚಾಲನೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿರುವ ಈ ಕ್ರೀಡಾಕೂಟದಲ್ಲಿ ೧೪ ಮತ್ತು ೧೭ ವರ್ಷ ವಯೋಮಿತಿಯ ಬಾಲಕ-ಬಾಲಕಿಯರ ತಂಡಗಳು ಭಾಗವಹಿಸಿವೆ. ಮೈಸೂರು ವಿಭಾಗದ ಎಂಟು ಜಿಲ್ಲೆಗಳಿಂದ ಸುಮಾರು ೫೦೦ರಿಂದ ೬೦೦ ವಿದ್ಯಾರ್ಥಿ ಕ್ರೀಡಾಪಟುಗಳು ಹಾಗೂ ತಂಡಗಳ ವ್ಯವಸ್ಥಾಪಕರು ಆಗಮಿಸಿದ್ದು, ಜಿಲ್ಲಾ ಕ್ರೀಡಾಂಗಣ ಕ್ರೀಡಾಸಂಭ್ರಮಕ್ಕೆ ಸಾಕ್ಷಿಯಾಯಿತು.ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಲರಾಮ್ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆ ಮಹತ್ವದ ಪಾತ್ರ ವಹಿಸುತ್ತದೆ. ಕ್ರೀಡೆಯು ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವುದರ ಜತೆಗೆ ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ, ತಂಡದೊಂದಿಗೆ ಕೆಲಸ ಮಾಡುವ ಮನೋಭಾವ ಹಾಗೂ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಗುಣಗಳನ್ನು ಬೆಳೆಸುತ್ತದೆ. ಇಂತಹ ಪಂದ್ಯಾವಳಿಗಳು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದ ಸ್ಪರ್ಧೆಗಳಿಗೆ ಸಿದ್ಧರಾಗಲು ಉತ್ತಮ ವೇದಿಕೆಯಾಗಿವೆ ಎಂದರು. ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ವಿದ್ಯಾರ್ಥಿಗಳಿಗೆ ಪಂದ್ಯಾವಳಿಗಳಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ಅವಕಾಶ ಕಲ್ಪಿಸಲಾಗಿದೆ. ಕ್ರೀಡಾಕೂಟ ಸುಗಮವಾಗಿ ನಡೆಯಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಕ್ರೀಡಾಪಟುಗಳು ಮತ್ತು ತಂಡಗಳ ವ್ಯವಸ್ಥಾಪಕರಿಗೆ ಅನುಕೂಲಕರ ವ್ಯವಸ್ಥೆ ಮಾಡಲಾಗಿದೆ.ರಾಜ್ಯಮಟ್ಟದ ೧೪ ಮತ್ತು ೧೭ ವರ್ಷ ವಯೋಮಿತಿಯ ಬಾಲಕ-ಬಾಲಕಿಯರ ಬಾಸ್ಕೆಟ್‌ಬಾಲ್ ಪಂದ್ಯಾವಳಿಗಳು ಅ.೧೭ ಮತ್ತು ೧೮ರಂದು ನಡೆಯಲಿದ್ದು, ವಿಭಾಗಮಟ್ಟದ ಬಾಸ್ಕೆಟ್‌ಬಾಲ್ ಹಾಗೂ ಹಾಕಿ ಪಂದ್ಯಾವಳಿಗಳೂ ಕ್ರೀಡಾಪಟುಗಳ ಉತ್ಸಾಹದ ನಡುವೆ ನಡೆಯಲಿವೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಆನಂದಮೂರ್ತಿ, ಡಯಟ್ ಉಪನಿರ್ದೇಶಕ (ಅಭಿವೃದ್ಧಿ) ಹಾಗೂ ಪ್ರಾಂಶುಪಾಲ ರುದ್ರೇಶ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಂ.ಎಸ್. ನಿಂಗಯ್ಯ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಸನದಲ್ಲಿ ಧಾರಾಕಾರ ಮಳೆ ಹಿನ್ನೆಲೆ ರೈತರಿಗೆ ಸಂತಸ
ತಾರ್ಕಿಕ ಚಿಂತನೆ ಹಾಗೂ ಸಮಸ್ಯೆ ಪರಿಹರಿಸುವ ಕೌಶಲ ಬೆಳೆಸಿಕೊಳ್ಳಿ