ಕನ್ನಡಪ್ರಭ ವಾರ್ತೆ ಕೋಲಾರಕ್ರೀಡಾ ಉತ್ಸಾಹಕ್ಕೆ ವಯಸ್ಸಿನ ಅಂತರವಿಲ್ಲ ಎಂಬುವುದನ್ನು ಇಂದಿನ ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಕ್ರೀಡಾಕೂಟ ಎಂದು ಸಂಸದ ಎಂ.ಮಲ್ಲೇಶ್‌ಬಾಬು ಅಭಿಪ್ರಾಯಪಟ್ಟರು.ನಗರದ ಸರ್.ಎಂ.ವಿ ಕ್ರೀಡಾಂಗಣದಲ್ಲಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಮತ್ತು ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್‌ನಿಂದ ೪೪ನೇ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಜ್ಯ ಮಟ್ಟದ ಪಂದ್ಯಾವಳಿ
ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾತನಾಡಿ, ಕ್ರೀಡಾಕೂಟದಲ್ಲಿ ರಾಜ್ಯದ ೨೫ ಜಿಲ್ಲೆಗಳಿಂದ ಸುಮಾರು ೭೦೦ಕ್ಕೂ ಹೆಚ್ಚು ಕ್ರೀಡಾ ಪಟುಗಳು ೩೦ ರಿಂದ ೯೫ ವರ್ಷದ ವಯೋಮಾನದವರು ಭಾಗವಹಿಸಿರುವುದು ಅಭಿನಂದನಾರ್ಹ, ಆರೋಗ್ಯದಲ್ಲಿ ಏನೇ ಸಮಸ್ಯೆಗಳಿದ್ದರೂ ಸಹ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿನ ಉತ್ಸಾಹ ಪ್ರದರ್ಶಿಸಿರುವುದು ಶ್ಲಾಘನೀಯ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು.
ಚಿನ್ನದಂತ ಹೃದಯವಂತರಿದ್ದಾರೆಕೋಲಾರ ಜಿಲ್ಲೆಗೆ ರಾಜ್ಯದ ಗಡಿ ಜಿಲ್ಲೆಗಳಿಂದ ಆಗಮಿಸಿ ಕ್ರೀಡಾಕೂಟದಲ್ಲಿ ಭಾಗವಹಿಸಿರುವುದನ್ನು ಸ್ವಾಗತಿಸಿದ ಅವರು, ಕೋಲಾರ ಜಿಲ್ಲೆಯಲ್ಲಿ ಚಿನ್ನ ಬರಿದಾದರೂ ಚಿನ್ನದಂತ ಹೃದಯವಂತರು ಇದ್ದಾರೆ, ವಿಶ್ವಕ್ಕೆ ಚಿನ್ನ, ಹಾಲು, ರೇಷ್ಮೆ, ಮಾವು ನೀಡಿದಂತ ಖ್ಯಾತ ಜಿಲ್ಲೆಯಾಗಿದೆ. ಸಂಸ್ಕೃತಿ, ಸಂಸ್ಕಾರಗಳ ಜೊತೆಗೆ ಕ್ರೀಡಾ ಜೀವನ ಅಳವಡಿಸಿಕೊಂಡಿರುವ ಜಿಲ್ಲೆಯಾಗಿದೆ ಎಂದರು.ರಾಜ್ಯದ ಬೆಳಗಾವಿ, ಶಿವಮೊಗ್ಗ, ಹಾಸನ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಉತ್ತರ ಕನ್ನಡ, ಧಾರವಾಡ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು.
ಅಸೋಸಿಯೇಷನ್ ಅಧ್ಯಕ್ಷ ವಿ.ಕೃಷ್ಣರೆಡ್ಡಿ, ಅಂತರರಾಷ್ಟ್ರೀಯ ಕ್ರೀಡಾಪಟು ಹಾಗೂ ಕಾರ್ಯದರ್ಶಿ ವಿ.ಮಾರಪ್ಪ, ಡಿ.ಐ.ಸಿ ಉಪನಿರ್ದೇಶಕ ರವಿಚಂದ್ರನ್, ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಎನ್.ವಿಜಯಲಕ್ಷ್ಮೀ, ರಾಜ್ಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಟಸೋಸಿಯೇಷನ್ ಅಧ್ಯಕ್ಷ ಡೇವಿಡ್ ಪ್ರೇಮನಾಥ್. ಕಾರ್ಯದರ್ಶಿ ಹೆಚ್.ಸಿ.ಷಣ್ಮುಗಂ, ಜಿಲ್ಲಾ ಖಜಾಂಜಿ ಕೆ.ಟಿ.ಸುರೇಶ್‌ಬಾಬು, ಜಿಲ್ಲಾ ಉಪಾಧ್ಯಕ್ಷ ಡಾ.ಜಿ.ಮುನಿಕೃಷ್ಣ ಇದ್ದರು. .