25ಕ್ಕೆ ರಾಜ್ಯ ಮಟ್ಟದ ಸಂವಿಧಾನ ಜಾಗೃತಿ ಸಮಾವೇಶ

KannadaprabhaNewsNetwork |  
Published : Feb 22, 2024, 01:51 AM IST
ಸಿಕೆಬಿ-6 ಸಂವಿಧಾನ ಜಾಗೃತಿ ಜಾಥಾದ ಬೃಹತ್ ಐಕ್ಯತಾ ಸಮಾವೇಶ ಕಾರ್ಯಕ್ರಮದ ಪೂರ್ವಸಿದ್ದತಾ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿದರು | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಕಳೆದ ಜನವರಿ 26 ರಿಂದ ಸಂವಿಧಾನ ಜಾಗೃತಿ ಜಾಥಾವು ಜಿಲ್ಲೆಯ 7 ತಾಲ್ಲೂಕುಗಳ ಗ್ರಾಮಪಂಚಾಯ್ತಿಗಳು ಹಾಗೂ ನಗರ ಸಳ್ಥೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ಮುಕ್ತಾಯವಾಗಿದೆ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಫೆ. 25 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ರಾಜ್ಯ ಮಟ್ಟದ ಸಂವಿಧಾನ ಜಾಗೃತಿ ಜಾಥದ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಭಾಗವಹಿಸುವ ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳಿಗೆ ಸಾರಿಗೆ ವ್ಯವಸ್ಥೆ ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸುವಂತೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ “ಸಂವಿಧಾನ ಜಾಗೃತಿ ಜಾಥಾದ ಬೃಹತ್ ಐಕ್ಯತಾ ಸಮಾವೇಶ” ಕಾರ್ಯಕ್ರಮದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ,ನಮ್ಮ ಜಿಲ್ಲೆಯಲ್ಲಿ ಕಳೆದ ಜನವರಿ 26 ರಿಂದ ಸಂವಿಧಾನ ಜಾಗೃತಿ ಜಾಥಾವು ಜಿಲ್ಲೆಯ 7 ತಾಲ್ಲೂಕುಗಳ ಗ್ರಾಮಪಂಚಾಯ್ತಿಗಳು ಹಾಗೂ ನಗರ ಸಳ್ಥೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ಮುಕ್ತಾಯವಾಗಿದೆ ಎಂದರು.

ಐಕ್ಯತಾ ಸಮಾವೇಶ ಮುಂದೂಡಿಕೆ ಸಂವಿಧಾನ ಜಾಗೃತಿ ಸಮಾವೇಶದ ಜಿಲ್ಲಾಮಟ್ಟದ ಐಕ್ಯತಾ ಸಮಾವೇಶವನ್ನು ಫೆಬ್ರವರಿ 23 ರಂದು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಹಂಮ್ಮಿಕೊಳ್ಳಲಾಗಿತ್ತು. ಈ ಜಿಲ್ಲಾ ಮಟ್ಟದ ಐಕ್ಯತಾ ಕಾರ್ಯಕ್ರಮವನ್ನು ಸದ್ಯಕ್ಕೆ ಸರ್ಕಾರ ಮೂಂದೂಡಿದೆ. ಮುಂದೆ ಸದರಿ ಕಾರ್ಯ ಕ್ರಮದ ದಿನಾಂಕವನ್ನು ಸರ್ಕಾರ ನಿಗದಿಪಡಿಸಿದಾಗ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು ಎಂದರು.

ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸಾರ್ವಜನಿಕರನ್ನು, ಜನಪ್ರತಿನಿಧಿಗಳನ್ನು ಕರೆದುಕೊಂಡು ಹೊಗಿ ಬರಲು 70 ಕೆ.ಎಸ್.ಆರ್.ಟಿ.ಸಿ ಬಸ್‌ಗಳನ್ನು ನಿಗದಿ ಮಾಡಲಾಗಿದೆ. ಅಲ್ಲಿ ಕುಡಿಯುವ ನೀರು, ಊಟ,ತಿಂಡಿ,ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಸಭೆಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ. ಎನ್.ಭಾಸ್ಕರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ತೇಜಾನಂದ ರೆಡ್ಡಿ,ಸಹಾಯಕ ನಿರ್ಧೇಶಕ ಶೇಷಾದ್ರಿ,ತಾ.ಪಂ.ಇಓ ಮಂಜುನಾಥ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಲವು ಜಿಲ್ಲೆಗಳಲ್ಲಿ ಶೀತಗಾಳಿ ತಾಪಮಾನ 5-7 ಡಿಗ್ರಿ ಇಳಿಕೆ
‘ಬಾಡಿಗೆ ತಾಯ್ತನ’ದಿಂದ ಮಗು : ವೃದ್ಧ ದಂಪತಿಯಿಂದ ಕೋರ್ಟ್‌ ಮೊರೆ