ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಕರ್ನಾಟಕ ರಾಜ್ಯ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ವತಿಯಿಂದ ಆಚರಿಸಲಾಗುತ್ತಿರುವ ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸುವರು. ಮೈಸೂರು ವಿಭಾಗದ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಮತ್ತು ಇತರ ಗಣ್ಯರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಯುವಜನತೆ ಮತ್ತು ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನ, ಇತಿಹಾಸ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಅರಿವು ಮೂಡಿಸಲು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಯುವ ಸಂಸತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಹಿಂದಿನ ಅವಧಿಯಲ್ಲಿ ಸಂವಿಧಾನ ಜಾತ್ರೆ ಸೇರಿದಂತೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿತ್ತು. ಈ ಬಾರಿ ಮೈಸೂರಿನಲ್ಲಿ ದೊಡ್ಡಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.ದಲಿತ ಸಂಘರ್ಷ ಸಮಿತಿಗಳ ವತಿಯಿಂದಲೂ ಸಮಾವೇಶ:
ಮೈಸೂರಿನಲ್ಲಿ ಗುರುವಾರ ನಡೆಯಲಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ಸಸ್ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಶಕ್ತಿ ಪ್ರದರ್ಶನ ಎಂಬಂತೆ ಬಿಂಬಿತವಾಗಿದೆ. ಮೊದಲು ಮಹದೇವಪ್ಪ ಅವರು, ದಲಿತ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ದಿನಾಚರಣೆ ಏರ್ಪಡಿಸುವುದಾಗಿ ಪ್ರಕಟಿಸಿದರು. ಇದಾದ ನಂತರ, ಸಿದ್ದರಾಮಯ್ಯ ಅವರು ಸರ್ಕಾರದ ವತಿಯಿಂದಲೇ ಸಂವಿಧಾನ ದಿನ ಆಚರಿಸುವುದಾಗಿ ಪ್ರಕಟಿಸಿದರು. ಅಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವ, ತಮ್ಮ ಪುತ್ರ ಡಾ.ಯತೀಂದ್ರ ನೇತೃತ್ವದಲ್ಲಿ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮೈಸೂರು ಭಾಗದ ಸಚಿವರು, ಶಾಸಕರ ಸಭೆ ನಡೆಸಿದರು. ಸಿದ್ದರಾಮಯ್ಯ ಕೂಡ ಈ ಸಂಬಂಧ ಮೈಸೂರಿನಲ್ಲಿ ಸಭೆ ನಡೆಸಿದರು. ಆದರೆ, ಈ ಸಭೆಗಳಿಗೆ ಮಹದೇವಪ್ಪ ಅವರು ಗೈರಾಗಿದ್ದರು.