ಇಂದು ಮೈಸೂರಲ್ಲಿ ರಾಜ್ಯಮಟ್ಟದ ಸಂವಿಧಾನ ದಿನ: ಶಾಸಕ ಎಆರ್‌ಕೆ

KannadaprabhaNewsNetwork |  
Published : Nov 26, 2026, 01:30 AM IST
ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು. | Kannada Prabha

ಸಾರಾಂಶ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ೨೦೨೬-೨೭ನೇ ಸಾಲಿನ ರಾಜ್ಯ ಮಟ್ಟದ ಸಂವಿಧಾನ ದಿನಾಚರಣೆಯನ್ನು ನ.೨೬ರಂದು ಮೈಸೂರು ವಿಭಾಗ ಮಟ್ಟದದಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ೨೦೨೬-೨೭ನೇ ಸಾಲಿನ ರಾಜ್ಯ ಮಟ್ಟದ ಸಂವಿಧಾನ ದಿನಾಚರಣೆಯನ್ನು ನ.೨೬ರಂದು ಮೈಸೂರು ವಿಭಾಗ ಮಟ್ಟದದಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ ಪರಮೇಶ್ವರ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಸಮಾಜ ಕಲ್ಯಾಣ ಸಚಿವ ಕೆ.ಎಚ್.ಮುನಿಯಪ್ಪ, ವಿರೋಧ ಪಕ್ಷದ ನಾಯಕರು, ಸಚಿವರು, ಸಂಸದರು, ಮೈಸೂರು, ಚಾಮರಾಜನಗರ, ಮಂಡ್ಯ. ಹಾಸನ, ಕೊಡಗು ಜಿಲ್ಲೆಗಳ ಶಾಸಕರು ಭಾಗವಹಿಸಲಿದ್ದಾರೆ ಎಂದರು.

ರಾಜ್ಯಸಭಾ ಸದಸ್ಯ ಸುರ್ಜಿತ್‌ಸಿಂಗ್ ಸುರ್ಜೇವಾಲಾ ಮುಖ್ಯ ಭಾಷಣ ಮಾಡಲಿದ್ದು, ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದ ಡಾ.ಎಚ್.ಸಿ.ಮಹದೇವಪ್ಪ ಸಂವಿಧಾನ ದಿನಾಚರಣೆಯನ್ನು ಪ್ರತಿ ವರ್ಷ ಒಂದೊಂದು ವಿಭಾಗ ಮಟ್ಟದಲ್ಲಿ ಆಚರಿಸಲು ತೀರ್ಮಾನಿಸಿದ್ದರು, ಅದರಂತೆ ಈ ಬಾರಿ ಮೈಸೂರಿನಲ್ಲಿ ಆಚರಿಸಲಾಗುತ್ತಿದೆ ಎಂದರು.

ಮೈಸೂರಿನಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ೨೦ ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದಾರೆ ಎಂದರು.

ಇದು ಯಾವುದೇ ಒಂದು ಪಕ್ಷಕ್ಕೆ ಸೇರಿದ ಕಾರ್ಯಕ್ರಮವಲ್ಲ, ಪಕ್ಷಾತೀತವಾಗಿ ಸಂವಿಧಾನಕ್ಕೆ ಗೌರವ ಕೊಡುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಯೋಗೇಶ್, ಪ್ರಧಾನ ಕಾರ್ಯದರ್ಶಿ ಆರ್.ಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ತೋಟೇಶ್, ಎಚ್.ವಿ.ಚಂದ್ರು ಇದ್ದರು.

ಬಿಎಂಟಿಸಿ ಬದಲಾವಣೆಗೆ ಸಿಎಂ ಬಳಿ ಮನವಿ: ಕೃಷ್ಣಮೂರ್ತಿ

ಬೆಂಗಳೂರು ನಗರಸಾರಿಗೆ ಬಿಎಂಟಿಸಿ ಅಧ್ಯಕ್ಷ ಸ್ಥಾನಕ್ಕೆ ಪಕ್ಷ ನನ್ನನ್ನು ಆಯ್ಕೆ ಮಾಡಿದೆ, ಇದು ಕೇವಲ ಬೆಂಗಳೂರಿಗೆ ಸೀಮಿತವಾಗಿದ್ದು, ಸಾರ್ವಜನಿಕ ಸೇವೆ ಮಾಡುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ವ್ಯಾಪ್ತಿಯ ಮಂಡಳಿ ಅಧ್ಯಕ್ಷ ಸ್ವಾನ ನೀಡಿದ್ದರೆ ಚೆನ್ನಾಗಿತ್ತು, ಬದಲಾವಣೆ ಬಗ್ಗೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುವೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಾದ್ಯಂತ ಸಂಚರಿಸಿ ಜನರ ಸೇವೆ ಮಾಡುವ ಮನೋಭಾವ ಹೊಂದಿದ್ದು ಆ ನಿಟ್ಟಿನಲ್ಲಿ ನಿಗಮ ಮಂಡಳಿ ಬದಲಾವಣೆ ಮಾಡಿಕೊಡುವಂತೆ ಸಿಎಂ ಬಳಿ ಚರ್ಚಿಸಲಾಗುವುದು. ಪಕ್ಷ ಇದರಲ್ಲೇ ಮುಂದುವರಿಯುವಂತೆ ಸೂಚಿಸಿದರೆ ಬಿಎಂಟಿಸಿ ಅಧ್ಯಕ್ಷ ಸ್ಥಾನವನ್ನು ನಿರ್ವಹಿಸುತ್ತೇನೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಸವೇಶ್ವರರ ಬಗ್ಗೆ ಅವಹೇಳನಕಾರಿ ಪದಬಳಕೆ ನಾಡಿಗೆ ಕಪ್ಪುಚುಕ್ಕೆ: ಡಾ.ಶ್ರೀ.ಗುರುಬಸವ ಮಹಾಸ್ವಾಮಿ
ಸರ್ಕಾರಿ ಕೆಲಸವಿದ್ರೂ ರೈತನ ವರಿಸಲಿದ್ದಾಳೆ ಲಕ್ಷ್ಮೀ