ಸುನಿತಾಗೆ ರಾಜ್ಯಮಟ್ಟದ ಗಮಕ ಕಲಾ ಶ್ರೀ ಪ್ರಶಸ್ತಿ

KannadaprabhaNewsNetwork |  
Published : Nov 14, 2026, 01:30 AM IST
ವಿದ್ಯಾರ್ಥಿಗಳೊಂದಿಗೆ ಮಹನ್ಯ ಪಾಟೀಲ ಸೆಲ್ಫಿ. | Kannada Prabha

ಸಾರಾಂಶ

State level Gamaka Kala Shri award to Sunita

ತರೀಕೆರೆ: ಹಾವೇರಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ತರೀಕೆರೆ ತಾಲೂಕು ಕಸಾಪ ಮಹಿಳಾ ಘಟಕ ಹಾಗೂ ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಸುನಿತಾ ಕಿರಣ್ ಅವರಿಗೆ ರಾಜ್ಯಮಟ್ಟದ ಗಮಕ ಕಲಾ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ತ್ರಿವರ್ಣ ಫೌಂಡೇಶನ್ ಅಧ್ಯಕ್ಷ ಪೊಟ್ಲೂರಿ ಹರಿಕೃಷ್ಣ ತಿಳಿಸಿದ್ದಾರೆ. ಗಮಕಿಗಳಾದ ಸುನಿತಾ ಕಿರಣ್ ಕಳೆದ ಬಾರಿ ನಡೆದ ಗಮಕ ವಿದ್ವತ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಮಂತ್ರಾಲಯದಲ್ಲಿ ನಡೆದ ಅಂತಾರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಸಿರಿ ಪ್ರಶಸ್ತಿ ಹಾಗೂ ದೇವನೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಗಮಕ ಸಾಹಿತ್ಯ ಸಮ್ಮೇಳನದಲ್ಲಿ ಗಮಕ ಶ್ರೀ ಪ್ರಶಸ್ತಿಗೆ ಪುರಸ್ಕೃತರಾಗಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಸರ್ವತೋಮುಖ ಪ್ರಗತಿಗೆ ಶ್ರಮಿಸಿ
ಎಸಿಯಾಗಿ ಪದೋನ್ನತಿ ಹೊಂದಿದ ತಹಸೀಲ್ದಾರ್‌ ಬೋಸಗಿ