4ರಿಂದ ರಾಜ್ಯಮಟ್ಟದ ಬಾಲಕಿಯರ ಫುಟ್ಬಾಲ್ ಪಂದ್ಯಾವಳಿ: ದಿನೇಶ್‌ ಶೆಟ್ಟಿ

KannadaprabhaNewsNetwork |  
Published : Jan 02, 2025, 12:32 AM IST
ಕ್ಯಾಪ್ಷನ31ಕೆಡಿವಿಜಿ36 ದಾವಣಗೆರೆಯಲ್ಲಿ ರಾಜ್ಯಮಟ್ಟದ ಬಾಲಕಿಯರ ಫುಟ್ಬಾಲ್ ಪಂದ್ಯಾವಳಿ ಆಯೋಜಿಸಿರುವ ಕುರಿತು ದಿನೇಶ ಕೆ.ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. | Kannada Prabha

ಸಾರಾಂಶ

ಜಿಲ್ಲಾ ಫುಟ್ಬಾಲ್‌ ಅಸೋಸಿಯೇಷನ್ ವತಿಯಿಂದ ಕ್ರೀಡೆಗಳ ಮೂಲಕ ಶಾಲಾ ಬಾಲಕಿಯರ ಸಬಲೀಕರಣಕ್ಕಾಗಿ ಖೇಲೋ ಇಂಡಿಯಾ ಅಡಿಯಲ್ಲಿ ನಗರದ ಲೂಡ್ಸ್ ಬಾಯ್ಸ್ ಸ್ಕೂಲ್ ಆವರಣದಲ್ಲಿ ಜ.4ರಿಂದ ಒಂದು ತಿಂಗಳ ಕಾಲ ರಾಜ್ಯಮಟ್ಟದ ಬಾಲಕಿಯರ ಪುಟ್ಬಾಲ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಹೇಳಿದ್ದಾರೆ.

- ವಿವಿಧ ಜಿಲ್ಲೆಗಳ 200ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗಿ - - - ದಾವಣಗೆರೆ: ಜಿಲ್ಲಾ ಫುಟ್ಬಾಲ್‌ ಅಸೋಸಿಯೇಷನ್ ವತಿಯಿಂದ ಕ್ರೀಡೆಗಳ ಮೂಲಕ ಶಾಲಾ ಬಾಲಕಿಯರ ಸಬಲೀಕರಣಕ್ಕಾಗಿ ಖೇಲೋ ಇಂಡಿಯಾ ಅಡಿಯಲ್ಲಿ ನಗರದ ಲೂಡ್ಸ್ ಬಾಯ್ಸ್ ಸ್ಕೂಲ್ ಆವರಣದಲ್ಲಿ ಜ.4ರಿಂದ ಒಂದು ತಿಂಗಳ ಕಾಲ ರಾಜ್ಯಮಟ್ಟದ ಬಾಲಕಿಯರ ಪುಟ್ಬಾಲ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 13 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ನಡೆಯುವ ಪಂದ್ಯಾವಳಿಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 200ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸುತ್ತಾರೆ. ಕ್ರೀಡಾಪಟುಗಳಿಗೆ ವಸತಿ, ಊಟೋಪಚಾರ ವ್ಯವಸ್ಥೆ ಕಲ್ಪಿಸಲಾಗುವುದು. ಪಂದ್ಯಾವಳಿ ವಿಜೇತ ತಂಡಗಳಿಗೆ ಪ್ರಥಮ ₹50 ಸಾವಿರ, ದ್ವಿತೀಯ ₹30 ಸಾವಿರ ಹಾಗೂ ತೃತೀಯ ಬಹುಮಾನವಾಗಿ ಪಾರಿತೋಷಕ ನೀಡಲಾಗುವುದು ಎಂದು ಹೇಳಿದರು.

ಜ.4ರ ಮಧ್ಯಾಹ್ನ 1 ಗಂಟೆಗೆ ಪಂದ್ಯಾವಳಿಗಳ ಉದ್ಘಾಟನೆಯನ್ನು ತಮ್ಮ ಅಧ್ಯಕ್ಷತೆಯಲ್ಲಿ ಎಸ್.ಎಸ್. ಕೇರ್ ಟ್ರಸ್ಟ್‌ನ ಟ್ರಸ್ಟಿ ಹಾಗೂ ಸಂಸದೆ ಡಾ.ಪ್ರಭಾ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್. ಪಾಲಿಕೆ ಮೇಯರ್ ಕೆ.ಚಮನ್‌ಸಾಬ್. ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕರು ಇನ್ನಿತರ ಗಣ್ಯರು ಭಾಗವಹಿಸುವರು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಎಸ್.ಕೆ. ಚಂದ್ರಶೇಖರ್, ವನಜಾಕ್ಷಿ, ಎ.ಮುಜಾಹಿದ್ ಖಾನ್, ವಂದನ, ನಿಸರ್ಗ, ಸೌರಭ ಐಗೂರ್, ಯುವರಾಜ್ ಇದ್ದರು.

- - - -31ಕೆಡಿವಿಜಿ36:

ದಾವಣಗೆರೆಯಲ್ಲಿ ರಾಜ್ಯಮಟ್ಟದ ಬಾಲಕಿಯರ ಫುಟ್ಬಾಲ್ ಪಂದ್ಯಾವಳಿ ಆಯೋಜಿಸಿರುವ ಕುರಿತು ದಿನೇಶ ಕೆ. ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!