ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಬ್ಬಡಿ ಪಂದ್ಯಾವಳಿ ಪೂರ್ವಭಾವಿ ಸಭೆ
ಕನ್ನಡಪ್ರಭ ವಾರ್ತೆ, ಕಡೂರುಅಕ್ಟೋಬರ್ 15ರಿಂದ ಕಡೂರು ಪಟ್ಟಣದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ವಿಭಾಗದ ರಾಜ್ಯ ಮಟ್ಟದ ಹಾಗೂ ಮೈಸೂರು ವಿಭಾಗೀಯ ಮಟ್ಟದ ಹೊನಲು-ಬೆಳಕಿನ ಕಬ್ಬಡಿ ಪಂದ್ಯಾವಳಿ ನಡೆಯಲಿವೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಬ್ಬಡಿ ಪಂದ್ಯಾವಳಿ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಟ್ಟದ ಹೊನಲು, ಬೆಳಕಿನ ಕಬ್ಬಡಿ ಪಂದ್ಯಾವಳಿ ಕಡೂರಿನ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿವೆ.
ಅ.15 ಮತ್ತು 16 ರಂದು ಮೈಸೂರು ವಿಭಾಗೀಯ ಮಟ್ಟದ 8 ಜಿಲ್ಲೆಗಳ ಪ್ರಾಥಮಿಕ, ಪ್ರೌಢಶಾಲೆ 640 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಪಂದ್ಯಾವಳಿಗಳು ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ನಡೆಯಲಿವೆ. ಅ.18 ಮತ್ತು 19 ರಂದು ರಾಜ್ಯ ಮಟ್ಟದ ಪ್ರಾಥಮಿಕ, ಪ್ರೌಢಶಾಲೆಗಳ 4 ವಿಭಾಗಗಳಿಂದ 340 ಕ್ರೀಡಾಪಟುಗಳು ಭಾಗವಹಿಸಲಿದ್ದು, 80ಕ್ಕೂ ಹೆಚ್ಚಿನ ತೀರ್ಪುಗಾರರು ಪಂದ್ಯಾವಳಿ ನಡೆಸಿಕೊಡಲಿದ್ದಾರೆ ಎಂದರು.ನಾಲ್ಕು ದಿನಗಳ ಪಂದ್ಯಾವಳಿಗೆ ಬರುವ ಕ್ರೀಡಾಪಟುಗಳಿಗೆ ಉಚಿತ ಊಟ, ವಸತಿ ಕಲ್ಪಿಸಲಾಗುವುದು. ಹೊನಲು ಬೆಳಕಿನ ಕ್ರೀಡಾಕೂಟ ವಾಗಿರುವ ಕಾರಣ ಜಿಲ್ಲಾಡಳಿತ, ತಾಲೂಕು ಆಡಳಿತ, ಶಿಕ್ಷಣ ಇಲಾಖೆ, ಪುರಸಭೆ ಹಾಗೂ ಕೇಂಬ್ರಿಡ್ಸ್ ಪಬ್ಲಿಕ್ ಸ್ಕೂಲ್ ಪುರ ಮತ್ತು ಎಲ್ಲ ಇಲಾಖೆಗಳ ಸಹಕಾರದಿಂದ ಪಂದ್ಯಾವಳಿ ಯಶಸ್ವಿಗೊಳಿಸಲು ಸಕಲ ಸಿದ್ದತೆ ನಡೆಯುತ್ತಿದೆ ಎಂದರು.ಕಾನಗೊಂಡನಹಳ್ಳಿ ಸರ್ಕಾರಿ ಶಾಲೆ ದೈಹಿಕ ಶಿಕ್ಷಕ ವೈ.ಸಿ.ಗೋಪಿ ಮಾಹಿತಿ ನೀಡಿ, ಬರುವ ಕ್ರೀಡಾಪಟುಗಳಿಗೆ ಗಣಪತಿ ಪೆಂಡಾಲ್ ಪಕ್ಕದ ಹಾಸ್ಟೆಲ್, ತೋಟಗಾರಿಕೆ ಇಲಾಖೆ ಮುಂದಿರುವ ಹಾಸ್ಟೆಲ್‍ಗಳಲ್ಲಿ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗಿದ್ದು ಸಮಾಜ ಕಲ್ಯಾಣ ಇಲಾಖೆ ಹೆಚ್ಚಿನ ಮುತುವರ್ಜಿ ವಹಿಸಲಿದ್ದಾರೆ.ತಾಲೂಕು ಕ್ರೀಡಾಂಗಣದಲ್ಲಿ ಕ್ರೀಡೆಗಳು ನಡೆಯಲಿದ್ದು ಮ್ಯಾಟ್ ವ್ಯವಸ್ಥೆ ಮಾಡಲಾಗುವುದು. ಕುಡಿಯುವ ನೀರು, ಸ್ವಚ್ಛತೆ ವ್ಯವಸ್ಥೆ ಕಡೂರು ಪುರಸಭೆ ಮಾಡಿಕೊಡಲಿದ್ದು. ಪೊಲೀಸ್ ಸಿಬ್ಬಂದಿ ವರ್ಗ ರಕ್ಷಣಾ ವ್ಯವಸ್ಥೆ ಮಾಡಲಿದ್ದಾರೆ. ಹೊನಲು ಬೆಳಕಿನ ಕ್ರೀಡೆಗೆ ಮೆಸ್ಕಾಂ ಇಲಾಖೆ ಬೆಳಕಿನ ವ್ಯವಸ್ಥೆ ಮಾಡಲಿದೆ. ಪಂದ್ಯದ ಯಶಸ್ಸಿಗೆ ತಾಲೂಕು ಮತ್ತು ಜಿಲ್ಲೆಯ ಎಲ್ಲ ದೈಹಿಕ ಶಿಕ್ಷಕರ ಸಹಕಾರವಿದೆ ಎಂದರು.
ಸಭೆಯಲ್ಲಿ ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ, ತಾಪಂ. ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ಕಡೂರು-ಬೀರೂರು ಕ್ಷೇತ್ರಶಿಕ್ಷಣಾಧಿಕಾರಿ ಸಿದ್ಧ ರಾಜನಾಯ್ಕ, ರುದ್ರಪ್ಪ, ಶಿಕ್ಷಕರು ಸೇರಿದಂತೆ ಸಭೆಯಲ್ಲಿ ಅಧಿಕಾರಿಗಳು ಹಾಜರಿದ್ದರು.4ಕೆಕೆಡಿಯು1.ಕಡೂರು ಶಾಸಕ ಕೆ.ಎಸ್.ಆನಂದ್ ಅಧ್ಯಕ್ಷತೆಯಲ್ಲಿ ರಾಜ್ಯ ಮತ್ತು ವಿಭಾಗೀಯ ಮಟ್ಟದ ಹೊನಲು-ಬೆಳಕಿನ ಕಬ್ಬಡಿ ಪಂದ್ಯಾವಳಿಗಳ ಪೂರ್ವಭಾವಿ ಸಭೆ ನಡೆಯಿತು.