ರಾಜ್ಯ ಮಟ್ಟದ ಬೆಳ್ಳಿ ಬಟ್ಟಲಿನ ಕಬಡ್ಡಿ ಪಂದ್ಯಾವಳಿಗೆ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಭಾನುವಾರ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಇಲ್ಲಿನ ಇಂದಿರಾ ಗಾಂಧಿ ಅಭಿಮಾನಿಗಳ ಬಳಗದ ವತಿಯಿಂದ ಸಾಕಮ್ಮನ ಬಂಗಲೆ ಮುಂಭಾಗದ ಮೈದಾನದಲ್ಲಿ ನಡೆದ ೩೯ನೇ ವರ್ಷದ ರಾಜ್ಯ ಮಟ್ಟದ ಬೆಳ್ಳಿ ಬಟ್ಟಲಿನ ಕಬಡ್ಡಿ ಪಂದ್ಯಾವಳಿಗೆ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಭಾನುವಾರ ಚಾಲನೆ ನೀಡಿದರು.ಗ್ರಾಮೀಣ ಕ್ರೀಡೆ ಇಂದು ದಿನದಿಂದ ದಿನಕ್ಕೆ ಹೆಚ್ಚು ಪ್ರಚಲಿತವಾಗುತ್ತಿದ್ದು, ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಕೆಲಸ ನಮ್ಮಿಂದಲೇ ಆಗಬೇಕು. ಪ್ರತಿ ದಿನ ಸ್ವಲ್ಪ ಸಮಯವನ್ನು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸುವುದರಿಂದ ದೈಹಿಕ ಮತ್ತು ಮಾನಸಿಕ ಸಧೃಡತೆಗೆ ಸಹಕಾರಿಯಾಗಲಿದೆ. ಅಲ್ಲದೆ, ಇಂತಹ ಕ್ರೀಡಾಕೂಟಗಳಿಂದ ಸಾಕಷ್ಟು ಗ್ರಾಮೀಣ ಪ್ರತಿಭೆಗಳು ಸಮಾಜದ ಮುಖ್ಯವಾಹಿನಿಗೆ ಬರಲು ಸಹಕಾರಿಯಾಗಲಿದ್ದು, ಹೆಚ್ಚು ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ, ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ ಮಾಡಿಕೊಡಬೇಕೆಂದು ಮನವಿ ಮಾಡಿದರು. ಯಾವುದೇ ಕ್ರೀಡೆಯಲ್ಲಿ ಬಹುಮನಕ್ಕಾಗಿ ಪಾಲ್ಗೊಳ್ಳದೆ, ಸಿಕ್ಕ ಅವಕಾಶವನ್ನು ಬಳಸಿಕೊಳ್ಳಬೇಕು. ಸೋಲು ಗೆಲುವು ಕ್ರೀಡೆಯ ಅವಿಭಾಜ್ಯವಾಗಿದ್ದು, ಕ್ರೀಡಾಪಟುಗಳು ಎಲ್ಲವನ್ನು ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕೆಂದರು. ದಿ. ಇಂದಿರಾ ಗಾಂಧಿ ಭಾವಚಿತ್ರಕ್ಕೆ ಪುಷ್ಟ ನಮನ ಸಲ್ಲಿಸಿದ ಭುವನ ಮಂದಾರ ಕಂಪನಿ ನಿರ್ದೇಶಕ ಮಸಗೋಡು ಗ್ರಾಮದ ಲೋಕೇಶ್ ಮಾತನಾಡಿ, ಇಂದಿರಾ ಗಾಂಧಿಯವರ ಸಾಧನೆಗಳನ್ನು ಇಂದಿಗೂ ಪ್ರಪಂಚದಲ್ಲಿ ನೆನೆಯಲಾಗುತ್ತದೆ. ದೀನ ದಲಿತರ ಅಭ್ಯಧಯಕ್ಕಾಗಿ ಸಾಕಷ್ಟು ಯೋಜನೆಗಳನ್ನು ತಂದು ದೇಶದಲ್ಲಿ ಅಭಿವೃದ್ಧಿ ಮಾಡಿದ್ದಾರೆ. ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು ಎಂದರು.ಸಂಘದ ಅಧ್ಯಕ್ಷ ಎಚ್.ಎ. ನಾಗರಾಜು ಮಾತನಾಡಿ, ಸಂಘವು ಸ್ಥಾಪನೆಯಾಗಿ ೪೧ ವರ್ಷಗಳಾಗಿದ್ದು, ಕಳೆದ ೩೮ ವರ್ಷಗಳಿಂದ ರಾಜ್ಯಮಟ್ಟದ ಕಬಡ್ಡಿ ಪಂದಾವಳಿಯನ್ನು ಆಯೋಜಿಸಿಕೊಂಡು ಬರಲಾಗಿದೆ ಎಂದರು. ಪಂದ್ಯಾವಳಿಯಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ವಿಭಾಗ, ೨೦ ವರ್ಷ ವಯೋಮಾನದೊಳಗಿನ ಯುವಕರು ಮತ್ತು ಸಾರ್ವಜನಿಕ ವಿಭಾಗದಲ್ಲಿ ಪಂದ್ಯಾವಳಿ ನಡೆಯಿತು. ದಲಿತ ಮುಖಂಡ ಡಿ.ಎಸ್. ನಿರ್ವಾಣಪ್ಪ, ಕಳಲೆ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಬ್ರಮಣಿ, ಕರ್ಕಳ್ಳಿ ಇಸಾಕ್, ಸಂಘದ ಪ್ರಧಾನ ಕಾರ್‍ಯದರ್ಶಿ ಎಚ್.ಬಿ. ರಾಜಪ್ಪ, ಸಹಕಾರ್ಯದರ್ಶಿ ಎಚ್.ಜಿ. ರವೀಂದ್ರ, ಗೌರವ ಕಾರ್‍ಯದರ್ಶಿ ಜಗದೀಶ್, ಸಂಚಾಲಕ ಅಜೇಯ ಮತ್ತಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.