ಕನ್ನಡಪ್ರಭ ವಾರ್ತೆ ಕಂಪ್ಲಿ
ಕಾರ್ಯಕ್ರಮದಲ್ಲಿ ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಮಾತನಾಡಿ, ಪಾರಂಪರಿಕ ಕರಕುಶಲ ಕಲೆಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಲು ಸರ್ಕಾರ ನಿರಂತರ ಯೋಜನೆ ರೂಪಿಸಬೇಕು. ಚಿತ್ರಗಾರ ಅವರ ಕಲೆ ಕೇವಲ ಜನಪದ ಪರಂಪರೆಯಲ್ಲ, ಅದು ನಮ್ಮ ಸಾಂಸ್ಕೃತಿಕ ಆಸ್ತಿಯಾಗಿದೆ. ಅದನ್ನು ಪೋಷಿಸಿ ಜತನೆ ಮಾಡುವ ಕಾರ್ಯ ಸರ್ಕಾರದ ಹೊಣೆಗಾರಿಕೆ ಎಂದು ತಿಳಿಸಿದರು.
ಕಸಾಪ ಜಿಲ್ಲಾಧ್ಯಕ್ಷ ನಿಷ್ಟಿ ರುದ್ರಪ್ಪ ಮಾತನಾಡಿ, ಆಡಳಿತಾತ್ಮಕವಾಗಿ ಜಿಲ್ಲೆ ವಿಭಜನೆಗೊಂಡಿದ್ದರೂ ಸಾಹಿತ್ಯ ಹಾಗೂ ಸಾಂಸ್ಕೃತಿಕ ಹಿನ್ನೆಲೆ ಬಳ್ಳಾರಿ ಅಖಂಡವಾಗಿದೆ. ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಖಂಡ ಬಳ್ಳಾರಿ ಜಿಲ್ಲೆಯನ್ನು ಪ್ರತಿನಿಧಿಸಿ ನಡೆಯಲಿದೆ. ಕರಕುಶಲ ಕಲೆಗಳಲ್ಲಿ ಕಿನ್ನಾಳ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಪರಶುರಾಮಪ್ಪ ಚಿತ್ರಗಾರರ ಕೊಡುಗೆ ಅಪಾರ ಎಂದು ಶ್ಲಾಘಿಸಿದರು.ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಚಲುವರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಜಯನಗರ ಜನಪದ ಹಿನ್ನೆಲೆಯ ಕರಕುಶಲ ಕಲೆಗಳನ್ನು ಪರಶುರಾಮಪ್ಪ ಚಿತ್ರಗಾರ ಜೀವಂತಗೊಳಿಸಿದ್ದರು. ಇತ್ತೀಚೆಗೆ ನಾಲ್ಕು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಅವರ ಕಲೆಯನ್ನು ಅಧ್ಯಯನ ಮಾಡಿದ್ದಾರೆ. ಈ ಕಲಾ ಮಾದರಿಗಳನ್ನು ಸಂಗ್ರಹಿಸಿ ಪ್ರದರ್ಶನಗೊಳಿಸುವುದು, ಉನ್ನತ ಮಟ್ಟದಲ್ಲಿ ಸಂಶೋಧನೆ ನಡೆಸುವುದು ಹಾಗೂ ಪೋಷಿಸುವುದು ಕಾಲದ ಅಗತ್ಯ ಎಂದು ಅಭಿಪ್ರಾಯಪಟ್ಟರು.
ಅವರ ಜೀವಮಾನ ಶ್ರೇಷ್ಠ ಶಿಲ್ಪಕಲೆಯನ್ನು ಟ್ರಸ್ಟ್ ವತಿಯಿಂದ ವಿಶೇಷವಾಗಿ ಗುರುತಿಸಲಾಯಿತು.