ಅಕ್ಟೋಬರ್‌ 25ರಂದು ರಾಜ್ಯ ಮಟ್ಟದ ಪತ್ರಿಕಾ ಸಂಪಾದಕರ ಸಮಾವೇಶ

KannadaprabhaNewsNetwork |  
Published : Oct 23, 2026, 01:45 AM IST
ಶಿವಯೋಗಿ ಮಹಾನುಭಾವಿಮಠ | Kannada Prabha

ಸಾರಾಂಶ

ರಾಣಿಬೆನ್ನೂರು ನಗರದ ತರಳುಬಾಳು ತಾಂತ್ರಿಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಅ. 25ರಂದು ಬೆಳಗ್ಗೆ 10.30ಕ್ಕೆ ಶಿಡ್ಲು ಪತ್ರಿಕೆಯ ಸುವರ್ಣ ಮಹೋತ್ಸವ ಅಂಗವಾಗಿ ರಾಜ್ಯ ಮಟ್ಟದ ಪತ್ರಿಕಾ ಸಂಪಾದಕರ ಸಮಾವೇಶ ನಡೆಯಲಿದೆ ಎಂದು ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಉಪಾಧ್ಯಕ್ಷ, ಹಿರಿಯ ಪತ್ರಕರ್ತ ಶಿವಯೋಗಿ ಮಹಾನುಭಾವಿಮಠ ಹೇಳಿದರು.

ಹಾವೇರಿ: ರಾಣಿಬೆನ್ನೂರು ನಗರದ ತರಳುಬಾಳು ತಾಂತ್ರಿಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಅ. 25ರಂದು ಬೆಳಗ್ಗೆ 10.30ಕ್ಕೆ ಶಿಡ್ಲು ಪತ್ರಿಕೆಯ ಸುವರ್ಣ ಮಹೋತ್ಸವ ಅಂಗವಾಗಿ ರಾಜ್ಯ ಮಟ್ಟದ ಪತ್ರಿಕಾ ಸಂಪಾದಕರ ಸಮಾವೇಶ ನಡೆಯಲಿದೆ ಎಂದು ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಉಪಾಧ್ಯಕ್ಷ, ಹಿರಿಯ ಪತ್ರಕರ್ತ ಶಿವಯೋಗಿ ಮಹಾನುಭಾವಿಮಠ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ರಾಣಿಬೆನ್ನೂರು ಶ್ರೀ ರಾಮಕೃಷ್ಣ-ವಿವೇಕಾನಂದ ಆಶ್ರಮದ ಅಧ್ಯಕ್ಷ ಪ್ರಕಾಶಾನಂದಜೀ ಮಹಾರಾಜ ಸಾನ್ನಿಧ್ಯ ವಹಿಸಲಿದ್ದಾರೆ. ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಸಂಪಾದಕ ಅಜಿತ್ ಹನುಮಕ್ಕನವರ ಉದ್ಘಾಟಿಸಲಿದ್ದು, ಶಿಕಾರಿಪುರದ ಸರ್ವಜ್ಞ ಪತ್ರಿಕೆಯ ಸಂಪಾದಕ ಎಸ್.ಬಿ. ಮಠದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಸಚಿವರಾದ ರುದ್ರಪ್ಪ ಲಮಾಣಿ, ಸಂತೋಷ ಲಾಡ್, ರಾಣಿಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ, ಹುಬ್ಬಳ್ಳಿ-ಧಾರವಾಡ ಪಶ್ಚಿಮ ಶಾಸಕ ಅರವಿಂದ ಬೆಲ್ಲದ, ಮಾಜಿ ಶಾಸಕ ಅರುಣಕುಮಾರ ಪೂಜಾರ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೆಷಾ ಖಾನಂ, ಲೋಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಶೋಕ ಹಾರನಹಳ್ಳಿ, ಸಂಯುಕ್ತ ಕರ್ನಾಟಕದ ಸಂಪಾದಕ ಮಹಾಬಲ ಸೀತಾಳಬಾವಿ, ಡಾ.ಬಂಡು ಕುಲಕರ್ಣಿ, ಇಂದಿರಾಗಾಂಧಿ ಮುಕ್ತ ವಿವಿ ವಿಶ್ರಾಂತ ನಿರ್ದೇಶಕ ಡಾ.ಜಿ.ಎಚ್. ಇಮ್ರಾಪುರ, ರಶ್ಮಿ ಎಸ್., ರಾಷ್ಟ್ರೀಯ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಜಿ.ಸಿ. ಲೋಕೇಶ, ಪ್ರೊ. ಓಂಕಾರ ಕಾಕಡೆ, ಎಂ.ಎಂ. ವಿಕಾಸ, ಎಸ್.ಬಿ. ವಸ್ತ್ರಮಠ, ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ, ನಿರ್ಮಲಾ ಎಲಿಗಾರ, ಮಂಜುನಾಥ ಡೊಳ್ಳಿನ, ಮಂಜುನಾಥ ಗೌರಕ್ಕಳವರ, ಎಂ.ಎಸ್. ಅರಕೇರಿ, ಬಸವರಾಜ ಪಾಟೀಲ, ಸುರೇಶ ಸಿ.ಟಿ., ಜಂಬುನಾಥ ಗುತ್ತಿ, ಡಾ.ಬಿ. ಮಹೇಶ್ವರಪ್ಪ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಈಗಾಗಲೇ ಸಮಾವೇಶದಲ್ಲಿ ಪಾಲ್ಗೊಳ್ಳಲು 126 ಜನ ರಾಜ್ಯದ ವಿವಿಧ ಪತ್ರಿಕೆಗಳ ಸಂಪಾದಕರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಕೆ.ಎಸ್. ನಾಗರಾಜ, ಎಂ. ಚಿರಂಜೀವಿ, ಮುರುಗೇಶ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಮತಗಟ್ಟೆಗೆ ತೆರಳಿದ ಸಿಬ್ಬಂದಿ
ಕಿಮ್ಸ್ ಆಸ್ಪತ್ರೆಗೆ ರೈಲ್ವೆ ಸೇತುವೆ ನಿರ್ಮಾಣಕ್ಕೆ ವರದಿ ಕೇಳಿದ ರೈಲ್ವೆ ಇಲಾಖೆ