ಶಿವಮೊಗ್ಗ: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಜ.23 ರಂದು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರಸಪಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಶ್ರೀ ಆದಿಚುಂಚನಗಿರಿ ಸ್ವತಂತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್.ವಿ.ಗುರುರಾಜ್ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭಾರತ ಸಂವಿಧಾನದ ವಜ್ರಮಹೋತ್ಸವ ಮತ್ತು ಸ್ವಾಮಿ ವಿವೇಕಾನಂದರ 162ನೇ ಜಯಂತ್ಯುತ್ಸವ, ರಾಷ್ಟ್ರೀಯ ಯುವ ದಿನದ ಅಂಗವಾಗಿ ಶಿವಮೊಗ್ಗ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಪದವಿಪೂರ್ವ ಕಾಲೇಜಿನಲ್ಲಿ ಈ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.ಮಕ್ಕಳಲ್ಲಿ ಅಡಗಿರುವ ಪತಿಭೆಯನ್ನು ಗುರುತಿಸಿ ಪೋತ್ಸಾಹಿಸುವ ಉದ್ದೇಶದಿಂದ, ಪ್ರೌಢಶಾಲೆಯ 8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ರಸಪಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಸ್ಪರ್ಧೆಯು ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ರಾಜ್ಯಾಡಳಿತ ಮತ್ತು ಸಂವಿಧಾನ, ಇತಿಹಾಸ ಮತ್ತು ಭೂಗೋಳ ಶಾಸ್ತ್ರ, ವಿಜ್ಞಾನ- ತಂತ್ರಜ್ಞಾನ, ಕ್ರೀಡೆ ಮನರಂಜನೆ ಹಾಗೂ ಪ್ರಚಲಿತ ವಿದ್ಯಮಾನಗಳ ವಿಷಯ ಕುರಿತಂತೆ ಇರಲಿದೆ ಎಂದು ವಿವರಿಸಿದರು.
ಸ್ಪರ್ಧೆಯ ವಿಜೇತರಿಗೆ ಪ್ರಥಮ ಬಹುಮಾನವಾಗಿ 30 ಸಾವಿರ ನಗದು ಹಾಗೂ ಟ್ರೋಫಿ ನೀಡಲಾಗುವುದು. ದ್ವಿತೀಯ ಬಹುಮಾನ 20 ಸಾವಿರ ನಗದು ಹಾಗೂ ಟೋಫಿ, ತೃತೀಯ ಬಹುಮಾನವಾಗಿ 10 ಸಾವಿರ ನಗದು ಹಾಗೂ ಟ್ರೋಫಿ, ನಾಲ್ಕು, ಐದು ಮತ್ತು ಆರನೇ ಸ್ಥಾನ ಪಡೆದ ತಂಡಗಳಿಗೆ ತಲಾ 5 ಸಾವಿರ ನಗದು ಬಹುಮಾನ. ಉಪಾಂತ್ಯ ಸುತ್ತಿಗೆ ಆಯ್ಕೆಯಾದ ಮೊದಲ 125 ತಂಡಗಳ ಸ್ಪರ್ಧಿಗಳಿಗೆ ಬೆಳ್ಳಿ ಪದಕಗಳನ್ನು ಪ್ರಶಸ್ತಿ ಪತ್ರಗಳೊಂದಿಗೆ ನೀಡಲಾಗುವುದು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಗುತ್ತದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಶಾಲೆಯ ಗುರುತಿನ ಚೀಟಿ ತರಬೇಕು ಎಂದರು.ಭಾಗವಹಿಸುವ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿ ಸಂಚಾಲಕರಿಗೆ ಮಧ್ಯಾಹ್ನ ಭೋಜನದ ವ್ಯವಸ್ಥೆ ಇರುತ್ತದೆ. ಸ್ಪರ್ಧೆಯಲ್ಲಿ ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಕೆಳಕಂಡ ಉಪನ್ಯಾ ಸಕರನ್ನು ಸಂಪರ್ಕಿಸಬಹುದು. ನಟರಾಜ್ 7483710963, ಆರ್.ವಾಣಿ 9986679015, ಡಾ.ಕುಪ್ಪೇರಾವ್ ಕುಲಕರ್ಣಿ- 6362819745 ಅನ್ನು ಸಂಪರ್ಕಿಸಬಹುದು ಎಂದು ಹೇಳಿದರು.ಸ್ವಾಮೀಜಿಗಳಿಂದ ಚಾಲನೆ:ಈ ಕಾರ್ಯಕ್ರಮದ ಸಾನ್ನಿದ್ಯವನ್ನು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಜಗದ್ಗುರು ಡಾ.ನಿರ್ಮಲಾ ನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯ ದರ್ಶಿಗಳಾದ ಪ್ರಸನ್ನನಾಥ ಸ್ವಾಮೀಜಿ, ಆದಿಚುಂಚನಗಿರಿ ಶಿವಮೊಗ್ಗ ಶಾಖಾ ಮಠದ ಶ್ರೀ ಸಾಯಿನಾಥ ಸ್ವಾಮೀಜಿ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಡಿಡಿಪಿಐ ಉಪ ನಿರ್ದೇಶಕ ಎಸ್.ಆರ್.ಮಂಜುನಾಥ್, ಪದವಿಪೂರ್ವ ಇಲಾಖೆಯ ಉಪ ನಿರ್ದೇಶಕ ಚಂದ್ರಪ್ಪ ಎಸ್.ಗುಂಡಪಲ್ಲಿ ಮತ್ತಿತರರು ಭಾಗವಹಿಸುವರು.ಅದೇ ದಿನ ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು ಸಾನ್ನಿಧ್ಯ ವಹಿಸಲಿದ್ದು, ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪ್ರಸನ್ನನಾಥ ಸ್ವಾಮೀಜಿ, ಆದಿಚುಂಚನಗಿರಿ ಶಿವಮೊಗ್ಗ ಶಾಖಾ ಮಠದ ಸಾಯಿನಾಥ ಸ್ವಾಮೀಜಿ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದರು.
ನೋಂದಣಿ ಶುಲ್ಕ ಇಲ್ಲ:ಭಾಗವಹಿಸುವ ಸ್ಪರ್ಧಿಗಳಿಗೆ ಯಾವುದೇ ನೋಂದಣಿ ಶುಲ್ಕ ಇರುವುದಿಲ್ಲ. ಕ್ಯುಆರ್ ಕೋಡ್ ಬಳಸಿ ನೋಂದಣಿ ಮಾಡಿಕೊಳ್ಳಲು ಅವಕಾಶ ಇರುತ್ತದೆ. ಸ್ಪರ್ಧೆ ನಡೆಯುವ ದಿನಾಂಕದಂದು ಬೆಳಗ್ಗೆ 9ರಿಂದ 10ರವರಗೆ ನೇರವಾಗಿ ನೋಂದಣಿ ಮಾಡಿಕೊಳ್ಳಬಹುದು ಎಂದು ತಿಳಿಸಿದರು.