ಸುಂಟಿಕೊಪ್ಪ: ಕೊಡಗರಹಳ್ಳಿ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಎ.ಎಸ್.ಶ್ರೀಶಾ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
------------------------------------
ಇಂದು ರಸ್ತೆ ಸುರಕ್ಷತಾ ಮಾಸಾಚರಣೆಸುಂಟಿಕೊಪ್ಪ: ರಸ್ತೆ ಸುರಕ್ಷತೆ, ಜೀವದ ರಕ್ಷೆ ಎಂಬ ಧ್ಯೇಯ ವಾಕ್ಯದೊಂದಿಗೆ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ನಡೆಯಲಿದೆ.
ಕೊಡಗು ಜಿಲ್ಲೆಯ ಪ್ರಾದೇಶಿಕ ಸಾರಿಗೆ ಕಚೇರಿಯು ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು, ಫೆ.13 ರಂದು ಸುಂಟಿಕೊಪ್ಪ ವಾಹನ ಚಾಲಕರ ನಿಲ್ದಾಣದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗರಾಜ ಆಚಾರ್ಯ, ಸಾರಿಗೆ ತನಿಖಾಧಿಕಾರಿ ಶಿವಕುಮಾರ್ ಸೇರಿದಂತೆ ಪೊಲೀಸ್ ಮತ್ತು ಸಾರ್ವಜನಿಕರು, ವಾಹನ ಚಾಲಕರು ಮತ್ತು ಆಟೋಚಾಲಕರು ಪಾಲ್ಗೊಳ್ಳಬೇಕು ಎಂದು ಪ್ರಾದೇಶಿಕ ಸಾರಿಗೆ ಪ್ರಕಟಣೆ ಮನವಿ ಮಾಡಿದೆ.