ಕನ್ನಡಪ್ರಭ ವಾರ್ತೆ ತಾಳಿಕೋಟೆ
ಪಟ್ಟಣದ ಎಸ್.ಎಸ್.ವಿದ್ಯಾ ಸಂಸ್ಥೆಗೆ ಭೇಟಿ ನೀಡಿ ಕ್ರೀಡಾಕೂಟಕ್ಕೆ ಸಂಬಂಧಿಸಿದ ವ್ಯವಸ್ಥೆ ಪರಿಶೀಲಿಸಿದರು. ಈ ವೇಳೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯಮಟ್ಟದ ಬಾಲಕ ಬಾಲಕಿಯರ ೨೦೨೪ -೨೫ ನೇ ಸಾಲಿನ ವಾಲಿಬಾಲ್ ಕ್ರೀಡಾಕೂಟವು ಕೇವಲ ಹೆಚ್.ಎಸ್ ಪಾಟೀಲ್ ಕಾಲೇಜಿಗೆ ಸೀಮಿತವಲ್ಲ. ಎಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ಎಚ್.ಎಸ್.ಪಾಟೀಲರೊಂದಿಗೆ ಕೈಜೋಡಿಸಬೇಕು. ರಾಜ್ಯದ ಸುಮಾರು ೩೨ ಜಿಲ್ಲೆಗಳಿಂದ ಕ್ರೀಡಾಪಟುಗಳು ಆಗಮಿಸುತ್ತಿರುವದರಿಂದ ಹಾಗೂ ಸಚಿವರು, ಶಾಸಕರು ಅಲ್ಲದೇ ಶಿಕ್ಷಣ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಆಗಮಿಸುತ್ತಿದ್ದಾರೆ. ಈ ಕ್ರೀಡಾಕೂಟವು ರಾಷ್ಟ್ರಮಟ್ಟದ ಕ್ರೀಡಾಕೂಟದ ರೀತಿಯಲ್ಲಿ ನಡೆಯಬೇಕು ಎಂದರು.
ಜಿಲ್ಲಾ ದೈಹಿಕ ಉಪನ್ಯಾಸಕರ ಸಂಘದ ಅಧ್ಯಕ್ಷೆ ಎಸ್.ಎಸ್.ದುರ್ಗಿ ಮಾತನಾಡಿ, ಜಿಲ್ಲಾ ದೈಹಿಕ ಉಪನ್ಯಾಸಕರ ಸಂಘ ಅಲ್ಲದೇ ಜಿಲ್ಲೆಯ ಎಲ್ಲಾ ಪ.ಪೂ ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಕ್ರೀಡಾಕೂಟಕ್ಕೆ ಸಹಕರಿಸುತ್ತೇವೆ. ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟ ಮಾದರಿಯ ಕ್ರೀಡಾಕೂಟವಾಗಿ ಕಾಣಬೇಕು. ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದ್ದು, ದೈಹಿಕ ಶಿಕ್ಷಣದ ಎಲ್ಲ ಉಪನ್ಯಾಸಕರು ಯಶಸ್ವಿಗೆ ಸನ್ನದರಾಬೇಕು ಎಂದು ಹೇಳಿದರು.ವಿಜಯಪುರ ಪದವಿಪೂರ್ವ ಶಿಕ್ಷಣ ಇಲಾಖೆಯ ಶಾಖಾಧಿಕಾರಿ ಪ್ರಕಾಶ ಗೊಂಗಡಿ ಮಾತನಾಡಿ, ಈ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟವು ಇದೇ ಶಿಕ್ಷಣ ಸಂಸ್ಥೆಗೆ ಒದಗಿ ಬಂದಿರುವದು ಸಂತಸ ತಂದಿದೆ. ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಕೂಟದ ಮಾದರಿಯಲ್ಲಿ ತಯಾರಿ ಮಾಡಿಕೊಂಡಿರುವದು ಉತ್ತಮವಾಗಿದೆ ಎಂದು ತಿಳಿಸಿದರು.ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ಎಸ್.ಪಾಟೀಲ(ಯಾಳಗಿ) ಮಾತನಾಡಿ, ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟ ಕೇವಲ ಎಚ್ ಎಸ್ ಪಾಟೀಲರಿಂದ ಯಶಸ್ವಿಗೊಳಿಸಲು ಆಗಲ್ಲ. ಇದಕ್ಕೆ ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು.
ಎಮ್.ಎಸ್.ಬಿರಾದಾರ, ದೈಹಿಕ ಉಪನ್ಯಾಸಕ ಎಸ್.ಬಿ.ಮಂಗ್ಯಾಳ್ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ಎಂ.ಎಸ್.ರಾಯಗೊಂಡ, ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನ ಪಿಯು ಕಾಲೇಜ್ ಪ್ರಾಚಾರ್ಯರು, ಹಿರಿಯ ಉಪನ್ಯಾಸಕರು, ಶಿಕ್ಷಕರು ಉಪಸ್ಥಿತರಿದ್ದರು.
ಶಿಕ್ಷಕ ಬಿ.ಐ.ಹಿರೇಹೊಳಿ ನಿರೂಪಿಸಿ, ವಂದಿಸಿದರು.