ಬಾಲಕ-ಬಾಲಕಿಯರ ರಾಜ್ಯ ಮಟ್ಟದ ಭಾರ ಎತ್ತುವ ಸ್ಪರ್ಧೆ

KannadaprabhaNewsNetwork |  
Published : Nov 09, 2026, 02:45 AM IST
ಫೋಟೋ: 6ಪಿಟಿಆರ್- ಸುಳ್ಯಪದವು ಸುಳ್ಯಪದವಿನಲ್ಲಿ ರಾಜ್ಯ ಮಟ್ಟದ ಭಾರ ಎತ್ತುವ ಸ್ಪರ್ಧೆ ನಡೆಯಿತು.  | Kannada Prabha

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಸರ್ವೋದಯ ಪ್ರೌಢಶಾಲೆ ಸುಳ್ಯಪದವು ಇವುಗಳ ಸಂಯುಕ್ತ ಆಶ್ರಯದಲ್ಲಿ 14ರಿಂದ 17ರ ವಯೋಮಾನದ ಬಾಲಕ-ಬಾಲಕಿಯರ ರಾಜ್ಯ ಮಟ್ಟದ ಭಾರ ಎತ್ತುವ ಸ್ಪರ್ಧೆ ಸುಳ್ಯಪದವು ಸರ್ವೋದಯ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.

ಪುತ್ತೂರು ; ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಸರ್ವೋದಯ ಪ್ರೌಢಶಾಲೆ ಸುಳ್ಯಪದವು ಇವುಗಳ ಸಂಯುಕ್ತ ಆಶ್ರಯದಲ್ಲಿ 14ರಿಂದ 17ರ ವಯೋಮಾನದ ಬಾಲಕ-ಬಾಲಕಿಯರ ರಾಜ್ಯ ಮಟ್ಟದ ಭಾರ ಎತ್ತುವ ಸ್ಪರ್ಧೆ ಸುಳ್ಯಪದವು ಸರ್ವೋದಯ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಗುರುವಾರ ನಡೆದ ಉದ್ಘಾಟನಾ ​ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ವೋದಯ ವಿದ್ಯಾ ವರ್ಧಕ ಸಂಘದ ಅಧ್ಯಕ್ಷ ಶಿವರಾಮ ಹೆಚ್.ಡಿ ವಹಿಸಿದ್ದರು. ​ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ಕುಮಾರ್ ಹಿಂಗಾರ ಅರಳಿಸಿ ಕ್ರೀಡೆಗೆ ಚಾಲನೆ ನೀಡಿದರು. ​ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಶುಭ ಹಾರೈಸಿದರು. ​ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಷ್ಣುನಾರಾಯಣ ಹೆಬ್ಬಾರ್ ಮಾತನಾಡಿದರು.

​ಇದೇ ಸಂದರ್ಭದಲ್ಲಿ ಭಾರ ಎತ್ತುವ ಸ್ಪರ್ಧೆಯ ರಾಷ್ಟ್ರೀಯ ಚಿನ್ನದ ಪದಕ ವಿಜೇತರಾದ ಕೃಷ್ಣಪ್ಪ ಗೌಡ ಡೆಂಬಾಳೆ ಮತ್ತು ಪುಷ್ಪರಾಜ್ ಹೆಗ್ಡೆ ಅವರನ್ನು ಗೌರವಿಸಲಾಯಿತು. ಸಭಾ ಕಾರ್ಯಕ್ರಮಕ್ಕೂ ಮುನ್ನ ವಿದ್ಯಾಭಿಮಾನಿಗಳಿಂದ ಮುಖ್ಯ ರಸ್ತೆಯಲ್ಲಿ ಭವ್ಯ ಮೆರವಣಿಗೆ ನಡೆಯಿತು. ಸುಳ್ಯಪದವು ಮಂದಿರದಿಂದ ತಂದ ಕ್ರೀಡಾ ಜ್ಯೋತಿಯ ಮೂಲಕ ಸಮಾರಂಭದ ದೀಪವನ್ನು ಪ್ರಜ್ವಲಿಸಲಾಯಿತು.

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸಿಲ್ವಿಯಾ ಎ.ಆರ್. ಕ್ಯಾಸ್ಟಲಿನಾ, ಪುತ್ತೂರು ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು, ಮಹೇಶ್ ರೈ ಅಕೊಂತ್ತಿಮಾರು, ಪುತ್ತೂರು ತಾಲೂಕು ಪಂಚಾಯತ್ ಮಾಜಿ ಸದಸ್ಯ ರಾಧಾಕೃಷ್ಣ ಬೋರ್ಕರ್, ಎಳಿಯಾಸ್ ಪಿಂಟೋ, ತರಬೇತುದಾರ ಕೃಷ್ಣಪ್ಪ ಗೌಡ, ತಾಲೂಕು ಸಮನ್ವಯಾಧಿಕಾರಿ ನವೀನ್, ಜಿಲ್ಲಾ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಕರುಣಾಕರ ಮಣಿಯಾಣಿ, ಸಂಚಾಲಕ ಮಹಾದೇವ ಭಟ್, ಮೋಹನ್ ದಾಸ್ ರೈ ನಾಟೇಕಲ್ಲು, ಉದ್ಯಮಿ ಜನಾರ್ದನ ಪೂಜಾರಿ ಪದಡ್ಕ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಆನಂದ ಪಾದೆಗದ್ದೆ, ಅಬ್ದುಲ್ ಖಾದರ್, ಮಕ್ಕಳ ಸುರಕ್ಷಾ ಸಮಿತಿಯ ಪ್ರಕಾಶ್ ಮರದಮೂಲೆ ಹಾಗೂ ತೀರ್ಪುಗಾರ ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು.​ಸಂಸ್ಥೆಯ ಮುಖ್ಯ ಶಿಕ್ಷಕ ಸುಖೇಶ್ ರೈ ಸ್ವಾಗತಿಸಿದರು. ಜಿಲ್ಲಾ ದೈಹಿಕ ಶಿಕ್ಷಣ ಗ್ರೇಡ್-1 ಅಧ್ಯಕ್ಷ ಕರುಣಾಕರ ಮಣಿಯಾಣಿ ಧನ್ಯವಾದ ಸಮರ್ಪಿಸಿದರು. ಶಿಕ್ಷಕಿಯರಾದ ಪ್ರಶಾಂತಿ ರೈ ಮತ್ತು ದೇವಿ ಪ್ರಕಾಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

​ರಾಜ್ಯ ಮಟ್ಟದ ಭಾರ ಎತ್ತುವ ಸ್ಪರ್ಧೆಯ ಫಲಿತಾಂಶ

​ಸಮಗ್ರ ಪ್ರಶಸ್ತಿ: ಬಾಲಕ ಮತ್ತು ಬಾಲಕಿಯರ ಎರಡೂ ವಿಭಾಗಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ.

​ದ್ವಿತೀಯ ಸ್ಥಾನ: ಬಾಲಕರ ವಿಭಾಗದಲ್ಲಿ ಉಡುಪಿ ಜಿಲ್ಲೆ ಹಾಗೂ ಬಾಲಕಿಯರ ವಿಭಾಗದಲ್ಲಿ ಹಾವೇರಿ ಜಿಲ್ಲೆ ದ್ವಿತೀಯ ಸ್ಥಾನ ಪಡೆದವು.

​ಆತಿಥೇಯ ಸುಳ್ಯಪದವು ಸರ್ವೋದಯ ಪ್ರೌಢಶಾಲೆಯು ಬಾಲಕಿಯರ ವಿಭಾಗದಲ್ಲಿ 3 ಚಿನ್ನದ ಪದಕ ಹಾಗೂ 1 ಬೆಳ್ಳಿ ಪದಕ ಸೇರಿದಂತೆ ಒಟ್ಟು 4 ಪದಕಗಳನ್ನು ತನ್ನದಾಗಿಸಿಕೊಂಡಿದೆ. ಚಿನ್ನದ ಪದಕ ವಿಜೇತರು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟನ್ ಕಬ್ಬಿಗೆ ₹1,000 ಹೆಚ್ಚುವರಿ ದರ ನಿಗದಿಗೆ ಪಟ್ಟು
ಸಾಯಿಪ್ರಿಯಾ ಸಕ್ಕರೆ ಕಾರ್ಖಾನೆ ತಕ್ಷಣ ಆರಂಭಿಸಿ