ರಾಜ್ಯಮಟ್ಟದ ಟೂರ್ನಿಗಳು ಗ್ರಾಮೀಣ ಹಾಗೂ ನಗರ ಪ್ರದೇಶದ ಮಹಿಳೆಯರಲ್ಲಿ ಕ್ರೀಡೆ ಮೇಲಿನ ಆಸಕ್ತಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಕ್ರೀಡೆಯನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳಲು ಯುವತಿಯರಿಗೆ ಪ್ರೇರಣೆ ನೀಡುವುದರ ಜೊತೆಗೆ, ಮಹಿಳೆಯರು ಕೇವಲ ಮನೆಮಟ್ಟಕ್ಕೆ ಸೀಮಿತವಾಗದೇ ಕ್ರೀಡಾ ಕ್ಷೇತ್ರದಲ್ಲಿಯೂ ಸಾಧನೆ ಮಾಡಬಹುದು ಎಂಬ ಸಕಾರಾತ್ಮಕ ಸಂದೇಶವನ್ನು ಈ ಟೂರ್ನಿ ನೀಡುತ್ತದೆ. ಮಹಿಳಾ ಕ್ರಿಕೆಟ್‌ಗೆ ಇನ್ನಷ್ಟು ಪ್ರೋತ್ಸಾಹ, ಸಮಾನ ಅವಕಾಶ ಹಾಗೂ ಗುರುತಿನ ಅಗತ್ಯವಿದ್ದು, ಟೈಮ್ಸ್ ಕಪ್ ಈ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಇಂತಹ ನಿರಂತರ ಟೂರ್ನಿಗಳ ಮೂಲಕ ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟ ಹಾಗೂ ಅಂತಾರಾಷ್ಟ್ರೀಯ ಆಟಗಾರ್ತಿಯರು ಹೊರಬರುವ ಸಾಧ್ಯತೆ ಹೆಚ್ಚಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಹಾಸನ: ಮಹಿಳಾ ಕ್ರೀಡಾಪಟುಗಳಲ್ಲಿ ಕ್ರಿಕೆಟ್ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿಸುವುದು, ಆತ್ಮವಿಶ್ವಾಸ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಟೈಮ್ಸ್ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ರಾಜ್ಯಮಟ್ಟದ ಮಹಿಳಾ ಲೆದರ್ ಬಾಲ್ ಕ್ರಿಕೆಟ್ ಟೂರ್ನಿ ‘ಟೈಮ್ಸ್ ಕಪ್’ (ಸೀಸನ್ ೨) ಅನ್ನು ಆಯೋಜಿಸಲಾಗಿದೆ ಎಂದು ಕೆಎಸ್‌ಐ ಸದಸ್ಯ ಸುರೇಶ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಈ ಪ್ರತಿಷ್ಠಿತ ಕ್ರಿಕೆಟ್ ಟೂರ್ನಿ ಜನವರಿ ೨೨ರಿಂದ ೨೭, ೨೦೨೬ರವರೆಗೆ ನಡೆಯಲಿದ್ದು, ಹಾಸನದ ಸರ್ಕಾರಿ ಸೈನ್ಸ್ ಕಾಲೇಜು ಮೈದಾನದಲ್ಲಿ ಪಂದ್ಯಗಳು ಆಯೋಜಿಸಲ್ಪಡಲಿವೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಒಟ್ಟು ೮ ಮಹಿಳಾ ಕ್ರಿಕೆಟ್ ತಂಡಗಳು ಭಾಗವಹಿಸಲಿದ್ದು, ಅನುಭವಸಂಪನ್ನ ಹಾಗೂ ಯುವ ಪ್ರತಿಭಾವಂತ ಆಟಗಾರ್ತಿಯರು ತಮ್ಮ ಕೌಶಲ್ಯ ಪ್ರದರ್ಶಿಸಲು ಉತ್ತಮ ವೇದಿಕೆ ಒದಗಲಿದೆ ಎಂದರು. ಇತ್ತೀಚಿನ ದಿನಗಳಲ್ಲಿ ಮಹಿಳಾ ಕ್ರಿಕೆಟ್‌ಗೆ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಇಂತಹ ರಾಜ್ಯಮಟ್ಟದ ಟೂರ್ನಿಗಳು ಗ್ರಾಮೀಣ ಹಾಗೂ ನಗರ ಪ್ರದೇಶದ ಮಹಿಳೆಯರಲ್ಲಿ ಕ್ರೀಡೆ ಮೇಲಿನ ಆಸಕ್ತಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಕ್ರೀಡೆಯನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳಲು ಯುವತಿಯರಿಗೆ ಪ್ರೇರಣೆ ನೀಡುವುದರ ಜೊತೆಗೆ, ಮಹಿಳೆಯರು ಕೇವಲ ಮನೆಮಟ್ಟಕ್ಕೆ ಸೀಮಿತವಾಗದೇ ಕ್ರೀಡಾ ಕ್ಷೇತ್ರದಲ್ಲಿಯೂ ಸಾಧನೆ ಮಾಡಬಹುದು ಎಂಬ ಸಕಾರಾತ್ಮಕ ಸಂದೇಶವನ್ನು ಈ ಟೂರ್ನಿ ನೀಡುತ್ತದೆ. ಮಹಿಳಾ ಕ್ರಿಕೆಟ್‌ಗೆ ಇನ್ನಷ್ಟು ಪ್ರೋತ್ಸಾಹ, ಸಮಾನ ಅವಕಾಶ ಹಾಗೂ ಗುರುತಿನ ಅಗತ್ಯವಿದ್ದು, ಟೈಮ್ಸ್ ಕಪ್ ಈ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಇಂತಹ ನಿರಂತರ ಟೂರ್ನಿಗಳ ಮೂಲಕ ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟ ಹಾಗೂ ಅಂತಾರಾಷ್ಟ್ರೀಯ ಆಟಗಾರ್ತಿಯರು ಹೊರಬರುವ ಸಾಧ್ಯತೆ ಹೆಚ್ಚಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಪಂದ್ಯಾವಳಿ ಕುರಿತು ಹೆಚ್ಚಿನ ಮಾಹಿತಿಗಾಗಿ ವಿನಯ್ ೭೭೬೦೬೮೧೮೧೬ ಹಾಗೂ ಅರ್ಜುನ್ (ಟೈಮ್ಸ್) ೮೦೫೦೬೮೬೬೪೭ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅರ್ಜುನ್, ರಮೇಶ್, ವಿನಯ್, ಟೈಮ್ಸ್ ಸ್ಪೋರ್ಟ್ಸ್ ಅಕಾಡೆಮಿ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.