27ರಂದು ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಮಹಿಳಾ ಗೋಷ್ಠಿ

KannadaprabhaNewsNetwork |  
Published : Oct 23, 2024, 12:36 AM ISTUpdated : Oct 23, 2024, 12:37 AM IST
೧೧ | Kannada Prabha

ಸಾರಾಂಶ

ಜನಪದ ಸಾಹಿತ್ಯದಲ್ಲಿ ಸ್ತ್ರೀ ವಿಷಯದ ಬಗ್ಗೆ ಡಾ.ಮಂಜುಳಾ ಕಲ್ಬುರ್ಗಿ, ವಚನ ಸಾಹಿತ್ಯದಲ್ಲಿ ಸ್ತ್ರೀ ವಿಷಯದ ಬಗ್ಗೆ ಕನ್ನಡ ಪ್ರಾಧ್ಯಾಪಕಿ ಡಾ. ಜಗದೇವಿ ತಿಬಶೆಟ್ಟಿ, ಆಧುನಿಕ ಸಾಹಿತ್ಯದಲ್ಲಿ ಸ್ತ್ರೀ ವಿಷಯದ ಬಗ್ಗೆ ಕವಯಿತ್ರಿ ರತ್ನಾ ಬಡವನಹಳ್ಳಿ ವಿಷಯ ಮಂಡನೆ ಮಾಡಲಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ ವತಿಯಿಂದ ‘ಸಾಹಿತ್ಯದಲ್ಲಿ ಭಾರತೀಯ ಮಹಿಳೆ’ ವಿಷಯದ ಬಗ್ಗೆ ರಾಜ್ಯ ಮಟ್ಟದ ಮಹಿಳಾ ಗೋಷ್ಠಿ ಅ.27ರಂದು ಬೆಳಗ್ಗೆ 9.30ಕ್ಕೆ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಬಳಿಯ ಸೂರ್ಯಕಮಲ್ ಸಭಾಂಗಣದಲ್ಲಿ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅಭಾಸಾಪ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ ಭಟ್, ಆಸರೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ.ಆಶಾಜ್ಯೋತಿ ರೈ ಅವರು ಗೋಷ್ಠಿ ಉದ್ಘಾಟಿಸಲಿದ್ದಾರೆ. ಪ್ರಾಧ್ಯಾಪಕಿ ಡಾ.ಪ್ರಮೀಳಾ ರಾವ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಶಿಕ್ಷಕಿ ವಿನುತಾ ಕೆ.ಆರ್. ರಾಮನಗರ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ ಎಂದು ಹೇಳಿದರು.

ಬೆಳಗ್ಗೆ 11ಕ್ಕೆ ಕವಯತ್ರಿ ಸಮ್ಮಿಲನ ನಡೆಯಲಿದ್ದು, ನಾಡಿನ 20 ಕವಯತ್ರಿಯರು ಭಾಗವಹಿಸಲಿದ್ದಾರೆ. ಸಾಹಿತಿ ಶೈಲಜಾ ಗೋರನಮನೆ ಅವಲೋಕನ ನಡೆಸಲಿದ್ದಾರೆ. ಕನ್ನಡ ಸಾಹಿತ್ಯದಲ್ಲಿ ಸ್ತ್ರೀ ವಿಷಯದ ಬಗ್ಗೆ ಮಧ್ಯಾಹ್ನ 2ರಿಂದ ಸಾಹಿತ್ಯ ಗೋಷ್ಠಿ ನಡೆಯಲಿದ್ದು, ವಚನ ಸಾಹಿತಿ ಡಾ.ಶಕುಂತಲಾ ಗೋಪಶೆಟ್ಟಿ ರಾಯಚೂರು ಉಪನ್ಯಾಸ ನೀಡಲಿದ್ದಾರೆ. ಜನಪದ ಸಾಹಿತ್ಯದಲ್ಲಿ ಸ್ತ್ರೀ ವಿಷಯದ ಬಗ್ಗೆ ಡಾ.ಮಂಜುಳಾ ಕಲ್ಬುರ್ಗಿ, ವಚನ ಸಾಹಿತ್ಯದಲ್ಲಿ ಸ್ತ್ರೀ ವಿಷಯದ ಬಗ್ಗೆ ಕನ್ನಡ ಪ್ರಾಧ್ಯಾಪಕಿ ಡಾ. ಜಗದೇವಿ ತಿಬಶೆಟ್ಟಿ, ಆಧುನಿಕ ಸಾಹಿತ್ಯದಲ್ಲಿ ಸ್ತ್ರೀ ವಿಷಯದ ಬಗ್ಗೆ ಕವಯಿತ್ರಿ ರತ್ನಾ ಬಡವನಹಳ್ಳಿ ವಿಷಯ ಮಂಡನೆ ಮಾಡಲಿದ್ದಾರೆ.

ಮಧ್ಯಾಹ್ನ 3.30ಕ್ಕೆ ಸಾಹಿತಿ ಶಾಂತಾ ನಾಗಮಂಗಲ ಸಮಾರೋಪ ಭಾಷಣ ಮಾಡಲಿದ್ದಾರೆ. ಅಭಾಸಾಪ ಬೆಳ್ತಂಗಡಿ ತಾಲೂಕು ಸಮಿತಿ ಹಾಗೂ ಮಹಿಳಾ ಘಟಕದ ಸಹಯೋಗದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಸಾಹಿತಿಗಳು, ಕವಿಗಳು, ಸಾಹಿತ್ಯಾಸಕ್ತರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.ಅಭಾಸಾಪ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಡಾ.ಮಾಧವ ಎಂ.ಕೆ., ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಮಹಿಳಾ ಗೋಷ್ಠಿಯ ಸ್ವಾಗತ ಸಮಿತಿ ಅಧ್ಯಕ್ಷೆ ಡಾ.ಆಶಾಜ್ಯೋತಿ ರೈ, ಉಪಾಧ್ಯಕ್ಷೆ ವೀಣಾ ಟಿ. ಶೆಟ್ಟಿ, ಕಾರ್ಯದರ್ಶಿ ವಿದ್ಯಾಶ್ರೀ ಅಡೂರ್ ಇದ್ದರು.

PREV

Recommended Stories

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ