- ನಾಳೆ, ನಾಡಿದ್ದು ಯುವಜನೋತ್ಸವ । ಜಾಥಾಕ್ಕೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಸಾಥ್
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ಜ.5 ಮತ್ತು 6ರಂದು ನಗರದ ಬಾಪೂಜಿ ಎಂಬಿಎ ಮೈದಾನದಲ್ಲಿ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ. ಇದರ ಅಂಗವಾಗಿ ಶುಕ್ರವಾರ ಮೋತಿ ವೀರಪ್ಪ ಕಾಲೇಜು ಸಮೀಪದ ಗುಂಡಿ ವೃತ್ತದಿಂದ ಸಾವಿರಾರು ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಥಾ ನಡೆಯಿತು.
ಜಿಪಂ ಸಿಇಒ ಡಾ.ಸುರೇಶ್ ಬಿ. ಇಟ್ನಾಳ್ ಗುಂಡಿ ವೃತ್ತದಲ್ಲಿ ಜಾಥಾಗೆ ಚಾಲನೆ ನೀಡಿ ಮಾತನಾಡಿ, ದಾವಣಗೆರೆ ನಗರ ಹಾಗೂ ಜಿಲ್ಲೆಯ ಯುವಕ-ಯುವತಿಯರು ಹಾಗೂ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು 2 ದಿನಗಳ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸಬೇಕು. ಜಾನಪದ ನೃತ್ಯ, ಜಾನಪದ ಗೀತೆ, ವಿಜ್ಞಾನ ವಸ್ತುಪ್ರ ದರ್ಶನ, ಕವನ ರಚನೆ, ಕಥೆ ಬರೆಯುವುದು, ಚಿತ್ರಕಲೆ, ಘೋಷಣ ಸ್ಪರ್ಧೆಗಳ ಜೊತೆಗೆ ಸಂಜೆ ನಡೆಯುವ ಮಣಿಕಾಂತ್ ಕದ್ರಿ ಅವರ ಸಂಗೀತ ಕಾರ್ಯಕ್ರಮ ವೀಕ್ಷಣೆ ಮಾಡುವ ಮೂಲಕ ಕಾರ್ಯಕ್ರಮ ಸದುಪಯೋಗ ಮಾಡಿಕೊಳ್ಳಲು ಸಲಹೆ ನೀಡಿದರು.ಜಾಥಾದಲ್ಲಿ ಸುಮಾರು 3000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ, ವಿವಿಧ ಘೋಷವಾಕ್ಯಗಳ ಫಲಕ ಹಿಡಿದು ಘೋಷಣೆಗಳ ಕೂಗಿದರು. ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ನೀರನ್ನು ಉಳಿಸಿ ಭೂಮಿಯನ್ನು ರಕ್ಷಿಸಿ, ''''''''ಸ್ವಚ್ಛ ಮತ್ತು ಹಸಿರು, ಅದು ನಮ್ಮ ಕನಸು'''''''' ಮತ್ತು ''''''''ಉಸಿರಾಡಲು ಪ್ರೀತಿಸಿ, ಮರಗಳನ್ನು ಉಳಿಸಿ'''''''' ''''''''ಮಾಲಿನ್ಯವನ್ನು ಉಳಿಸಿ, ಬದುಕಲು ಪ್ರಾರಂಭಿಸಿ''''''''. ವಿದ್ಯಾರ್ಥಿನಿಯರು ''''''''ಹಣದಾಸೆಗೆ ಬಳಿಯಾಗದೆ ಯೋಚಿಸಿ ಮತ ಚಲಾಯಿಸಿ, ಪ್ರಜಾಪ್ರಭುತ್ವ ಗಟ್ಟಿಗೊಳಿಸಿ ಎಂದು ಕೂಗುತ್ತಾ ಸಾಗಿದರು.
ಜಾಥಾವು ಗುಂಡಿ ವೃತ್ತದಿಂದ ವಿದ್ಯಾರ್ಥಿ ಭವನ, ಡಾ.ಅಂಬೇಡ್ಕರ್ ವೃತ್ತ, ಜಯದೇವ ವೃತ್ತ, ಮಹಾನಗರ ಪಾಲಿಕೆ ಮುಂಭಾಗದಿಂದ ಎವಿಕೆ ರಸ್ತೆಯ ಮೂಲಕ ಮೋತಿ ವೀರಪ್ಪ ಕಾಲೇಜಿನ ಆವರಣ ತಲುಪಿತು. ಜಾಥಾದಲ್ಲಿ 75 ವರ್ಷದ ಹಿರಿಯ ವ್ಯಕ್ತಿ ನಾಗರಾಜ ಭಾಗವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.
- - - -3ಕೆಡಿವಿಜಿ35, 36: