ಗ್ಯಾರಂಟಿಗಳಿಂದ ರಾಜ್ಯ ದಿವಾಳಿ: ಆರೋಪ

KannadaprabhaNewsNetwork |  
Published : Jun 22, 2024, 12:45 AM IST
ವಿಜೆಪಿ ೨೧ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೈತ್ರಿ ಪಕ್ಷದ ವತಿಯಿಂದ  ಪ್ರತಿಭಟನೆಯಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷ ಸುನೀಲ್,ತಾಲ್ಲೂಕು ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಬಿಜೆಪಿ ಟೌನ್ ಅಧ್ಯಕ್ಷ ಆರ್.ಸಿ.ಮಂಜುನಾಥ್ , ಪ್ರಧಾನ ಕಾರ್ಯದರ್ಶಿ ಡಿ.ಎಂ.ಮುನೀಂದ್ರ , ಜಿಲ್ಲಾ ಓ ಬಿ ಸಿ ಘಟಕದ ಅಧ್ಯಕ್ಷ ಕನಕರಾಜು, ಅಜಿತ್ ಕುಮಾರ್,  ಮತ್ತಿತರರು | Kannada Prabha

ಸಾರಾಂಶ

ವಿಜಯಪುರ: ಗ್ಯಾರಂಟಿಗಳ ಹೆಸರಿನಲ್ಲಿ ವೋಟು ಪಡೆಯಲು ಬಡವರು, ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹೊರಿಸಿದ ಕಾಂಗ್ರೆಸ್ ಸರ್ಕಾರ ಅಧಿಕಾರ ನಡೆಸುವ ನೈತಿಕತೆ ಕಳೆದುಕೊಂಡಿದೆ ಎಂದು ಬಿಜೆಪಿ ಟೌನ್ ಅಧ್ಯಕ್ಷ ಆರ್.ಸಿ.ಮಂಜುನಾಥ್‌ ಹೇಳಿದರು.

ವಿಜಯಪುರ: ಗ್ಯಾರಂಟಿಗಳ ಹೆಸರಿನಲ್ಲಿ ವೋಟು ಪಡೆಯಲು ಬಡವರು, ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹೊರಿಸಿದ ಕಾಂಗ್ರೆಸ್ ಸರ್ಕಾರ ಅಧಿಕಾರ ನಡೆಸುವ ನೈತಿಕತೆ ಕಳೆದುಕೊಂಡಿದೆ ಎಂದು ಬಿಜೆಪಿ ಟೌನ್ ಅಧ್ಯಕ್ಷ ಆರ್.ಸಿ.ಮಂಜುನಾಥ್‌ ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೈತ್ರಿ ಪಕ್ಷ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಸೇರಿ ಎಲ್ಲಾ ದರ ಹೆಚ್ಚಿಸಿ, ಬಡವರ ಮೇಲೆ ಹೊರೆ ಹೇರಿದ್ದಾರೆ. ಕಳೆದೊಂದು ವರ್ಷದಿಂದಲೂ ಬಡವರು, ಜನಸಾಮಾನ್ಯರ ಬಗ್ಗೆ ವಿರೋಧಿ ನಿಲುವು ತಳೆದು ಕಾಂಗ್ರೆಸ್ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದೆ ಎಂದರು.

ರಾಜ್ಯದ ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಮಾನ್ಯ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಮೇಲೆ ಒಂದಲ್ಲಾ ಒಂದು ರೀತಿ ಬರೆ ಎಳೆದು ಅವರ ಬದುಕಿಗೆ ಕೊಳ್ಳಿ ಇಟ್ಟಿದೆ ಎಂದು ಆರೋಪಿಸಿದರು.

ತಾವು ರಾಜ್ಯದ ಜನರಿಗೆ ನೀಡಿರುವ ಸುಳ್ಳು ಭರವಸೆಗಳನ್ನು ಉಳಿಸಿಕೊಳ್ಳುವ ಸಲುವಾಗಿ ಈಗ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿದ್ದು ಇದರಿಂದ ಜನ ಸಾಮಾನ್ಯರ ದಿನಬಳಕೆ ವಸ್ತುಗಳು ಏರಿಕೆ ಆಗುವುದರಿಂದ ಕೂಡಲೇ ಏರಿಕೆ ಮಾಡಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು.

ಬಿಜೆಪಿ ಜಿಲ್ಲಾ ಒಬಿಸಿ ಘಟಕದ ಅಧ್ಯಕ್ಷ ಕನಕರಾಜು ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಬದುಕನ್ನು ನಾಶ ಪಡಿಸುವಂತಹ ಕೆಲಸಕ್ಕೆ ಮುಂದಾಗಿದ್ದು ನಮ್ಮ ಐದು ಗ್ಯಾರಂಟಿಗಳಿಂದ ಜನರು ನೆಮ್ಮದಿಯ ಬದುಕು ಕಂಡುಕೊಂಡಿದ್ದಾರೆ ಎಂದು ಕೊಚ್ಚಿಕೊಳ್ಳುವ ಕಾಂಗ್ರೆಸ್ ನಾಯಕರು, ಕಂದಾಯ, ನೀರು, ಬಸ್, ಪಹಣಿ ಸೇರಿದಂತೆ ಹಲವು ಅಗತ್ಯ ವಸ್ತುಗಳ ಮೇಲೆ ಶುಲ್ಕವನ್ನು ಹೆಚ್ಚಳ ಮಾಡಿರುವುದರಿಂದ ಮಧ್ಯಮ ವರ್ಗದ ಜನರ ಜೀವನವನ್ನು ನರಕಕ್ಕೆ ತಳ್ಳಿದೆ ಎಂದು ಆರೋಪಿಸಿದರು

ಜೆಡಿಎಸ್ ಹೋಬಳಿ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ್ ಕುಮಾರ್, ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಸುನೀಲ್, ತಾಲೂಕು ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಬಿಜೆಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಎಚ್.ಎಂ.ರವಿಕುಮಾರ್

ಟೌನ್ ಅಧ್ಯಕ್ಷ ಆರ್.ಸಿ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಡಿ.ಎಂ.ಮುನೀಂದ್ರ, ರಾಮಕೃಷ್ಣ ಹೆಗಡೆ, ರಾಮುಭಗವಾನ್, ಬಲಮುರಿ ಶ್ರೀನಿವಾಸ್, ಅಜಿತ್ ಕುಮಾರ್, ಜೆಡಿಎಸ್ ಯುವ ಘಟಕದ ಅಧ್ಯಕ್ಷ ಕಿರಣ್,ಅಶ್ವಥಪ್ಪ, ನಾರಾಯಣಪುರ ಮುರಳಿ, ಮಹಬೂಬ್ ಪಾಷಾ, ರವಿಕುಮಾರ್, ಪುರಸಭೆ ಸದಸ್ಯ ಶ್ರೀರಾಮಪ್ಪ, ಮುಖಂಡ ಪ್ರಕಾಶ್, ಕೆ.ಮುನಿರಾಜು, ವೀಣಾ, ಪ್ರೇಮಾ, ಶಾಮಣ್ಣ, ಸಿ.ಮುನಿಕೃಷ್ಣ, ಎಂ.ಕೃಷ್ಣಪ್ಪ, ಭುಜೇಂದ್ರಪ್ಪ, ಪ್ರಕಾಶ್, ರಾಜಣ್ಣ ಇತರರಿದ್ದರು.

(ಫೋಟೊ ಕ್ಯಾಪ್ಷನ್‌)

ತೈಲ ಬೆಲೆ ಏರಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈತ್ರಿ ಪಕ್ಷದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

PREV

Recommended Stories

ಬಾಗಲಕೋಟೆ ತೋಟಗಾರಿಕಾ ವಿಜ್ಞಾನ ವಿವಿಗೆ ಅನುದಾನ: ಸಚಿವ
ಸಂಭ್ರಮದ ಮೌನೇಶ್ವರ ಜಾತ್ರಾ ಮಹೋತ್ಸವ