ನಿಮ್ಹಾನ್ಸ್ ಘಟಕ ಕುರಿತು ಸಿಎಂಗೆ ತಪ್ಪು ಮಾಹಿತಿ

KannadaprabhaNewsNetwork |  
Published : May 10, 2026, 01:15 AM IST
43 | Kannada Prabha

ಸಾರಾಂಶ

ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿರುವ ಭೂಮಿಯಲ್ಲಿ ದಿನದ 24 ಗಂಟೆಯೂ ನೀರು ಲಭ್ಯವಿದ್ದು

- ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆರೋಪ

---ಕನ್ನಡಪ್ರಭ ವಾರ್ತೆ ಮೈಸೂರುಮೈಸೂರು ತಾಲೂಕಿನ ಗುಡುಮಾದನಹಳ್ಳಿಯಲ್ಲಿ ನಿಮ್ಹಾನ್ಸ್ ಘಟಕ ನಿರ್ಮಾಣ ಕುರಿತು ಮುಖ್ಯಮಂತ್ರಿಗಳಿಗೆ ತಪ್ಪು ಮಾಹಿತಿ ನೀಡಿ ದಿಕ್ಕು ತಪ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆರೋಪಿಸಿದರು.ಈ ಜಾಗ ಘಟಕ ನಿರ್ಮಾಣಕ್ಕೆ ಸೂಕ್ತವಲ್ಲ ಎಂದು ತಿಳಿದಿದ್ದರೂ ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಅವರ ಪಟಾಲಂ ಹುಚ್ಚು ಹಠಕ್ಕೆ ಬಿದ್ದು, ರೈತರನ್ನು ಬೀದಿಪಾಲು ಮಾಡಹೊರಟಿದೆ ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿರುವ ಭೂಮಿಯಲ್ಲಿ ದಿನದ 24 ಗಂಟೆಯೂ ನೀರು ಲಭ್ಯವಿದ್ದು, ಹಸಿರು ವಲಯ ಎಂದು ಗುರುತಿಸಲಾಗಿದೆ. ಸದರಿ ಭೂಮಿ ಆಸ್ಪತ್ರೆ ನಿರ್ಮಾಣಕ್ಕೆ ಯೋಗ್ಯವಾಗಿಲ್ಲ. ನಾವು ಆಸ್ಪತ್ರೆ ನಿರ್ಮಾಣಕ್ಕೆ ವಿರೋಧ ಮಾಡ್ತಿಲ್ಲ. ಬೇರೊಂದು ಸ್ಥಳದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಿದರೆ ನಮ್ಮ ಅಭ್ಯಂತರವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.ಗುಡುಮಾರನಹಳ್ಳಿಯಲ್ಲಿ ಹಲವಾರು ದಶಕಗಳಿಂದ ರೈತರು ಇಲ್ಲಿ ಉಳುಮೆ ಮಾಡುತ್ತಿದ್ದು, ಇವರನ್ನು ಬೀದಿಪಾಲು ಮಾಡುವ ಕೆಲಸ ಸರಿಯಲ್ಲ. ಈ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಬೇರೆ ಜಾಗದಲ್ಲಿ ನಿರ್ಮಾಣ ಮಾಡುವಂತೆ ಕೋರಲಾಗುವುದು. ಜೊತೆಗೆ ಸ್ವತಃ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಮನವಿ ಮಾಡಲಾಗುವುದು ಎಂದು ಅವರು ತಿಳಿಸಿದರು.ದಸಂಸ ಮುಖಂಡ ಶಂಭುಲಿಂಗಸ್ವಾಮಿ ಮಾತನಾಡಿ, ಗುಡುಮಾದನಹಳ್ಳಿ ನೀರಿನಿಂದ ಕೂಡಿದೆ. ಇಡೀ ಪರಿಸರವನ್ನು ನಾಶ ಮಾಡಬೇಕಾಗುತ್ತದೆ. ಪರಿಸರಕ್ಕೆ ಹಾನಿ ಮಾಡಬಾರದು, ಜಮೀನನ್ನು ರೈತರಿಗೆ ಮಂಜೂರು ಮಾಡಿ ಅಥವಾ ಗೋಮಾಳವಾಗಿ ಬಿಡಿ ಎಂದು ಆಗ್ರಹಿಸಿದರು.ರೈತ ಮುಖಂಡರಾದ ಹೊಸಕೋಟೆ ಬಸವರಾಜು, ಹೊಸೂರು ಕುಮಾರ್, ಪಿ. ಮರಂಕಯ್ಯ, ವಿವಿಧ ಸಂಘಟನೆಗಳ ಮುಖಂಡರಾದ ಭಾನುಪ್ರಕಾಶ್, ಉಗ್ರ ನರಸಿಂಹೇಗೌಡ ಮೊದಲಾದಲರು ಇದ್ದರು.---- ಬಾಕ್ಸ್-

-- ಪಶ್ಚಿಮ ಬಂಗಾಳದಂತೆ ಕರ್ನಾಟಕದಲ್ಲಿ ಆಗಲು ಬಿಡುವುದಿಲ್ಲ--ಎಸ್ಐಆರ್ ನಿಂದಾಗಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದಿದೆ. ಪಶ್ಚಿಮ ಬಂಗಾಳದಂತೆ ಕರ್ನಾಟಕದಲ್ಲಿ ಆಗಲು ಬಿಡುವುದಿಲ್ಲ. ಎಸ್ಐಆರ್ ಮಾನ್ಯುಪ್ಲೇಟ್ ಮಾಡಲು ಬಿಡುವುದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.ಈ ವಿಚಾರವಾಗಿ ವಿವಿಧ ಪ್ರಗತಿಪರ ಸಂಘಟನೆಗಳೊಂದಿಗೆ ಸರ್ಕಾರ ಸಭೆ ನಡೆಸಬೇಕು ಎಂದು ಮನವಿ ಮಾಡಿದ್ದೇವು.ಅದರಂತೆ ಸಿಎಂ ಸಭೆ ನಡೆಸಿದ್ದಾರೆ. ರೈತ ಸಂಘಟನೆ ಪರವಾಗಿ ನಾನು ಭಾಗವಹಿಸಿದ್ದೆ. ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅಕ್ರಮ ಮಾಡಿದ್ದಾರೆ. ಅಲ್ಪಸಂಖ್ಯಾತರು ಮತ್ತು ಇನ್ನಿತರ ಮತದಾರರ ಪಟ್ಟಿಯಲ್ಲಿ ಸಾಕಷ್ಟು ಜನರ ಹೆಸರು ಕೈಬಿಡಲಾಗಿದೆ ಎಂದು ಆರೋಪಿಸಿದರು.ಪಶ್ಚಿಮ ಬಂಗಾಳದಲ್ಲಿ ಸುಮಾರು 100 ಹೆಚ್ಚು ಟಿಎಂಸಿ ಗೆಲ್ಲುವಂತಹ ಕ್ಷೇತ್ರಗಳಲ್ಲಿ 4- 5 ಸಾವಿರ ಮತಗಳ ಅಂತರದಿಂದ ಸೋತಿದ್ದಾರೆ. ಅಲ್ಲಿ ಸುಮಾರು 34 ಲಕ್ಷ ಮತಗಳ ಡಿಲಿಟ್ ಆಗಿದೆ. ಇದರಿಂದ ಟಿಎಂಸಿಗೆ ಸೋಲಾಗಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಕೇರಳದಲ್ಲಿ ಅಂತಹ ಯಡವಟ್ಟು ನಡೆದಿಲ್ಲ. ನಮ್ಮ ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ವೇಳೆ ಅಂತಹ ವ್ಯತ್ಯಾಸಗಳು ಆಗದಂತೆ ನೋಡಿಕೊಳ್ಳಬೇಕಿದೆ ಎಂದು ಅವರು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಪ್ರತಿಷ್ಠೆ ಬಿಟ್ಟು ಪಕ್ಷ ಸಂಘಟಿಸಿ: ನಿಖಿಲ್‌ ಕುಮಾರಸ್ವಾಮಿ
ನಂದಿನಿ ಉತ್ಪನ್ನಗಳು ಬಳಸಿದರೆ ರೈತರಿಗೆ ಅನುಕೂಲ