28ಕ್ಕೆ 5ನೇ ರಾಜ್ಯ ಪತ್ರಿಕಾ ವಿತರಕರ ಸಮ್ಮೇಳನ

KannadaprabhaNewsNetwork |  
Published : Aug 26, 2025, 01:02 AM IST
44 | Kannada Prabha

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟಿಸುವರು

ಕನ್ನಡಪ್ರಭ ವಾರ್ತೆ ಮೈಸೂರುಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘವು ವಿಶ್ವ ಪತ್ರಿಕಾ ವಿತರಕರ ದಿನಾಚರಣೆ ಅಂಗವಾಗಿ ಮುಕ್ತವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಆ. 28 ರಂದು ಬೆಳಗ್ಗೆ 11.30ಕ್ಕೆ 5ನೇ ರಾಜ್ಯಮಟ್ಟದ ಪತ್ರಿಕಾ ವಿತರಕರ ದಿನಾಚರಣೆ ಆಯೋಜಿಸಿದೆ ಎಂದು ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಕೆ. ಶಂಭುಲಿಂಗ ತಿಳಿಸಿದರು.ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯವಹಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟಿಸುವರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್‌, ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಸುನಿಲ್‌ಬೋಸ್‌, ವಸತಿ ಮತ್ತು ವಿಹಾರ ಧಾಮಗಳ ಅಧ್ಯಕ್ಷ ಅನಿಲ್‌ಚಿಕ್ಕಮಾದು ಅತಿಥಿಯಾಗಿ ಪಾಲ್ಗೊಳ್ಳುವರು.ಪತ್ರಿಕಾ ವಿತರಕ ಎಂ.ಎನ್‌. ನಾಗರಾಜ್‌ ಅವರನ್ನು ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಕೆ. ಶಂಭುಲಿಂಗ ಮತ್ತು ಜೆ.ಎಸ್‌. ಹೋಮದೇವ ಅಧ್ಯಕ್ಷತೆವಹಿಸುವರು.ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ, ಹೊಟೇಲ್‌ ಮಾಲೀಕರ ಸಂಘದ ಅಧ್ಯಕ್ಷ ಸಿ. ನಾರಾಯಣಗೌಡ, ಹೊಟೇಲ್‌ ಮಾಲೀಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾರಾಯಣ ವಿ. ಹೆಗಡೆ, ಮುಕ್ತ ವಿವಿ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ, ಮಾಜಿ ಸಂಸದ ಪ್ರತಾಪ ಸಿಂಹ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಕಾರ್ಮಿಕ ಇಲಾಖೆ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ನಗರ ಪಾಲಿಕೆ ಆಯುಕ್ತ ಶೇಖ್‌ ತನ್ವೀರ್‌ ಆಸೀಫ್‌, ನಗರ ಪಾಲಿಕೆ ಮಾಜಿ ಸದಸ್ಯರು ಪಾಲ್ಗೊಳ್ಳುವರು.ಪತ್ರಿಕಾ ಸಂಸ್ಥೆಗಳ ಮುಖ್ಯಸ್ಥರಾದ ಕೆ.ಜಿ. ವಿಕ್ರಂ ಮುತ್ತಣ್ಣ, ರವಿ ಕೋಟಿ, ಸತ್ಯನಾರಾಯಣ, ಅಂಶಿ ಪ್ರಸನ್ನಕುಮಾರ್‌, ಎ.ಎನ್‌. ಅನಂತಮೂರ್ತಿ, ಚಿಕ್ಕಣ್ಣಗೌಡ, ಕೆ. ನರಸಿಂಹಮೂರ್ತಿ, ಪ್ರಕಾಶ್‌, ಬಸವರಾಜು, ಮಹದೇವ, ರಮೇಶ್‌ ಉತ್ತಪ್ಪ, ಪ್ರತಾಪ್‌, ಶ್ರೀಹರಿ, ಸ್ವರೂಪ್‌, ಕವೀಶ್‌, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ದೀಪಕ್‌, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ, ಮಾಜಿ ಅಧ್ಯಕ್ಷರಾದ ಎಸ್‌.ಟಿ. ರವಿಕುಮಾರ್‌, ಸಿ.ಕೆ. ಮಹೇಂದ್ರ, ರಾಜ್ಯ ಸಮಿತಿ ಸದಸ್ಯ ಬಿ. ರಾಘವೇಂದ್ರ, ಮಾಜಿ ಪ್ರಧಾನ ಕಾರ್ಯದರ್ಶಿ ಎಂ. ಸುಬ್ರಹ್ಮಣ್ಯ ಮೊದಲಾದವರು ಪಾಲ್ಗೊಳ್ಳುವುದಾಗಿ ಅವರು ಹೇಳಿದರು.ಇದೇ ವೇಳೆ 50 ಸಾಧಕ ವಿದ್ಯಾರ್ಥಿಗಳನ್ನು ಹಾಗೂ 6 ಜನ ಓದುಗರನ್ನು ಸನ್ಮಾನಿಸಲಾಗುವುದು. ಬೆಳಗ್ಗೆ ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮ ಆರಂಭವಾಗಲಿದೆ. ವಿವಿಧ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಅವರು ಹೇಳಿದರು.ಪ್ರಮುಖ ಬೇಡಿಕೆಗಳುಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ನಿಧಿ ಮರುಸ್ಥಾಪಿಸಬೇಕು, ಪತ್ರಿಕಾ ವಿತರಕರಿಗೆ ಮಾಧ್ಯಮ ಅಕಾಡೆಮಿಯಲ್ಲಿ ಸದಸ್ಯತ್ವ ನೀಡಬೇಕು, ವಿತರಕರು ಅಕಾಲಿಕ ಮರಣ ಹೊಂದಿದ್ದಲ್ಲಿ 10 ಲಕ್ಷ ರೂ.ವರೆಗೂ ಪರಿಹಾರ ನೀಡಬೇಕು, 60 ವರ್ಷ ಮೇಲ್ಪಟ್ಟ ವಿತರಕರಿಗೆ ಕನಿಷ್‌5 ಸಾವಿರ ರೂ. ಪಿಂಚಣಿ ನೀಡಬೇಕು, ಪತ್ರಿಕಾ ವಿತರಕರಿಗೆ ಆಶ್ರಯ ಯೋಜನೆಯಡಿ ನಿವೇಶನ ನೀಡಬೇಕು, ಅವರ ಕುಟುಂಬ ವರ್ಗದವರಿಗೆ ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು ಎಂಬುದೂ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ ಸಲ್ಲಿಸಲಾಗುವುದು ಎಂದರು.ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಎಂ.ಎನ್. ನಾಗರಾಜ್, ರಾಜಶೇಖರ್, ಜೆ.ಎಸ್‌. ಹೋಮದೇವ್‌, ಬಿ. ರಾಘವೇಂದ್ರ, ನಾಗೇಶ್ ಇದ್ದರು.

PREV

Recommended Stories

ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ