ದಾವಣಗೆರೆ: ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಏ.15, 16 ಮತ್ತು 17ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳುವರು. ಏ.14ರಂದು ರಾತ್ರಿ 8.30ಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಏ.15ರಂದು ಬೆಳಗ್ಗೆ 10 ಗಂಟೆಗೆ ನಗರದ ಜಯದೇವ ವೃತ್ತದ ಬಳಿ ಬ್ರಾಹ್ಮಣ ಹಾಸ್ಟೆಲ್ ಮುಂಭಾಗದಲ್ಲಿ ದಲಿತ ಸಂರಕ್ಷಣಾ ಸಮಿತಿಯಿಂದ ಹಮ್ಮಿಕೊಂಡಿರುವ ಅಂಬೇಡ್ಕರ್ ಜಯಂತಿ ಕಾರ್ಯಕ್ರಮಲ್ಲಿ ಭಾಗವಹಿಸುವರು. ಮಧ್ಯಾಹ್ನ 1.30ಕ್ಕೆ ಆವರಗೊಳ್ಳ ಗ್ರಾಮ ವ್ಯಾಪ್ತಿಯ ಕೇಂದ್ರೀಯ ವಿದ್ಯಾಲಯ ಹಿಂಭಾಗದಲ್ಲಿ ವಾಸಿಸುತ್ತಿರುವ ಕುಟುಂಬಗಳ ಸ್ಥಳಕ್ಕೆ ಭೇಟಿ ನೀಡುವರು. ಅನಂತರ ಸಂಜೆ 5 ಗಂಟೆಗೆ ದಾವಣಗೆರೆ ವಿವಿ ಮಹಿಳಾ ವಸತಿ ನಿಲಯಕ್ಕೆ ಭೇಟಿ ನೀಡಿ ವಾಸ್ತವ್ಯ ಮಾಡುವರು. ಏ.16ರಂದು ಬೆಳಗ್ಗೆ 10.30 ಗಂಟೆಗೆ ಜಗಳೂರು ತಾಲೂಕು ಆಸ್ಪತ್ರೆ ಹಾಗೂ ತಾಲೂಕು ಕಚೇರಿಗೆ ಭೇಟಿ ನೀಡುವರು. ಮಧ್ಯಾಹ್ನ 1 ಗಂಟೆಗೆ ಜಗಳೂರು ತಾಲೂಕಿನ ಹನುಮಂತಪುರ ಗೊಲ್ಲರಹಟ್ಟಿ ಗ್ರಾಮಕ್ಕೆ ಭೇಟಿ ನೀಡುವರು. ಸಂಜೆ 5 ಗಂಟೆಗೆ ದಾವಣಗೆರೆಯಲ್ಲಿ ಬಾಲಕಿಯರ ಮೆಟ್ರಿಕ್ ನಂತರ ಹಾಸ್ಟೆಲ್‌ಗೆ ಭೇಟಿ ನೀಡಿ ವಾಸ್ತವ್ಯ ಮಾಡುವರು.