ರೈತರ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ರೆ ರಾಜ್ಯಾದ್ಯಂತ ಹೋರಾಟ

KannadaprabhaNewsNetwork |  
Published : Sep 22, 2026, 04:30 AM IST
Mallikarjun

ಸಾರಾಂಶ

ಮೂರು ದಿನಗಳ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ರೈತರ ಸಮಸ್ಯೆಗಳಿಗೆ ಸ್ಪಷ್ಟ ಪರಿಹಾರ ಸಿಗದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

 ವಿಜಯಪುರ : ಮೂರು ದಿನಗಳ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ರೈತರ ಸಮಸ್ಯೆಗಳಿಗೆ ಸ್ಪಷ್ಟ ಪರಿಹಾರ ಸಿಗದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಅಧಿವೇಶನ ಕೇವಲ ಚರ್ಚೆಗೆ ಮಾತ್ರ ಸೀಮಿತವಾಗಬಾರದು, ಬದಲಿಗೆ ರಾಜ್ಯದ ರೈತರನ್ನು ಸಂಕಷ್ಟದಿಂದ ಪಾರು ಮಾಡಲು ಬಲವಾದ ಮತ್ತು ಸ್ಪಷ್ಟವಾದ ತೀರ್ಮಾನ ಕೈಗೊಳ್ಳಬೇಕು. ರೈತರ ಕೃಷಿ ಸಾಲಮನ್ನಾ ಮತ್ತು ಬೆಳೆ ನಷ್ಟಕ್ಕೆ ವೈಜ್ಞಾನಿಕ ಪರಿಹಾರ ಘೋಷಿಸುವ ಕುರಿತು ಸರ್ಕಾರ ಗಂಭೀರ ನಿರ್ಣಯ ಕೈಗೊಳ್ಳಬೇಕು.

ತುರ್ತು ಅನುದಾನ ಬಿಡುಗಡೆ ಮಾಡಬೇಕು

ಬರಪೀಡಿತ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸರಬರಾಜು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ತುರ್ತು ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.ಅಧಿವೇಶನದಲ್ಲಿ ಯಾವುದೇ ರಾಜಕೀಯ ಅಥವಾ ಸಮಾಜದ ಸ್ವಾಸ್ಥ್ಯ ಕೆಡಿಸುವ ಕೋಮು ವಿಷಯಗಳಿಗೆ ಅವಕಾಶ ನೀಡದೇ ಸಂಪೂರ್ಣವಾಗಿ ಬರ ಪರಿಸ್ಥಿತಿ, ರೈತರ ಸಂಕಷ್ಟಗಳ ಹಾಗೂ ಜನಸಾಮನ್ಯರ ಮೂಲಭೂತ ಸಮಸ್ಯೆಗಳ ಕುರಿತೇ ಗಂಭೀರ ಚರ್ಚೆ ನಡೆಯಬೇಕು. ಸಮಾಜದ ಶಾಂತಿ, ನೆಮ್ಮದಿ ಮತ್ತು ರೈತರ ಹಿತಾಸಲಿಗೆ ಧಕ್ಕೆ ತರುವ ವಿಚಾರಗಳನ್ನು ಬದಿಗೊತ್ತಿ ಆಡಳಿತ ಮತ್ತು ವಿರೋಧ ಪಕ್ಷದವರು ಒಮ್ಮತದಿಂದ ಜನರ ಕಷ್ಟಗಳಿಗೆ ಸ್ಪಂದಿಸುವುದು ಇಂದಿನ ತುರ್ತು ಅವಶ್ಯಕತೆಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಯಾವುದೇ ರಾಜಕೀಯ ಅಥವಾ ಸಮಾಜದ ಸ್ವಾಸ್ಥ್ಯ ಕೆಡಿಸುವ ಕೋಮು ವಿಷಯಗಳಿಗೆ ಅವಕಾಶ ನೀಡದೇ ಸಂಪೂರ್ಣವಾಗಿ ಬರ ಪರಿಸ್ಥಿತಿ, ರೈತರ ಸಂಕಷ್ಟಗಳು ಹಾಗೂ ಜನಸಾಮನ್ಯರ ಮೂಲಭೂತ ಸಮಸ್ಯೆಗಳ ಕುರಿತೇ ಗಂಭೀರ ಚರ್ಚೆ ನಡೆಯಬೇಕು ಎಂಬುವುದು ನಾಡಿನ ಪ್ರತಿಯೊಬ್ಬ ನಾಗರಿಕನ ಹಾಗೂ ರೈತರ ಪ್ರಮುಖ ಅಪೇಕ್ಷೆಯಾಗಿದೆ.

-ಮಲ್ಲಿಕಾರ್ಜುನ ಕೆಂಗನಾಳ, ರಾಜ್ಯಾಧ್ಯಕ್ಷರು, ರೈತ ಭಾರತ ಪಕ್ಷ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಸದೃಢ ದೇಶ ನಿರ್ಮಾಣಕ್ಕಾಗಿ ಯುವಪೀಳಿಗೆ ಕ್ರೀಡೆಯಲ್ಲಿ ಭಾಗವಹಿಸಿ
೧೩ ಸಾವಿರ ಕುಟುಂಬಗಳಿಗೆ ಶಾಶ್ವತ ಮನೆ ಮಾಲೀಕತ್ವದ ಹಕ್ಕುಪತ್ರ: ಶಾಸಕ ಮಾನೆ