ಅಪರಾಧ ಚಟುವಟಿಕೆಗಳಿಂದ ದೂರವಿರಿ: ಮೌನೇಶ್ವರ

KannadaprabhaNewsNetwork |  
Published : Jun 10, 2026, 02:00 AM IST
ಯಲಬುರ್ಗಾದ ಜನನಿ ಗ್ರುಪ್ ಆಫ್ ಇನ್ಸ್ಟಿಟ್ಯೂಟ್‌ನಲ್ಲಿ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಸಿಪಿಐ ಮೌನೇಶ್ವರ ಮಾಲಿಪಾಟೀಲ್ ಚಾಲನೆ ನೀಡಿದರು. | Kannada Prabha

ಸಾರಾಂಶ

ಡ್ರಗ್ಸ್ ಮಾರಾಟ, ಸೈಬರ್ ವಂಚನೆಯಿಂದ ಎಚ್ಚರ ವಹಿಸಬೇಕು

ಯಲಬುರ್ಗಾ: ವಿದ್ಯಾರ್ಥಿಗಳು ಮತ್ತು ಯುವಜನತೆ ಅಪರಾಧ ಚಟುವಟಿಕೆಗಳಿಂದ ದೂರವಿದ್ದು, ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯುವಂತೆ ಸಿಪಿಐ ಮೌನೇಶ್ವರ ಮಾಲಿಪಾಟೀಲ್ ಹೇಳಿದರು.

ಪಟ್ಟಣದ ಜನನಿ ಗ್ರುಪ್ ಆಫ್ ಇನ್ಸ್ಟಿಟ್ಯೂಟ್‌ನಲ್ಲಿ ಪೊಲೀಸ್ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರುದ್ಧ ಜನಜಾಗೃತಿ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

ಡ್ರಗ್ಸ್ ಮಾರಾಟ, ಸೈಬರ್ ವಂಚನೆಯಿಂದ ಎಚ್ಚರ ವಹಿಸಬೇಕು. ವಿದ್ಯಾರ್ಥಿಗಳು ಕಾನೂನುಬಾಹಿರ ಚಟುವಟಿಕೆಗಳಿಂದ ದೂರವಿದ್ದು, ಓದಿನ ಕಡೆಗೆ ಗಮನ ಕೊಡಬೇಕು. ಸಾಮಾಜಿಕ ಜಾಲತಾಣಗಳ ದುರುಪಯೋಗದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಎಚ್ಚರ ವಹಿಸಬೇಕು. ಕಠಿಣ ಪರಿಶ್ರಮದಿಂದ ಅಧ್ಯಯನ ನಡೆಸಿ ಉನ್ನತ ಮಟ್ಟದ ಸಾಧನೆ ಮಾಡುವ ಕಡೆಗೆ ಹೆಚ್ಚು ಗಮನ ಹರಿಸಬೇಕು ಎಂದರು.

ಸಂಸ್ಥೆಯ ಅಧ್ಯಕ್ಷ ರಂಗನಾಥ ವಲ್ಮಕೊಂಡಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸಂಸ್ಥೆಯ ಪ್ರಾಚಾರ್ಯ ಪ್ರಾಣೇಶ ವಲ್ಮಕೊಂಡಿ, ಆಡಳಿತಾಧಿಕಾರಿ ಲೋಕೇಶ ಲಮಾಣಿ, ಮುಖ್ಯಶಿಕ್ಷಕ ಅಕ್ಷಯಕುಮಾರ ಪತ್ತಾರ, ನಾಸಿರ್ ಹುಸೇನ್, ವಿಜಯಾ ಕುಂಬಾರ, ಅಮೃತಾ ಹೊಸಳ್ಳಿ, ಪ್ರೀತಿ ನೂಲ್ವಿ, ಹೀನಾ ಕೌಸರ, ರತ್ನಾ ಡಿ.ಎಚ್. ಭೂಮಿಕಾ ಸೇರಿದಂತೆ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

​ಅಕ್ರಮ ಕ್ವಾರಿ ದುರಂತ: ಕೋಟುಮಚಗಿಗೆ ಅಧಿಕಾರಿಗಳ ಭೇಟಿ
ಮಣ್ಣಿನ ಆರೋಗ್ಯ ಕಾಪಾಡಲು ರೈತರು ಆದ್ಯತೆ ನೀಡಲಿ: ಬಸವರಾಜ ಬೊಮ್ಮಾಯಿ