ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಯುವರಾಜ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕೆಟ್ಟವರ ಪ್ರಭಾವದಿಂದ ದುಶ್ಚಟಗಳಿಗೆ ಬಲಿಯಾಗಬೇಡಿ, ಪ್ರತಿದಿನ ನಿಮ್ಮ ತಂದೆ ತಾಯಿ, ಕುಟುಂಬ ನಿಮ್ಮ ಭವಿಷ್ಯಕ್ಕಾಗಿ ಪಡುವ ಶ್ರಮವನ್ನು ಅರ್ಥಮಾಡಿಕೊಂಡು ಶ್ರದ್ದೆಯಿಂದ ವಿದ್ಯಾಭ್ಯಾಸ ಮುಗಿಸಿ. ಗುರು ಹಿರಿಯರ ಬಗ್ಗೆ ಗೌರವದಿಂದ ನಡೆದುಕೊಳ್ಳಿ ಎಂದರು.
ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಓದಿದ ಕಾಲೇಜು ಬೋಧಿಸಿದ ಅಧ್ಯಾಪಕರ ಬಗ್ಗೆ ಪ್ರೀತಿ ಮತ್ತು ಅಭಿಮಾನ ಇರಲಿ ಎಂದರು.ಪ್ರಾಂಶುಪಾಲ ಪ್ರೊ.ಎಸ್. ಮಹಾದೇವ ಮೂರ್ತಿ, ಆಡಳಿತಾಧಿಕಾರಿ ಪ್ರೊ.ಕೆ. ಅಜಯಕುಮಾರ್, ಪರೀಕ್ಷಾಂಗ ನಿಯಂತ್ರಣಾಧಿಕಾರಿ ಪ್ರೊ. ನಾಗೇಶ್ ಬಾಬು, ಅಭಿವಿನ್ಯಾಸ ಕಾರ್ಯಕ್ರಮದ ಸಂಯೋಜಕ ಪ್ರೊ. ಕೃಷ್ಣಮೂರ್ತಿ, ಡಾ. ಮಂಜುಳಾ, ಡಾ. ಶೇಖರ್ ನಾಯಕ್ ಮೊದಲಾದವರು ಇದ್ದರು. ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ನೀಡಲಾಯಿತು.