ಹಿರೇಕೆರೂರು: ಮನುಷ್ಯನ ದುರಾಸೆ ದುಶ್ಚಟಗಳಿಂದ ದೂರವಿದ್ದುಕೊಂಡು, ಸನ್ಮಾರ್ಗದಲ್ಲಿ ಜೀವನ ಸಾಗಿಸುವ ಜತೆಗೆ ಪರೋಪಕಾರ, ಕಾಯಕ ನಿಷ್ಠೆ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಸಾರ್ಥಕ ಜೀವನ ರೂಪಿಸಿಕೊಳ್ಳಬೇಕು ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಬದಲಾವಣೆ ವ್ಯಕ್ತಿಯ ಬದಲಾವಣೆಯಿಂದ ಸಮಾಜ ಹಾಗೂ ನಾಡಿನ ಸಾಧ್ಯವಾಗುತ್ತದೆ. ಇಂದಿನ ದಿನಮಾನಗಳಲ್ಲಿ ಮನುಷ್ಯ ದಾರಿ ತಪ್ಪುತ್ತಿರುವುದಕ್ಕೆ ಸಂಪತ್ತು, ದ್ವೇಷ ಮತ್ತು ಅಸೂಯೆ ಪ್ರಮುಖ ಕಾರಣಗಳಾಗಿವೆ. ಇವುಗಳ ಹಿಂದೆ ಓಡದೇ, ಆದರ್ಶದ ಹಾದಿಯಲ್ಲಿ ಮನುಷ್ಯ ಜೀವನ ನಡೆಸಿ ಬಾಳನ್ನು ಬೆಳಗಿಸಿಕೊಳ್ಳಬೇಕು. ಎಂದರು.
ತಿಪ್ಪಾಯಿಕೊಪ್ಪದ ಮಹಾಂತಸ್ವಾಮೀಜಿ ಮಾತನಾಡಿ, ಭಾರತೀಯ ಪರಂಪರೆಯಲ್ಲಿ ಶ್ರಾವಣ ಮಾಸಕ್ಕೆ ಅತ್ಯಂತ ಮಹತ್ವವಿದ್ದು, ಶ್ರಾವಣ ಮಾಸದ ಸಂದರ್ಭದಲ್ಲಿ ಭಕ್ತರು ಧಾರ್ಮಿಕ ಆಚರಣೆಗಳೊಂದಿಗೆ ಸೇವೆ ಹಾಗೂ ಉತ್ತಮ ಸಂಸ್ಕಾರಗಳನ್ನು ಜೀವನದ ಅಳವಡಿಸಿಕೊಳ್ಳಬೇಕು. ಆ ಮೂಲಕ ವೈಯಕ್ತಿಕ ಮತ್ತು ಸಾಮಾಜಿಕ ಇನ್ನಷ್ಟು ಬದುಕು ಸುಂದರವಾಗಿಸಿಕೊಳ್ಳಬೇಕು ಎಂದರು.ಹಿರೇಮಾಗಡಿ ವಿರಕ್ತಮಠದ ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ಮಠಗಳು ಕೇವಲ ಧಾರ್ಮಿಕ ಕೇಂದ್ರಗಳಾಗಿರದೇ ಸಮಾಜಕ್ಕೆ ಹಲವು ರೀತಿಯಲ್ಲಿ ಕೊಡುಗೆ ನೀಡುತ್ತಾ ಬಂದಿವೆ. ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಮಠಗಳು ಮಹತ್ವದ ಪಾತ್ರ ವಹಿಸುತ್ತಿದ್ದು, ಜನರಲ್ಲಿ ಸದಾಚಾರ, ಸೇವಾ ಮನೋಭಾವ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಾರ್ಯ ಮಾಡುತ್ತಿವೆ ಎಂದು ಹೇಳಿದರು.
ಶಾಸಕ ಯು.ಬಿ. ಬಣಕಾರ ಹಾಗೂ ಮಾಜಿ ಸಚಿವ ಬಿ.ಸಿ. ಪಾಟೀಲ ಮಾತನಾಡಿದರು. ಈ ಸಂಧರ್ಭದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ರೈತ ಮಹಿಳೆ ಕವಿತಾ ಮಿಶ್ರಾ ಹಾಗೂ ಅಪರ ಜಿಲ್ಲಾಧಿಕಾರಿ ನಾಗರಾಜ ಎಲ್. ಅವರನ್ನು ಮಠದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.