ತಂಬಾಕು ಉತ್ಪನ್ನಗಳಿಂದ ದೂರವಿರಿ

KannadaprabhaNewsNetwork | Published : Jul 15, 2024 1:47 AM

ಸಾರಾಂಶ

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ತಂಬಾಕು ಉತ್ಪನ್ನಗಳ ಪ್ರತ್ಯಕ್ಷ ಅಥವಾ ಪರೋಕ್ಷ ಜಾಹೀರಾತನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಅಪ್ರಾಪ್ತ ಮಕ್ಕಳಿಂದ ಮತ್ತು ಮಕ್ಕಳಿಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುವಂತಿಲ್ಲ.

ಕನ್ನಡಪ್ರಭ ವಾರ್ತೆ ಕೋಲಾರಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕೆ ತಂಬಾಕು, ಮಾದಕ ವಸ್ತುಗಳಿಂದ ದೂರವಿರಿ, ಯುವಕರು ದೇಶದ ಆಸ್ತಿಯಾಗಲು ದುಶ್ಚಟಗಳಿಗೆ ಮನಸೋಲದಿರಿ ಎಂದು ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸುನೀಲ್‌ ಎಸ್ ಹೊಸಮನಿ ಕರೆ ನೀಡಿದರು.ನಗರದ ಎಂಎನ್‌ಜಿ ಪಿಯು ಕಾಲೇಜು, ಸ್ಮಾರ್ಟ್ ಪಿಯು ಕಾಲೇಜಿನಲ್ಲಿ ತಂಬಾಕು ಉತ್ಪನ್ನಗಳು ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳು ಮತ್ತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕೊಟ್ಪಾ ಕಾಯ್ದೆ ಪಾಲನೆ ಕಡ್ಡಾಯ

ತಂಬಾಕು ಉತ್ಪನ್ನಗಳ ಉದ್ದಿಮೆದಾರರು, ಮಾರಾಟಗಾರರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ಕೊಟ್ಪಾ ಕಾಯ್ದೆಯನ್ನು ೨೦೦೩ರ ಕಾನೂನುಗಳನ್ನು ಪಾಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ತಂಬಾಕು ಉತ್ಪನ್ನಗಳ ಪ್ರತ್ಯಕ್ಷ ಅಥವಾ ಪರೋಕ್ಷ ಜಾಹೀರಾತನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಅಪ್ರಾಪ್ತ ಮಕ್ಕಳಿಂದ ಮತ್ತು ಮಕ್ಕಳಿಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುವಂತಿಲ್ಲ. ಶೈಕ್ಷಣಿಕ ಸಂಸ್ಥೆಗಳ ೧೦೦ ಗಜ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಆರೋಗ್ಯಕ್ಕೆ ಮಾರಕವಾಗಿ ಕ್ಯಾನ್ಸರ್‌ನಂತಹ ಮಾರಣಾಂತಿಕ ರೋಗಗಳಿಗೆ ಕಾರಣವಾಗುವ ತಂಬಾಕು ಉತ್ಪನ್ನಗಳಿಂದ ದೂರವಿರಿ, ಸದೃಢ ಸಮಾಜ ಕಟ್ಟುವ ಕಾರ್ಯದಲ್ಲಿ ಕೈಜೋಡಿಸಿ, ಉತ್ತಮ ಆರೋಗ್ಯ ನಿಮ್ಮದಾಗಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಸಹಾಯವಾಣಿ ಕುರಿತ ಮಾಹಿತಿ

ಇದೇ ಸಂದರ್ಭದಲ್ಲಿ ಎನ್‌ಡಿಪಿಎಸ್ ಕಾಯಿದೆ, ಕೋಟ್ಪಾ ಕಾಯಿದೆ, ಬಾಲ್ಯ ವಿವಾಹ ನಿಷೇಧ ಕಾಯಿದೆ, ಪೋಕ್ಸೋ, ಮೋಟಾರ್ ವಾಹನ ಕಾಯಿದೆಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ ಎನ್‌ಎಎಲ್‌ಎಸ್‌ಎ ಸಹಾಯವಾಣಿ ೧೫೧೦೦ ಬಗ್ಗೆ ಮಾಹಿತಿ ನೀಡಿದರು.ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರ ಪಿ.ಮಹಮದ್ ಮಾತನಾಡಿ, ಔಷದೋಪಚಾರ, ಮಾನಸಿಕ ಬೆಂಬಲ, ಸಲಹೆ ಮತ್ತು ಸಹಕಾರ, ಅನುಪಾಲನೆ, ಮಾನಸಿಕ ಆರೋಗ್ಯದ ಚಿಕಿತ್ಸೆಗಾಗಿ ತಮ್ಮನ್ನು ಸಂಪರ್ಕಿಸಲು ಕೋರಿದರು. ಈ ವೇಳೆ ಪ್ರಾಂಶುಪಾಲರಾದ ಸಿ. ಸಹನ, ತಂಬಾಕು ನಿಯಂತ್ರಣ ಘಟಕದ ಸಿಬ್ಬಂದಿ ಮಂಜುನಾಥ್ ಇದ್ದರು.

Share this article