ಯಶಸ್ಸು ಗಳಿಸಲು ಅನಗತ್ಯ ಚಟುವಟಿಕೆಗಳಿಂದ ದೂರವಿರಿ

KannadaprabhaNewsNetwork |  
Published : Jun 09, 2025, 03:42 AM IST
ಪಟ್ಟಣದ ಶ್ರೀ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಶ್ರೀ ಆದಿಚುಂಚನಗಿರಿಮಹಾಸಂಸ್ಥಾನ ಮಠದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಜೀವನದಲ್ಲಿ ನಿಜವಾದ ಯಶಸ್ಸುಗಳಿಸಲು ವಿದ್ಯಾರ್ಥಿಗಳು ಅನಗತ್ಯ ಚಟುವಟಿಕೆಗಳಿಂದ ದೂರವಿರಬೇಕು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಕರೆ ನೀಡಿದ್ದಾರೆ. ಆಧುನಿಕ ಜಗತ್ತಿನಲ್ಲಿ ಕೇವಲ ಪದವಿ ಶಿಕ್ಷಣ ಸಾಕಾಗುವುದಿಲ್ಲ. ವಿದ್ಯೆಯ ಜೊತೆಗೆ ಕೌಶಲ್ಯವೂ ಅತಿ ಮುಖ್ಯ. ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗ ಪಡೆಯಲು ಕೌಶಲ್ಯ ನಿರ್ಣಾಯಕ ಪಾತ್ರ ವಹಿಸುತ್ತವೆ. ಆದರಲ್ಲೂ, ಸಂಪರ್ಕ ಕೌಶಲ್ಯವನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಸಮರ್ಪಣಾ ಮನೋಭಾವವನ್ನು ರೂಢಿಸಿಕೊಳ್ಳುವುದು ಅತ್ಯಗತ್ಯ ಎಂದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಜೀವನದಲ್ಲಿ ನಿಜವಾದ ಯಶಸ್ಸುಗಳಿಸಲು ವಿದ್ಯಾರ್ಥಿಗಳು ಅನಗತ್ಯ ಚಟುವಟಿಕೆಗಳಿಂದ ದೂರವಿರಬೇಕು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಕರೆ ನೀಡಿದ್ದಾರೆ.ಪಟ್ಟಣದ ಶ್ರೀ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಆಧುನಿಕ ಜಗತ್ತಿನಲ್ಲಿ ಕೇವಲ ಪದವಿ ಶಿಕ್ಷಣ ಸಾಕಾಗುವುದಿಲ್ಲ. ವಿದ್ಯೆಯ ಜೊತೆಗೆ ಕೌಶಲ್ಯವೂ ಅತಿ ಮುಖ್ಯ. ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗ ಪಡೆಯಲು ಕೌಶಲ್ಯ ನಿರ್ಣಾಯಕ ಪಾತ್ರ ವಹಿಸುತ್ತವೆ. ಆದರಲ್ಲೂ, ಸಂಪರ್ಕ ಕೌಶಲ್ಯವನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಸಮರ್ಪಣಾ ಮನೋಭಾವವನ್ನು ರೂಢಿಸಿಕೊಳ್ಳುವುದು ಅತ್ಯಗತ್ಯ ಎಂದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮಕ್ಕೆ ಆತಿಥಿಯಾಗಿ ಆಗಮಿಸಿದ್ದ ಮೈಸೂರಿನ ಮಹಾರಾಣಿ ಕಾಲೇಜಿನ ಸಹಪ್ರಾಧ್ಯಾಪಕ ಸಿ. ಎನ್. ಹೇಮಚಂದ್ರ ಮಾತನಾಡಿ ವಿದ್ಯಾರ್ಥಿಗಳಲ್ಲಿ ಜ್ಞಾನದ ಹಸಿವು ಸದಾ ಇರಬೇಕು. ಸಮಾಜದಲ್ಲಿ ಉದ್ಯೋಗಕ್ಕೆ ತೀವ್ರ ಪೈಪೋಟಿ ಇದ್ದು ಕೌಶಲ್ಯಯುತ ವಿದ್ಯಾರ್ಥಿಗಳಿಗೆ ಮಾತ್ರ ಉದ್ಯೋಗ ದೊರೆಯುತ್ತದೆ. ಸಮಯದ ಮಹತ್ವವನ್ನು ಅರಿಯುವುದು ಅತಿ ಮುಖ್ಯ ಮೊಬೈಲ್ ಬಳಕೆಯನ್ನು ನಿಮ್ಮ ಜ್ಞಾನ ಹೆಚ್ಚಿ ಸಲು ಬಳಸಿಕೊಳ್ಳಿ, ಆತ್ಮಶಕ್ತಿ ಹೆಚ್ಚಿಸಿಕೊಂಡು, ಮೌಲ್ಯಗಳನ್ನು ಸಂಪಾದಿಸಿ ಎಂದು ಸಲಹೆ ನೀಡಿದರು.

ಹಾಸನ ಹಾಗೂ ಕೊಡಗು ಶಾಖಾ ಮಠದ ಶ್ರೀ ಶಂಭುನಾಥ ಮಹಾಸ್ವಾಮೀಜಿಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ವಿದ್ಯಾರ್ಥಿಗಳಿಗೆ ಸದಾ ಗುರುಗಳ ಆಶೀರ್ವಾದ ಮತ್ತು ಮಾರ್ಗದರ್ಶನ ಬೇಕಿದೆ. ಪತ್ರಿಕೆಗಳು ಹಾಗೂ ಪುಸ್ತಕಗಳನ್ನು ಓದುವ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಿ ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ಅಲ್ಲದೆ, ಪೂಜ್ಯಶ್ರೀಗಳು ಮತ್ತು ಗಣ್ಯರು ಕಾಲೇಜಿನ ವಾರ್ಷಿಕ ಸಂಚಿಕೆ ಗಿರಿ ವೈಭವವನ್ನು ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ. ಕೆ. ಮಂಜುನಾಥ್, ಸಹಾಯಕ ಪ್ರಾಧ್ಯಾಪಕರಾದ ಎನ್.ಟಿ. ನಾಗರಾಜು, ಎಂ. ಆರ್‌. ನಿರುಷ, ನಂದೀಶ್, ಹಾಗೂ ಬಿ.ಜಿ.ಎಸ್.ಪಿ.ಯು. ಕಾಲೇಜಿನ ಪ್ರಾಂಶುಪಾಲ ಸಿ. ಸಿ. ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ