ಕನ್ನಡಪ್ರಭ ವಾರ್ತೆ ಬೆಳಗಾವಿ
ಸಿರಿಧಾನ್ಯಗಳು ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಇವು ಆರೋಗ್ಯ ಸಮತೋಲಕ್ಕೆ ಬಹುಮುಖ್ಯವಾಗಿವೆ. ಈ ಆಹಾರಗಳ ಲಾಭ, ಉಪಯುಕ್ತತೆ ಮತ್ತು ಬಳಕೆ ಕುರಿತು ವ್ಯಾಪಕ ಅರಿವು ಮುಡಿಸುವ ದಿಸೆಯಲ್ಲಿ ಈ ರೀತಿಯ ಸ್ಪರ್ಧೆಗಳು ಬಹಳಷ್ಟು ಪ್ರಯೋಜನಕಾರಿಯಾಗಿದ್ದು, ಸರ್ಕಾರ ಸಿರಿಧಾನ್ಯ ಮತ್ತು ಸಾವಯವ ಬೆಳೆಗಾರರಿಗೆ ಎಲ್ಲಾ ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿದೆ ಎಂದು ತಿಳಿಸಿದರು.
ವಿಶೇಷ ಭೂಸ್ವಾಧೀನ ಅಧಿಕಾರಿ ರಾಜಶ್ರೀ ಜೈನಾಪೂರ, ಪಾರಂಪರಿಕ ಆಹಾರ ಪದ್ಧತಿ ನಶಿಸಿ ಹೋಗುತ್ತಿದ್ದು, ಅಳಿವಿನಂಚಿನಲ್ಲಿವೆ. ಪಾರಂಪರಿಕ ಆಹಾರ ಪದ್ಧತಿಗಳ ಪೌಷ್ಟಿಕಾಂಶದ ಮಹತ್ವ ಮತ್ತು ಅವುಗಳ ಪ್ರಯೋಜನವನ್ನು ಮುಂದಿನ ಪೀಳಿಗೆಗೆ ತಿಳಿಸಿ ಸಂಪ್ರದಾಯ ಕೊಂಡೊಯ್ಯುವುದು ಅಗತ್ಯವಾಗಿದೆ. ಜನರು ದಿನನಿತ್ಯದ ಜೀವನದಲ್ಲಿ ಸಿರಿಧಾನ್ಯ ಮತ್ತು ಸಾವಯವ ಪದಾರ್ಥಗಳನ್ನು ಬಳಕೆ ಮಾಡುವುದರಿಂದ ಆರೋಗ್ಯದಜೊತೆಗೆ ರೈತರಿಗೂ ಉತ್ಸಾಹಿಸಿದಂತಾಗುತ್ತದೆ ಎಂದು ತಿಳಿಸಿದರು.ಪಾಕ ಸ್ಪರ್ಧೆಯಲ್ಲಿ ಜಿಲ್ಲೆಯಾದ್ಯಂತ ಎಲ್ಲ ತಾಲೂಕಿನಿಂದ ೮೦ ಜನ ಸ್ಪರ್ಧಿಗಳು ಭಾಗವಹಿಸಿದ್ದರು. ಸಿರಿಧಾನ್ಯ ಖಾರ ಖಾದ್ಯ ವಿಭಾಗದಲ್ಲಿ ರೂಪಾಂಜಲಿ ಭೋಸಲೆ ಪ್ರಥಮ, ವೀಣಾ ಗಜರೆ ದ್ವಿತೀಯ ಹಾಗೂ ಭಾವನಾ ಕಿತ್ತೂರಕರ ತೃತೀಯ ಸ್ಥಾನ ಪಡೆದರು. ಸಿರಿಧಾನ್ಯ ಸಿಹಿ ಖಾದ್ಯ ವಿಭಾಗದಲ್ಲಿ ಅನಿತಾ ಜೋಡಟ್ಟಿ ಪ್ರಥಮ, ವೈಷ್ಣವಿ ಹೆಬಸೂರ ದ್ವಿತೀಯ ಹಾಗೂ ಪೂಜಾ ಪಾಟೀಲ ತೃತೀಯ ಸ್ಥಾನ ಪಡೆದರು. ಮರೆತುಹೋದ ಖಾದ್ಯ ವಿಭಾಗದಲ್ಲಿ ಶೋಭಾ ದೇಯನ್ನವರ ಪ್ರಥಮ, ಸುನಂದಾ ಬನಹಟ್ಟಿ ದ್ವಿತೀಯ ಹಾಗೂ ಲತಾ ಪರವಿನಾಯ್ಕರ ತೃತೀಯ ಸ್ಥಾನ ಪಡೆದರು.
ಸಭೆಯಲ್ಲಿ ಬೆಳಗಾವಿ ವಿಭಾಗದ ಉಪಕೃಷಿ ನಿರ್ದೇಶಕ ಎಸ್.ಬಿ.ಕೊಂಗವಾಡ, ಚಿಕ್ಕೋಡಿ ವಿಭಾಗದ ಉಪಕೃಷಿ ನಿರ್ದೇಶಕ ಎಚ್.ಡಿ.ಕೋಳೆಕರ ಇತರರು ಪಾಲ್ಗೊಂಡಿದ್ದರು.