ಕೇಂದ್ರ ಬಜೆಟ್ಟಲ್ಲಿ ಮತ್ತೆ ಮಲತಾಯಿ ಧೋರಣೆ ಸಲ್ಲ: ಸಂಸದೆ ಡಾ.ಪ್ರಭಾ

KannadaprabhaNewsNetwork |  
Published : Jan 27, 2026, 02:30 AM IST
26ಕೆಡಿವಿಜಿ2-ದಾವಣಗೆರೆಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಸಚಿವ ಎಸ್ಸೆಸ್ ಮಲ್ಲಿಕಾರ್ಜುನ ಇದ್ದರು. | Kannada Prabha

ಸಾರಾಂಶ

ಮಹಾರಾಷ್ಟ್ರದ ನಂತರ ಜಿಡಿಪಿಯಲ್ಲಿ 2ನೇ ಸ್ಥಾನದಲ್ಲಿರುವ ಕರ್ನಾಟಕಕ್ಕೆ ಜಿಡಿಪಿಗೆ ತಕ್ಕಂತೆ ಫೆ.1ರಂದು ಮಂಡಿಸುವ ಕೇಂದ್ರ ಬಜೆಟ್‌ನಲ್ಲಿ ಅನುದಾನ ನೀಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಲಿ ಎಂದು ದಾವಣಗೆರೆ ಕಾಂಗ್ರೆಸ್ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ರಿಗೆ ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ದಾವಣಗೆರೆ

ಮಹಾರಾಷ್ಟ್ರದ ನಂತರ ಜಿಡಿಪಿಯಲ್ಲಿ 2ನೇ ಸ್ಥಾನದಲ್ಲಿರುವ ಕರ್ನಾಟಕಕ್ಕೆ ಜಿಡಿಪಿಗೆ ತಕ್ಕಂತೆ ಫೆ.1ರಂದು ಮಂಡಿಸುವ ಕೇಂದ್ರ ಬಜೆಟ್‌ನಲ್ಲಿ ಅನುದಾನ ನೀಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಲಿ ಎಂದು ದಾವಣಗೆರೆ ಕಾಂಗ್ರೆಸ್ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ರಿಗೆ ಒತ್ತಾಯಿಸಿದರು.

ನಗರದ ಜೆಜೆಎಂ ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಗಣರಾಜ್ಯೋತ್ಸವ ಸಮಾರಂಭದ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ್ಕೆ ಜಿಡಿಪಿಗೆ ತಕ್ಕಂತೆ ಕೇಂದ್ರ ಸರ್ಕಾರ ಅನುದಾನ ನೀಡಬೇಕು. ರಾಜ್ಯದ ವಿಚಾರದಲ್ಲಿ ಪ್ರಧಾನಿ, ಕೇಂದ್ರ ಹಣಕಾಸು ಸಚಿವರು ಮಲತಾಯಿ ಧೋರಣೆ ತೋರಿಸಬಾರದು ಎಂದರು.

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಹೊರ ವರ್ತುಲ ರಸ್ತೆ, ಭದ್ರಾ ಮೇಲ್ದಂಡೆ ಯೋಜನೆ, ಐಐಟಿ ಸ್ಥಾಪನೆ, ಏಮ್ಸ್‌ ಮಂಜೂರು ಮಾಡುವಂತೆ ಕೇಳುತ್ತಲೇ ಇದ್ದೇವೆ. ಆದರೆ, ಕೇಂದ್ರವು ಸ್ಪಂದಿಸುತ್ತಿಲ್ಲ. ಕಳೆದ ಸಲ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಆ ರಾಜ್ಯಕ್ಕೆ ಬೆಂಬಲ ನೀಡಿದ್ದರು. ಈಗ ಅಸ್ಸಾಂ, ಕೇರಳ, ತಮಿಳುನಾಡು ವಿಧಾನಸಭೆ ಚುನಾವಣೆ ಇದೆ. ಚುನಾವಣೆ ಇದ್ದ ಕಡೆಗೆ ಕೇಂದ್ರವು ಹೆಚ್ಚು ಅನುದಾನ ಬಿಡುಗಡೆ ಮಾಡುತ್ತಿದೆ ಎಂದು ಬೇಸರ ಹೊರಹಾಕಿದರು.

ಪ್ರತಿ ವರ್ಷ 20 ಸಾವಿರ ಕೋಟಿ ರು.ಗಳನ್ನು ಕರ್ನಾಟಕ ಕಳೆದುಕೊಳ್ಳುತ್ತಿದೆ. ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಇದನ್ನು ಅರ್ಥ ಮಾಡಿಕೊಳ್ಳಬೇಕು. ಆರ್ಥಿಕವಾಗಿ ಬೆಂಬಲ ನೀಡಬೇಕಾಗಿರುವುದು ಕೇಂದ್ರದ ಜವಾಬ್ಧಾರಿಯಾಗುತ್ತದೆ. ಎಂಎಸ್‌ಎಂಇ, ಸ್ಟಾರ್ಟಪ್‌ ಬಗ್ಗೆ ಕೇಂದ್ರ ಸರ್ಕಾರ ಹೇಳುತ್ತದೆ. ಎಂಎಸ್ಎಂಇ ಸೆಕ್ಟರ್‌ನಲ್ಲಿ ಉದ್ಯೋಗ ಸೃಷ್ಟಿ ಮಾಡುವ ಕೆಲಸವನ್ನು ಅದೇ ಕೇಂದ್ರ ಮಾಡಬೇಕಲ್ಲವೇ ಎಂದು ಪ್ರಶ್ನಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಬಯಲು ಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ.ಮಂಜಪ್ಪ, ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ, ಸದಸ್ಯರಾದ ವಾಣಿ ಬಕ್ಕೇಶ ನ್ಯಾಮತಿ, ಮಂಜುನಾಥ ತಕ್ಕಡಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಎಸ್ಪಿ ಉಮಾ ಪ್ರಶಾಂತ, ಜಿಪಂ ಸಿಇಒ ಗಿತ್ತೆ ಮಾಧರ ವಿಠ್ಠಲರಾವ್‌, ಪಾಲಿಕೆ ಆಯುಕ್ತೆ ರೇಣುಕಾ, ದೂಡಾ ಆಯುಕ್ತ ತಿಮ್ಮಪ್ಪ ಹುಲ್ಮನಿ, ಮಾಜಿ ಮೇಯರ್ ಕೆ.ಚಮನ್ ಸಾಬ್‌, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ, ಪಾಲಿಕೆ ಮಾಜಿ ಸದಸ್ಯರಾದ ಜಿ.ಎಸ್.ಮಂಜುನಾಥ ಗಡಿಗುಡಾಳ, ಎ.ನಾಗರಾಜ, ಬೂದಾಳ ಬಾಬು ಇತರರು ಇದ್ದರು.

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಹೊರ ವರ್ತುಲ ರಸ್ತೆ, ಮಧ್ಯ ಕರ್ನಾಟಕರ ಭದ್ರಾ ಮೇಲ್ದಂಡೆ ಯೋಜನೆ, ಐಐಟಿ ಸ್ಥಾಪನೆ ಹೀಗೆ ಸಾಕಷ್ಟು ಯೋಜನೆಗಳಿಗೆ ಪ್ರತಿ ಬಾರಿಯೂ ಅನುದಾನ ಕೇಳುತ್ತಿದ್ದೇವೆ. ಆದರೆ, ಕೇಂದ್ರ ಸರ್ಕಾರ ನಮಗೆ ಮಲತಾಯಿ ಧೋರಣೆ ತೋರುತ್ತಿದೆ. ಇದು ಸರಿಯಲ್ಲ. ವಿಬಿ ಜಿ ರಾಮ್ ಜಿ ರದ್ದುಗೊಳಿಸಿ, ಮನರೇಗಾ ಮರು ಜಾರಿಗೊಳಿಸಲಿ.

ಡಾ.ಪ್ರಭಾ ಮಲ್ಲಿಕಾರ್ಜುನ್‌ ಸಂಸದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಪಾಲಿನ ಶ್ರೀರಾಮ : ಶಾಸಕ ಪ್ರದೀಪ್‌ ಈಶ್ವರ್‌
ಜಿ ರಾಮ್‌ ಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಪಡೆ - ದುಡಿವ ಕೈಗಳ ಅನ್ನ ಕಸಿವ ಕಾಯ್ದೆ