ಕೊನೆ ಭಾಗದ ಜಮೀನುಗಳಿಗೆ ನೀರು ಹರಿಸಲು ಶಾಶ್ವತ ಯೋಜನೆಗೆ ಕ್ರಮ: ಕೆ.ಎಂ.ಉದಯ್

KannadaprabhaNewsNetwork |  
Published : Nov 05, 2026, 01:45 AM IST
4ಕೆಎಂಎನ್ ಡಿ21 | Kannada Prabha

ಸಾರಾಂಶ

ಕೂಳಗೆರೆ ಗ್ರಾಮದ ಪ್ರದೇಶ ತಾಲೂಕು ವ್ಯಾಪ್ತಿಯ ಕೊನೇ ಭಾಗವಾಗಿದೆ. ರಸ್ತೆ ಮತ್ತು ಚರಂಡಿ ಕಾಮಗಾರಿಗಳು ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ರೈತರ ಜಮೀನುಗಳಿಗೆ ನೀರು ತಲುಪಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಮಸ್ಯೆ ಬಗೆಹರಿಸಲು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ವಹಿಸಲಾಗಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ತಾಲೂಕಿನ ಕೂಳಗೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊನೇ ಭಾಗದ ರೈತರ ಜಮೀನುಗಳಿಗೆ ಸಮರ್ಪಕ ನೀರು ಹರಿಸುವ ಸಂಬಂಧ ಶಾಶ್ವತ ಯೋಜನೆ ರೂಪಿಸಲು ಅಗತ್ಯ ಕ್ರಮ ವಹಿಸಿರುವುದಾಗಿ ಶಾಸಕ ಕೆ.ಎಂ.ಉದಯ್ ತಿಳಿಸಿದರು.

ತಾಲೂಕಿನ ಕೂಳಗೆರೆಯಲ್ಲಿ ಐಬಿಪಿ ಯೋಜನೆಯಡಿ ಆರಂಭಿಸುವ ಕಾಲುವೆ ಹಾಗೂ ಎಲ್ಐಎಸ್ಬಿ ಪಾಯಿಂಟ್ ಸೇವಾ ರಸ್ತೆ ಕಾಮಗಾರಿಗೆ ಬಿಡುಗಡೆಯಾಗಿರುವ 4.90 ಕೋಟಿ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಕೂಳಗೆರೆ ಗ್ರಾಮದ ಪ್ರದೇಶ ತಾಲೂಕು ವ್ಯಾಪ್ತಿಯ ಕೊನೇ ಭಾಗವಾಗಿದೆ. ರಸ್ತೆ ಮತ್ತು ಚರಂಡಿ ಕಾಮಗಾರಿಗಳು ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ರೈತರ ಜಮೀನುಗಳಿಗೆ ನೀರು ತಲುಪಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಮಸ್ಯೆ ಬಗೆಹರಿಸಲು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ವಹಿಸಲಾಗಿದೆ ಎಂದರು.

ತಾಲೂಕಿನ ಕೆ.ಹೊನ್ನಗೆರೆಯಲ್ಲಿ ಉಪ ಪೊಲೀಸ್ ಠಾಣೆ ಸ್ಥಾಪಿಸುವ ಸಂಬಂಧ ಗೃಹ ಸಚಿವರೊಂದಿಗೆ ಈಗಾಗಲೇ ಚರ್ಚೆ ನಡೆಸಿದ್ದೇನೆ. ವಸತಿ ಗೃಹ ನಿರ್ಮಾಣ ಜತೆಗೆ ಬನ್ನಳ್ಳಿ ಮತ್ತು ಚಿಕ್ಕರಸಿಕೆರೆ ಏತ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ತಾಲೂಕಿನಲ್ಲಿ ಮುಂದಿನ ದಿನಗಳಲ್ಲಿ ರೈತರಿಗೆ ಬೇಸಾಯ ಮಾಡಲು ನೀರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಸರಕಾರದಿಂದ ವಿಶೇಷ ಅನುದಾನ ತಂದು ಶಾಶ್ವತ ನೀರಾವರಿ ಯೋಜನೆಗಳನ್ನು ಕೈಗೊಂಡಿದ್ದೇನೆ. ಈಗಾಗಲೇ ಕೆಲ ಕಾಮಗಾರಿಗಳು ಪೂರ್ಣಗೊಂಡು ಸ್ಥಳೀಯ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮುಖಂಡರಾದ ಶ್ರೀನಿವಾಸ್ ಗೌಡ ಕೆ.ಎಲ್.ಜಯರಾಮು, ತಿಪ್ಪೂರು ಮನು, ಕೆಂಪರಾಜು, ರಾಜಣ್ಣ, ಯೋಗೇಶ್, ಮಾದೇಶ್, ಸುರೇಶ್, ಕೃಷ್ಣೇಗೌಡ, ಕುಮಾರ್ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗಳನ್ನು ಲವ್‌ ಮಾಡಿದ್ದಕ್ಕೆ ಕೆಲಸಗಾರನ ಹತ್ಯೆ
ಡೇಟಿಂಗ್‌ ಆ್ಯಪಲ್ಲಿ ಪರಿಚಯವಾದಯುವಕನ ದರೋಡೆ: ನಾಲ್ವರ ಸೆರೆ