ನಿರಂತರ ಗುಣಮಟ್ಟದ ವಿದ್ಯುತ್ ವಿತರಣೆಗೆ ಕ್ರಮ: ತೇಜ್ಯಾನಾಯ್ಕ

KannadaprabhaNewsNetwork |  
Published : Feb 24, 2026, 03:45 AM IST
ಸ | Kannada Prabha

ಸಾರಾಂಶ

ತಂಬ್ರಹಳ್ಳಿ ಗ್ರಾಮದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೨೦ ಎಂವಿಎ ಸಾಮರ್ಥ್ಯದ ವಿದ್ಯುತ್ ಪರಿವರ್ತಕ ಅಳವಡಿಕೆ ಕಾಮಗಾರಿ ಸೋಮವಾರದಿಂದ ಪ್ರಾರಂಭಿಸಲಾಗುತ್ತದೆ

ಹಗರಿಬೊಮ್ಮನಹಳ್ಳಿ: ತಂಬ್ರಹಳ್ಳಿ ಗ್ರಾಮದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೨೦ ಎಂವಿಎ ಸಾಮರ್ಥ್ಯದ ವಿದ್ಯುತ್ ಪರಿವರ್ತಕ ಅಳವಡಿಕೆ ಕಾಮಗಾರಿ ಸೋಮವಾರದಿಂದ ಪ್ರಾರಂಭಿಸಲಾಗುತ್ತದೆ ಎಂದು ಬಳ್ಳಾರಿ ಗೆಸ್ಕಾಂ ವಲಯದ ಮುಖ್ಯ ಅಭಿಯಂತರ ಆರ್.ತೇಜ್ಯಾನಾಯ್ಕ ತಿಳಿಸಿದರು.

ತಾಲೂಕಿನ ತಂಬ್ರಹಳ್ಳಿ ಗ್ರಾಮದ ಕೊಟ್ಟೂರೇಶ್ವರ ದೇವಸ್ಥಾನದಲ್ಲಿ ನೂತನ ವಿದ್ಯುತ್ ಪರಿವರ್ತಕ ಅಳವಡಿಕೆ ಹಿನ್ನೆಲೆಯಲ್ಲಿ ಶನಿವಾರ ಆಯೋಜಿಸಲಾಗಿದ್ದ ರೈತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿ, ಇದೇ ಮಾರ್ಚ್‌ ಒಂದರಿಂದ ತಂಬ್ರಹಳ್ಳಿ ಗ್ರಾಮದಲ್ಲಿ ನೂತನ ಶಾಖಾ ಕಚೇರಿ ತೆರೆದು ಇಬ್ಬರು ಲೈನ್ ಮನ್ ಗಳನ್ನು ನಿಯೋಜಿಸಲಾಗುವುದು ಎಂದರು.ಕಳೆದ ಹಲವಾರು ವರ್ಷಗಳಿಂದ ಇದ್ದ ಹಳೆಯ ೧೨ಎಂ.ವಿ.ಎ. ಪರಿವರ್ತಕ(ಟಿಸಿ)ದಲ್ಲಿ ಓವರ್ ಲೋಡ್ ಸಮಸ್ಯೆಯಿಂದಾಗಿ ರೈತರಿಗೆ ಸಮರ್ಪಕ ವಿದ್ಯುತ್ ಒದಗಿಸಲು ಸಾಧ್ಯವಾಗಿರಲಿಲ್ಲ. ಹೊಸ ಪರಿವರ್ತಕ ಅಳವಡಿಸಿದ ನಂತರ ವೋಲ್ಟೇಜ್ ಸಮಸ್ಯೆ ನಿವಾರಣೆಯಾಗಿ ನೀರಾವರಿ ಕೃಷಿ ಕ್ಷೇತ್ರಕ್ಕೆ ನಿರಂತರ ಮತ್ತು ಗುಣಮಟ್ಟದ ವಿದ್ಯುತ್ ಒದಗಿಸಲಾಗುತ್ತದೆ ಎಂದು ಭರವಸೆ ನೀಡಿದರು.

ನೂತನ ಪರಿವರ್ತಕ ಅಳವಡಿಕೆ ಕಾಮಗಾರಿ ವೇಳೆ ಸ್ವಲ್ಪ ಮಟ್ಟಿನ ವಿದ್ಯುತ್ ವ್ಯತ್ಯಯ ಉಂಟಾಗುವ ಸಾಧ್ಯತೆ ಇದ್ದು, ರೈತರು ಇಲಾಖೆಯೊಂದಿಗೆ ಸಹಕರಿಸಲು ಕೋರಿದರು. ಜೊತೆಗೆ ಜಿ.ಕೋಡಿಹಳ್ಳಿ ಮತ್ತು ತೆಲುಗೋಳಿ ಗ್ರಾಮಗಳಿಗೆ ನೂತನ ಉಪ ವಿತರಣಾ ಕೇಂದ್ರಗಳ ಮಂಜೂರಾತಿ ದೊರೆತಿದ್ದು, ಟೆಂಡರ್ ಕರೆಯಲಾಗಿದೆ ಎಂದರು.

ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್ ಮಾತನಾಡಿ, ತುಂಗಭದ್ರಾ ಜಲಾಶಯದ ನಿರ್ಮಾಣದ ಹಿನ್ನೆಲೆಯಲ್ಲಿ ನಿರಾಶ್ರಿತರಾದ ಈ ಭಾಗದ ಬಹುತೇಕ ಜನರು ಕೃಷಿ ಮೇಲೆ ಅವಲಂಬಿತರಾಗಿದ್ದು ಇವರ ಜಮೀನುಗಳನ್ನು ನೀರಾವರಿ ಸೌಲಭ್ಯ ಕಲ್ಪಿಸುವ ಅಗತ್ಯ ಇದೆ. ಪೂರಕ ವಿದ್ಯುತ್ ವಿತರಣೆಗೆ ಆಗ್ರಹಿಸಿ ಕಳೆದ ಹಲವು ವರ್ಷಗಳಿಂದ ಈ ಭಾಗದ ರೈತರು ನಿರಂತರವಾಗಿ ಹೋರಾಟ ನಡೆಸಿದ ಫಲವಾಗಿ ಹೆಚ್ಚಿನ ಸಾಮರ್ಥ್ಯದ ವಿದ್ಯುತ್ ಪರಿವರ್ತಕಕ್ಕೆ ಮಂಜೂರಾತಿ ದೊರೆತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇಟಗಿ ಸ್ವೀಕರಣಾ ಘಟಕದ ಕಾರ್ಯ ನಿರ್ವಾಹಕ ಅಭಿಯಂತರ ರವೀಂದ್ರನಾಥ್ ಹಾಗೂ ಪಟ್ಟಣದ ಇಇ ಸತೀಶ್ ಮತ್ತು ಉಪ ವಿಭಾಗದ ನಾಗರಾಜ್ ಕುರೇಕುಪ್ಪ ರೈತರೊಂದಿಗೆ ಸಂವಾದ ನಡೆಸಿದರು. ಸಭೆಯಲ್ಲಿ ಹ್ಯಾಟಿ ಆನಂದರೆಡ್ಡಿ, ಮೈನಳ್ಳಿ ಕೊಟ್ರೇಶಪ್ಪ, ಬಾಣದ ಶಿವಪ್ಪ, ಆಂಜನೇಯರೆಡ್ಡಿ, ಚಿಲಗೋಡು ದೊಡ್ಡಬಸಪ್ಪ, ಗುಡ್ಡದ್ ಮೋಹನರೆಡ್ಡಿ, ಯಂಕಾರೆಡ್ಡಿ, ಮುತ್ಕೂರು ಲಚ್ಚಪ್ಪ, ನಿವೃತ್ತ ತಾ.ಪಂ.ಇಓ ಟಿ.ವೆಂಕೋಬಪ್ಪ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೊಂದಲಗಳಿಗೆ ಶೀಘ್ರ ತೆರೆ: ಸತೀಶ್ ಜಾರಕಿಹೊಳಿ
ಪೌಷ್ಟಿಕ ಆಹಾರ ಸೇವಿಸಿ ಸದೃಢರಾಗಿ: ಡಾ. ಪ್ರಕಾಶ ಸಂಕನೂರ