ಮನೆ ಮನೆಗೆ ಸರ್ಕಾರ ಅಭಿಯಾನ ವ್ಯವಸ್ಥಿತ ಜಾರಿಗೆ ಕ್ರಮ: ಜಿಲ್ಲಾಧಿಕಾರಿ ಎ.ಬಿ.ಬಸವರಾಜು

KannadaprabhaNewsNetwork |  
Published : Sep 25, 2025, 01:00 AM IST
ಬೆಂ.ಗ್ರಾ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2025 ನೇ ಸಾಲಿನ ಮೂರನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. | Kannada Prabha

ಸಾರಾಂಶ

ಮನೆ ಮನೆಗೆ ಕಾರ್ಯಾಂಗ ಎಂಬ ಅಭಿಯಾನದಲ್ಲಿ ಪ್ರತಿ ಮನೆಗೆ ಒಂದು ಕ್ಯೂಆರ್ ಕೋಡ್ ಅನ್ನು ಅಂಟಿಸಲಾಗುವುದು. ಅದನ್ನು ಸ್ಕ್ಯಾನ್ ಮಾಡಿದರೆ ಗ್ರಾಮ ಪಂಚಾಯಿತಿಯಿಂದ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳ ಸಂಪರ್ಕ ಸಂಖ್ಯೆ ಸಿಗುತ್ತದೆ.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಮನೆ ಮನೆಗೆ ಪೋಲಿಸ್ ಅಭಿಯಾನದ ಜೊತೆಯಲ್ಲಿ ಇದೀಗ ಮನೆ- ಮನೆಗೆ ಸರ್ಕಾರ ಎಂಬ ಅಭಿಯಾನವನ್ನು ನಡೆಸಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು.

ಬೆಂ.ಗ್ರಾ. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2025ನೇ ಸಾಲಿನ ಮೂರನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ, ಪಿಇಎಂಎಸ್ ಮತ್ತು ಆರ್ ಕಾಯ್ದೆ 2013 ರ ಸಮಿತಿ ಸಭೆ, ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮನೆ ಮನೆಗೆ ಕಾರ್ಯಾಂಗ ಎಂಬ ಅಭಿಯಾನದಲ್ಲಿ ಪ್ರತಿ ಮನೆಗೆ ಒಂದು ಕ್ಯೂಆರ್ ಕೋಡ್ ಅನ್ನು ಅಂಟಿಸಲಾಗುವುದು. ಅದನ್ನು ಸ್ಕ್ಯಾನ್ ಮಾಡಿದರೆ ಗ್ರಾಮ ಪಂಚಾಯಿತಿಯಿಂದ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳ ಸಂಪರ್ಕ ಸಂಖ್ಯೆ ಸಿಗುತ್ತದೆ. ಜೊತೆಗೆ ನಿಮ್ಮ ಸಮಸ್ಯೆಯನ್ನು ಅವರಿಗೆ ಕ್ಷಣಾರ್ಧದಲ್ಲಿ ತಿಳಿಸಬಹುದು. ಇದರಿಂದ ಅಧಿಕಾರಿಗಳನ್ನು ಹುಡುಕಿಕೊಂಡು ಕಚೇರಿಗಳಿಗೆ ಸುತ್ತುವುದು ತಪ್ಪುತ್ತದೆ ನಿಮ್ಮ ಸಮಸ್ಯೆಗೆ ಬೇಗನೆ ಪರಿಹಾರ ಸಿಗುತ್ತದೆ ಎಂದರು.

ಮನೆ ಮನೆಗೆ ಸರ್ಕಾರ ಅಭಿಯಾನದಡಿ ಸರ್ಕಾರದ ಕಾರ್ಯಾಂಗ ವೈಖರಿ ಸಾರ್ವಜನಿಕರಿಗೆ ಇನ್ನಷ್ಟು ಹತ್ತಿರವಾಗಬೇಕು ಎಂಬ ಉದ್ದೇಶ. ಆರಂಭಿಕ ಹಂತದಲ್ಲಿ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮ ಪಂಚಾಯತಿಯನ್ನು ಆಯ್ಕೆ ಮಾಡಲಾಗಿದ್ದು ಕಾರ್ಯಾರಂಭ ಮಾಡಲಾಗುತ್ತದೆ ಎಂದರು.

13 ದೌರ್ಜನ್ಯ ಪ್ರಕರಣ ದಾಖಲು:

ಜುಲೈ 1ರಿಂದ ಇಲ್ಲಿಯವರೆಗೂ ಒಟ್ಟು 13 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಪರಿಹಾರ ಧನದ ಮಂಜೂರಾತಿ ವಿವರಗಳ ಪರಿಶೀಲನೆ ನಡೆಸಿ 13 ಪ್ರಕರಣಗಳಲ್ಲಿ ನೊಂದ 44 ಸಂತ್ರಸ್ತರಿಗೆ ಒಟ್ಟು 22.30 ಲಕ್ಷ ರು.ಗಳ ಪರಿಹಾರ ಧನವನ್ನು ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ವೇತನ ನೀಡಿ:

ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ವೇತನ ಪಾವತಿಯಾಗಿಲ್ಲ. ಕೂಡಲೇ ವೇತನ ಪಾವತಿ ಮಾಡಿ ಪಾವತಿಯಲ್ಲಿ ವಿಳಂಬವಾದರೆ ಕ್ರಮ ವಹಿಸಲಾಗುವುದು. ಅವರಿಗೆ ಸಿಗಬೇಕಾದಂತಹ ನಿವೇಶನ, ಮನೆ ಒದಗಿಸಬೇಕು, ಸರ್ಕಾರದಿಂದ ಸಿಗುವಂತಹ ಸಾಲ ಸೌಲಭ್ಯ ಕಲ್ಪಿಸಿ. ಸಫಾಯಿ ಕರ್ಮಚಾರಿಗಳ ಕುಟುಂಬಗಳಿಗೆ ವ್ಯಾಪಾರ, ವ್ಯವಹಾರಕ್ಕಾಗಿ ವಿವಿಧ ಕೌಶಲ್ಯ ತರಬೇತಿ, ಮಾರ್ಗದರ್ಶನ ನೀಡಿ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದರು

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಮಾತಾನಾಡಿ, ಜಿಲ್ಲೆಯ ಪ್ರತಿಯೊಂದು ಪೊಲೀಸ್ ಠಾಣೆಯಲ್ಲೂ ಒಂದು ಕ್ಯೂಆರ್ ಕೋಡ್ ಅಂಟಿಸಲಾಗಿದೆ. ನೀವು ಅದನ್ನು ಸ್ಕ್ಯಾನ್ ಮಾಡಿ ಅದರಲ್ಲಿ ನಿಮಗೆ ಬೇಕಾದ ಮಾಹಿತಿಯನ್ನು ಪಡೆಯಬಹುದು. ಕೆಲವು ಬಾರಿ ಪೊಲೀಸ್ ಅಧಿಕಾರಿಗಳು ದೂರು ತೆಗೆದುಕೊಳ್ಳುವುದಿಲ್ಲ ಎಂಬ ಮಾತು ಕೇಳಿ ಬರುತ್ತವೆ. ಅದಕ್ಕಾಗಿ ನೀವು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಅದರಲ್ಲಿ ಜಿಲ್ಲೆಯ ಎಲ್ಲಾ ಪೋಲಿಸ್ ಅಧಿಕಾರಿಗಳನ್ನು ಸಂಪರ್ಕಿಸಲು ದೂರವಾಣಿ ಸಂಖ್ಯೆ ಸಿಗುತ್ತದೆ. ನೀವು ಅದರ ಮೂಲಕ ನಿಮ್ಮ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ಎನ್.ಅನುರಾಧ, ಡಿವೈಎಸ್ಪಿ ರವಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಟಿ.ಎಲ್.ಎಸ್. ಪ್ರೇಮ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜಾಗೃತಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಫೋಟೋ-24ಕೆಡಿಬಿಪಿ1- ಬೆಂ.ಗ್ರಾ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2025 ನೇ ಸಾಲಿನ ಮೂರನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ