ಹೂವಿನ ಅಂಗಡಿಗಳು, ಹೋಟೆಲ್‌ಗಳು ಹಾಗೂ ಕೆಲವು ಸರ್ಕಾರಿ ಅಂಗಡಿಗಳಲ್ಲೂ ಪ್ಲಾಸ್ಟಿಕ್ ಬಳಕೆ ಹೆಚ್ಚುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ತಡೆಗಟ್ಟಲು ದಂಡ ವಿಧಿಸುವ ಕಾರ್ಯ ಆರಂಭವಾಗಿದ್ದು, ಕೇವಲ ಒಂದು ದಿನದಲ್ಲೇ ಸುಮಾರು ₹5,000ದಷ್ಟು ದಂಡ ವಸೂಲಿ ಮಾಡಲಾಗಿದೆ. ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಮಾತ್ರವಲ್ಲ, ಹಸು-ಕರುಗಳಂತಹ ಪ್ರಾಣಿಗಳಿಗೂ ಅಪಾಯ ಉಂಟಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ ಬಟ್ಟೆ ಚೀಲಗಳನ್ನು ಬಳಸಬೇಕು ಎಂದು ಮನವಿ ಮಾಡಿದರು.
ಕನ್ನಡಪ್ರಭ ವಾರ್ತೆ ಬೇಲೂರು
ಪುರಸಭೆ ಅಧ್ಯಕ್ಷೆ ಉಷಾ ಸತೀಶ್ ಹಾಗೂ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಪಟ್ಟಣದ ಪುರಸಭೆ ವ್ಯಾಪ್ತಿಯ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡು ಮಾಲೀಕರಿಗೆ ದಂಡ ವಿಧಿಸಲಾಯಿತುಪುರಸಭೆ ಅಧ್ಯಕ್ಷೆ ಉಷಾ ಸತೀಶ್ ಮಾತನಾಡಿ, ಪಟ್ಟಣವನ್ನು ಸ್ವಚ್ಛ ಹಾಗೂ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ನಗರದಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಹೂವಿನ ಅಂಗಡಿಗಳು, ಹೋಟೆಲ್‌ಗಳು ಹಾಗೂ ಕೆಲವು ಸರ್ಕಾರಿ ಅಂಗಡಿಗಳಲ್ಲೂ ಪ್ಲಾಸ್ಟಿಕ್ ಬಳಕೆ ಹೆಚ್ಚುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ತಡೆಗಟ್ಟಲು ದಂಡ ವಿಧಿಸುವ ಕಾರ್ಯ ಆರಂಭವಾಗಿದ್ದು, ಕೇವಲ ಒಂದು ದಿನದಲ್ಲೇ ಸುಮಾರು ₹5,000ದಷ್ಟು ದಂಡ ವಸೂಲಿ ಮಾಡಲಾಗಿದೆ. ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಮಾತ್ರವಲ್ಲ, ಹಸು-ಕರುಗಳಂತಹ ಪ್ರಾಣಿಗಳಿಗೂ ಅಪಾಯ ಉಂಟಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ ಬಟ್ಟೆ ಚೀಲಗಳನ್ನು ಬಳಸಬೇಕು ಎಂದು ಮನವಿ ಮಾಡಿದರು.ಪುರಸಭೆ ಮುಖ್ಯಾಧಿಕಾರಿ ಬಸವರಾಜು ಶಿಗ್ಗಾಂವಿ ಮಾತನಾಡಿ, ಪಟ್ಟಣದ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಮಾರಾಟಗಾರರು ಹಾಗೂ ಸಾರ್ವಜನಿಕರಿಗೆ ಈ ಹಿಂದೆಯೇ ಪ್ಲಾಸ್ಟಿಕ್ ಬಳಕೆ ನಿಷೇಧದ ಕುರಿತು ತಿಳಿವಳಿಕೆ ನೀಡಲಾಗಿತ್ತು. ಆದರೂ ಪ್ಲಾಸ್ಟಿಕ್ ಬಳಕೆ ಮುಂದುವರಿದ ಹಿನ್ನೆಲೆಯಲ್ಲಿ ಇಂದು ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಸುಮಾರು 30 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದ್ದು, ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದವರಿಗೆ ಒಟ್ಟು ಸುಮಾರು ₹5,000 ದಂಡ ವಿಧಿಸಲಾಗಿದೆ ಎಂದರು.
ಸಾರ್ವಜನಿಕರು ಮಾರುಕಟ್ಟೆಗೆ ಬರುವಾಗ ಕಡ್ಡಾಯವಾಗಿ ಬಟ್ಟೆ ಬ್ಯಾಗ್‌ಗಳನ್ನು ತರಬೇಕು. ವ್ಯಾಪಾರಸ್ಥರು ತಮ್ಮ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಿ, ಬಟ್ಟೆ ಬ್ಯಾಗ್‌ಗಳನ್ನೇ ಬಳಸಬೇಕು ಹಾಗೂ ಗ್ರಾಹಕರಿಗೂ ಅದನ್ನೇ ನೀಡಬೇಕು. ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕಾಗಿ ಕೈಗೊಂಡಿರುವ ಈ ಕಾರ್ಯಾಚರಣೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷೆ ಹಾಗು ಹಾಲಿ ಸದಸ್ಯೆ ತೀರ್ಥಕುಮಾರಿ ವೆಂಕಟೇಶ್, ಮೀನಾಕ್ಷಿ ವೆಂಕಟೇಶ್ , ಜಮಿಲಾ ತೌಪಿಕ್, ಆರೋಗ್ಯ ಅಧಿಕಾರಿ ಲೊಹಿತ್ ಇತರರು ಹಾಜರಿದ್ದರು
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.