ಪೌರ ಕಾರ್ಮಿಕರಿಗೆ ನಿವೇಶನ ದೊರಕಿಸಲು ಕ್ರಮ

KannadaprabhaNewsNetwork |  
Published : Sep 28, 2025, 02:00 AM IST
27ಎಚ್ಎಸ್ಎನ್12 :  | Kannada Prabha

ಸಾರಾಂಶ

ಪೌರ ಕಾರ್ಮಿಕ ರವಿಕುಮಾರ್‌ರವರು ಪೌರ ಕಾರ್ಮಿಕರಿಗೆ ನಿವೇಶನ ಹಂಚಿಕೆ ಮಾಡುವುದು ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿದೆ. ಕೂಡಲೆ ಹಂಚಿಕೆ ಮಾಡಬೇಕು ಎಂದು ಮನವಿ ಮಾಡಿದ ಸಂದರ್ಭದಲ್ಲಿ, ಮುಖ್ಯಾಧಿಕಾರಿ ಪ್ರತಿಕ್ರಿಯಿಸಿ, ನಿವೇಶನ ಹಂಚಿಕೆ ಕುರಿತು ಇದ್ದ ಕೆಲವು ತಾಂತ್ರಿಕ ಅಡಚಣೆಗಳನ್ನು ನಿವಾರಿಸಿ ಜಿಲ್ಲಾಧಿಕಾರಿಗಳ ಲಾಗಿನ್‌ಗೆ ಅಪಲೋಡ್ ಮಾಡಲಾಗಿದೆ. ಸದ್ಯದಲ್ಲೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ನಿವೇಶನ ಹಂಚಿಕೆ ಕುರಿತು ಮನವಿ ಮಾಡಿಕೊಳ್ಳಲಾಗುವುದು. ಜಿಲ್ಲಾಧಿಕಾರಿಗಳು ಮನವಿಗೆ ಸ್ಪಂದಿಸುವ ವಿಶ್ವಾಸವಿದೆ ಎಂದರು.

ಕನ್ನಡಪ್ರಭ ವಾರ್ತೆ ಆಲೂರು

ಪೌರ ಕಾರ್ಮಿಕರಿಗೆ ನಿವೇಶನ ದೊರಕಿಸುವ ಸಲುವಾಗಿ ಅತಿ ಶೀಘ್ರದಲ್ಲಿ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿಕೊಳ್ಳಲಾಗುವುದು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್ ತಿಳಿಸಿದರು.

ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಸಂದರ್ಭದಲ್ಲಿ ಪೌರ ಕಾರ್ಮಿಕ ರವಿಕುಮಾರ್‌ರವರು ಪೌರ ಕಾರ್ಮಿಕರಿಗೆ ನಿವೇಶನ ಹಂಚಿಕೆ ಮಾಡುವುದು ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿದೆ. ಕೂಡಲೆ ಹಂಚಿಕೆ ಮಾಡಬೇಕು ಎಂದು ಮನವಿ ಮಾಡಿದ ಸಂದರ್ಭದಲ್ಲಿ, ಮುಖ್ಯಾಧಿಕಾರಿ ಪ್ರತಿಕ್ರಿಯಿಸಿ, ನಿವೇಶನ ಹಂಚಿಕೆ ಕುರಿತು ಇದ್ದ ಕೆಲವು ತಾಂತ್ರಿಕ ಅಡಚಣೆಗಳನ್ನು ನಿವಾರಿಸಿ ಜಿಲ್ಲಾಧಿಕಾರಿಗಳ ಲಾಗಿನ್‌ಗೆ ಅಪಲೋಡ್ ಮಾಡಲಾಗಿದೆ. ಸದ್ಯದಲ್ಲೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ನಿವೇಶನ ಹಂಚಿಕೆ ಕುರಿತು ಮನವಿ ಮಾಡಿಕೊಳ್ಳಲಾಗುವುದು. ಜಿಲ್ಲಾಧಿಕಾರಿಗಳು ಮನವಿಗೆ ಸ್ಪಂದಿಸುವ ವಿಶ್ವಾಸವಿದೆ.

ಪೌರ ಕಾರ್ಮಿಕರ ಮತ್ತು ಕುಟುಂಬದ ಆರೋಗ್ಯ ಇನ್ನಿತರೆ ರಕ್ಷಣೆಗೆ ಸರ್ಕಾರ ಸದಾ ಸಿದ್ಧವಿದೆ. ಈಗಾಗಲೇ ಪಟ್ಟಣ ಪಂಚಾಯಿತಿ ವತಿಯಿಂದ ಸುಬ್ಬಮ್ಮ ಮತ್ತು ಲೋಕೇಶ್ ಇಬ್ಬರು ಪೌರ ಕಾರ್ಮಿಕರು ಸಿಂಗಪುರ ದೇಶಕ್ಕೆ ಭೇಟಿ ನೀಡಿ ಆ ದೇಶದ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿರುವುದು ವಿಶೇಷ ಎಂದರು. ಪ.ಪಂ. ಅಧ್ಯಕ್ಷೆ ತಾಹೆರಾಬೇಗಂರವರು ಮಾತನಾಡಿ, ಪೌರ ಕಾರ್ಮಿಕರು ಆರೋಗ್ಯವಂತರಾಗಿದ್ದರೆ ಸಮಾಜ ಆರೋಗ್ಯಮಯವಾಗಿರುತ್ತದೆ. ತಮ್ಮ ದೈನಂದಿನ ಕೆಲಸದ ಜೊತೆಗೆ ತಮ್ಮ ಹಾಗೂ ತಮ್ಮ ಕುಟುಂಬದ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಪೌರ ಕಾರ್ಮಿಕರ ಇಬ್ಬರು ಮಕ್ಕಳಿಗೆ ಶಿಕ್ಷಣ ಅಭ್ಯುದಯಕ್ಕಾಗಿ ಈಗಾಗಲೇ ಲ್ಯಾಪ್‌ಟಾಪ್ ನೀಡಲಾಗಿದೆ. ಶಿಕ್ಷಣದಿಂದ ವಂಚಿತರಾಗಬಾರದು ಎಂದರು.

ಉಪಾಧ್ಯಕ್ಷೆ ಪ್ರೇಮ, ಸದಸ್ಯರಾದ ತೌಫಿಕ್, ಹರೀಶ್, ಧರ್ಮ, ಸಂತೋಷ್ ಅವರು ಮಾತನಾಡಿ, ದೇಶ ರಕ್ಷಣೆ ಮಾಡುವವರು ಸಿಪಾಯಿಗಳಾದರೆ, ಸ್ವಚ್ಛತೆ ಕಾಪಾಡುವವರು ಪೌರ ಕಾರ್ಮಿಕರು. ಸರ್ಕಾರದಿಂದ ದೊರಕುವ ಸಮವಸ್ತ್ರ ಮತ್ತು ರಕ್ಷಣಾ ಸವಲತ್ತುಗಳನ್ನು ಬಳಸಿಕೊಂಡು ಕೆಲಸದಲ್ಲಿ ತೊಡಗಬೇಕು ಎಂದರು.

ಪೌರಕಾರ್ಮಿಕರು ಪಟ್ಟಣದಲ್ಲಿ ಡೋಲು ವಾದ್ಯೊಂದಿಗೆ ಮೆರವಣಿಗೆ ನಡೆಸಿ ಕುಣಿದು ಕುಪ್ಪಳಿಸಿದರು. ಪಟ್ಟಣ ಪಂಚಾಯಿತಿ ಕಟ್ಟಡವನ್ನು ಹೂ, ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು. ಆಟೋಟಗಳಲ್ಲಿ ವಿಜಯಿಗಳಾದ ಪೌರ ಕಾರ್ಮಿಕರ ಕುಟುಂಬದವರಿಗೆ ಬಹುಮಾನ ವಿತರಿಸಲಾಯಿತು. ನೀರುಗಂಟಿಗಳು ಸೇರಿದಂತೆ ೩೨ ಪೌರ ಕಾರ್ಮಿಕರಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.

----------------ಫೋಟೋ ಶೀರ್ಷಿಕೆ:

ಆಲೂರು ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರ ದಿನಾಚರಣೆ ಸಂದರ್ಭದಲ್ಲಿ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಅಧ್ಯಕ್ಷೆ ತಾಹೆರಬೇಗಂ, ಉಪಾಧ್ಯಕ್ಷೆ ಪ್ರೇಮ, ಮುಖ್ಯಾಧಿಕಾರಿ ಮಂಜುನಾಥ್, ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ