
ಕನ್ನಡಪ್ರಭ ವಾರ್ತೆ ಅರಕಲಗೂಡು
ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಸಲಹೆ- ಸೂಚನೆಗಳನ್ನು ನೀಡಿದ ಅವರು, 13 ವರ್ಷಗಳ ಹಿಂದೆ ಪ್ರಾರಂಭಿಸಲಾಗಿದ್ದ ಯೋಜನೆಯು ನೆನೆಗುದಿಗೆ ಬಿದ್ದಿದೆ. ತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಿಸಲು ಅಗತ್ಯವಾದ ಭೂಮಿಯನ್ನು ಸಹ ಖರೀದಿ ಮಾಡಲಾಗಿದೆ. ವಿಳಂಭ ನೀತಿ ಅನುಸರಿಸದೆ ಕೂಡಲೇ ಕಾರ್ಯ ಪ್ರವೃತ್ತರಾಗಬೇಕು. ಪಟ್ಟಣ ವ್ಯಾಪ್ತಿಯಲ್ಲಿ 80 ಕಿಮೀ ಒಳಚರಂಡಿ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು, ಈಗ ಪಟ್ಟಣ ಸಾಕಷ್ಟು ಬೆಳೆದಿದೆ. ಮುಂದಿನ 30 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿರಿಸಿಕೊಂಡು ಯೋಜನೆಯನ್ನು ವಿಸ್ತರಿಸಿ ಹೆಚ್ಚಿನ ಅನುದಾನ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಲಾಗುವುದು. ಕಾಮಗಾರಿ ನಡೆಸಲು ಅಗತ್ಯ ಸಹಕಾರ ನೀಡುವಂತೆ ತಹಸೀಲ್ದಾರ್, ಸರ್ವೇ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತುರ್ತು ಕಾಮಗಾರಿ ಪಟ್ಟಿ ಸಿದ್ಧಪಡಿಸುವಂತೆ ಸೂಚನೆ:ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಮಂಜು, ಸರ್ಕಾರ ಶಾಸಕರ ನಿಧಿಯಲ್ಲಿ ಶೇ. 75ರಷ್ಟು ಅನುದಾನವನ್ನು ಇಲಾಖೆ ಕಾಮಗಾರಿಗೆ ಬಳಸುವಂತೆ ಸೂಚಿಸಿದೆ. ಕಾಮಗಾರಿಗಳ ಪಟ್ಟಿ ಸಿದ್ಧಪಡಿಸಿ, ಅದರಲ್ಲಿ ಅತ್ಯಂತ ತುರ್ತಾಗಿ ಆಗಬೇಕಿರುವ ಕಾಮಗಾರಿಗಳಿಗೆ ಆದ್ಯತೆ ನೀಡುವಂತೆ ಹಾಗೂ ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚಿಸಿದರು.