ಮಳೆಯಿಂದ ಹದಗೆಟ್ಟ ರಸ್ತೆಗಳ ತ್ವರಿತಗತಿ ದುರಸ್ತಿಗೆ ಕ್ರಮ-ಪುರಸಭೆ ಅಧ್ಯಕ್ಷ ಮ್ಯಾಗೇರಿ

KannadaprabhaNewsNetwork |  
Published : Jun 28, 2025, 12:18 AM IST
ಗಜೇಂದ್ರಗಡ ಬಸ್ ನಿಲ್ದಾಣದ ಎದುರಿನ ಲಿಂಗರಾಜ ನಗರ ಬಡಾವಣೆಯ ಸಂಪರ್ಕ ರಸ್ತೆಯನ್ನು ಪುರಸಭೆ ಅಧ್ಯಕ್ಷ ಸುಭಾಸ ಮ್ಯಾಗೇರಿ ಪರಿಶೀಲಿಸಿದರು. | Kannada Prabha

ಸಾರಾಂಶ

ಪಟ್ಟಣದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಮಳೆಯಿಂದ ಹದೆಗೆಟ್ಟಿರುವ ರಸ್ತೆಗಳ ತ್ವರಿತ ದುರಸ್ತಿ ಕೈಗೊಳ್ಳುವ ಮೂಲಕ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪುರಸಭೆ ಅಧ್ಯಕ್ಷ ಸುಭಾಸ ಮ್ಯಾಗೇರಿ ಹೇಳಿದರು.

ಗಜೇಂದ್ರಗಡ: ಪಟ್ಟಣದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಮಳೆಯಿಂದ ಹದೆಗೆಟ್ಟಿರುವ ರಸ್ತೆಗಳ ತ್ವರಿತ ದುರಸ್ತಿ ಕೈಗೊಳ್ಳುವ ಮೂಲಕ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪುರಸಭೆ ಅಧ್ಯಕ್ಷ ಸುಭಾಸ ಮ್ಯಾಗೇರಿ ಹೇಳಿದರು.

ಸ್ಥಳೀಯ ದುರ್ಗಾ ವೃತ್ತ, ಹೀರೆಬಜಾರ, ಬಸ್ ನಿಲ್ದಾಣ, ಎಸ್‌ಎಂ ಭೂಮರಡ್ಡಿ ಪ್ರಾಥಮಿಕ ಶಾಲೆ ಸೇರಿ ವಿವಿಧೆಡೆ ಶುಕ್ರವಾರ ರಸ್ತೆ ಪರಿಶೀಲಿಸಿ ಮಾತನಾಡಿದರು.ಕೆಲ ದಿನಗಳಿಂದ ಸುರಿದ ಮಳೆಯಿಂದಾಗಿ ಪಟ್ಟಣದ ಕೆಲ ಪ್ರಮುಖ ರಸ್ತೆ, ವೃತ್ತಗಳ ಬಳಿ ಹಾಗೂ ವಿವಿಧ ವಾರ್ಡ್‌ಗ ಳಲ್ಲಿ ರಸ್ತೆ, ಫುಟ್‌ಪಾತ್, ಚರಂಡಿಗಳು ನೀರು ರಸ್ತೆಯ ಮೇಲೆ ಹರಿಯುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿವೆ. ಹೀಗಾಗಿ ಅಧಿಕಾರಿಗಳ ಜತೆಗೆ ಸಭೆ ನಡೆಸುವ ಬದಲು ದೂರು ಬಂದ ಬಡಾವಣೆ, ರಸ್ತೆ ಹಾಗೂ ವೃತ್ತಗಳಲ್ಲಿ ಸ್ಥಳ ಪರಿಶೀಲಿಸಿದಾಗ ಸಾರ್ವಜನಿಕರಿಗೆ ಹಾಗೂ ಪ್ರಯಾಣಿಕರಿಗೆ ತೊಂದರೆ ಆಗುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಪಟ್ಟಣದಲ್ಲಿ ಮಳೆಯಿಂದ ಹದೆಗಟ್ಟಿರುವ ರಸ್ತೆ, ಫುಟ್‌ಪಾತ್ ಸೇರಿ ಚರಂಡಿಗಳ ದುರಸ್ತಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವುದರ ಜತೆಗೆ ತ್ವರಿತಗತಿಯಲ್ಲಿ ಕಾಮಗಾರಿ ನಡೆಸಲು ಗುತ್ತಿಗೆದಾರರಿಗೆ ಸೂಚಿಸುತ್ತೇನೆ. ಹೀಗಾಗಿ ಅಧಿಕಾರಿಗಳು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ಮಾಡಲು ತಿಳಿಸುತ್ತೇನೆ ಎಂದ ಅವರು, ಪುರಸಭೆ ವ್ಯಾಪ್ತಿಯ ಸಾರ್ವಜನಿಕರು ಪ್ರಧಾನಮಂತ್ರಿ ಆವಾಸ್(ನಗರ) ೨.೦ ಯೋಜನೆ ಅಡಿಯಲ್ಲಿ ಗಜೇಂದ್ರಗಡ ೨೩ ವಾರ್ಡಗಳ ವ್ಯಾಪ್ತಿಯಲ್ಲಿ ವಸತಿ ರಹಿತ (ಕಚ್ಚಾಮನೆ ಹೊಂದಿರುವ) ಮತ್ತು ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು http//pmay.urban.gov.inನಲ್ಲಿ ಜುಲೈ ೧೫ರೊಳಗೆ ಸಾರ್ವಜನಿಕರು ಅರ್ಜಿಯನ್ನು ಸಲ್ಲಿಸಿ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಸ್ಥಾಯಿ ಸಮಿತಿ ಚೇರ್ಮನ್ ಮುದಿಯಪ್ಪ ಮುಧೋಳ, ಪುರಸಭೆ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಿ, ಮುಖಂಡರಾದ ಶ್ರೀಧರ ಬಿದರಳ್ಳಿ, ಗುಲಾಂಅಹ್ಮದ ಹುನಗುಂದ ಸೇರಿ ಇತರರು ಇದ್ದರು.

"ಪಟ್ಟಣದಲ್ಲಿ ಮಳೆಯಿಂದ ಹದಗೆಟ್ಟಿರುವ ದುರಸ್ತಿ ಕಾಮಗಾರಿ ನಡೆಸುವ ವೇಳೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಗೆ ಕಲ್ಪಿಸುವ ಪರ್ಯಾಯ ರಸ್ತೆಯಲ್ಲಿ ಸಂಚರಿಸುವ ಮೂಲಕ ಪುರಸಭೆಗೆ ಸಹಕಾರ ನೀಡಬೇಕು ಎಂದು ಪುರಸಭೆ ಅಧ್ಯಕ್ಷ ಸುಭಾಸ ಮ್ಯಾಗೇರಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ