ಶೀಘ್ರದಲ್ಲೇ ಬಸವೇಶ್ವರ ಪುತ್ಥಳಿ ಲೋಕಾರ್ಪಣೆಗೆ ಕ್ರಮ

KannadaprabhaNewsNetwork |  
Published : Nov 22, 2025, 01:45 AM IST
01  | Kannada Prabha

ಸಾರಾಂಶ

ದೇವನಹಳ್ಳಿ: ಜಿಲ್ಲಾಡಳಿತ ಭವನದ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಜಗಜ್ಯೋತಿ ಬಸವೇಶ್ವರ ಪುತ್ಥಳಿ ನಿರ್ಮಾಣ ಕಾಮಗಾರಿ ಮೂರು ತಿಂಗಳಲ್ಲಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲು ವೈಯಕ್ತಿವಾಗಿ ೧೫ ಲಕ್ಷ ನೆರವು ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ದೇವನಹಳ್ಳಿ: ಜಿಲ್ಲಾಡಳಿತ ಭವನದ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಜಗಜ್ಯೋತಿ ಬಸವೇಶ್ವರ ಪುತ್ಥಳಿ ನಿರ್ಮಾಣ ಕಾಮಗಾರಿ ಮೂರು ತಿಂಗಳಲ್ಲಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲು ವೈಯಕ್ತಿವಾಗಿ ೧೫ ಲಕ್ಷ ನೆರವು ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಪ್ರವಾಸಿಮಂದಿರದಲ್ಲಿ ಬಸವೇಶ್ವರ ಪುತ್ಥಳಿ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆ ಕುರಿತ ವೀರಶೈವ ಲಿಂಗಾಯತ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತ ಸಮಾಜದ ಮುಖಂಡರು ಬಸವೇಶ್ವರ ಪುತ್ಥಲಿ ಕಾಮಗಾರಿ ಪೂರ್ಣಗೊಳಿಸಲು ೪೦ ಲಕ್ಷ ಅವಶ್ಯಕತೆಯಿದ್ದು ತಮ್ಮ ಅನುದಾನದಲ್ಲಿ ನೀಡುವಂತೆ ಮನವಿ ಮಾಡಿದರು. ಸಮಿತಿ ರಚಿಸಿ ಸಮಿತಿ ಪಟ್ಟಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಿದರೆ ಬಸವೇಶ್ವರ ಪುತ್ಥಳಿ ಮೂರು ತಿಂಗಳಲ್ಲಿ ಲೋಕಾರ್ಪಣೆಗೊಳಿಸಲು ಸೂಚಿಸಲಾಗುವುದು. ಜಗಜ್ಯೋತಿ ಬಸವೇಶ್ವರರು ೧೨ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿದಂತಹ ಬಸವಣ್ಣನವರು ಎಲ್ಲಾ ಸಮುದಾಯಕ್ಕೂ ತನ್ನದೆ ಆದ ಕೊಡುಗೆ ನೀಡಿದ್ದಾರೆ. ಅವರ ಹಾದಿಯಲ್ಲಿ ನಾವೆಲ್ಲರು ನಡೆಯಬೇಕು. ಅಂತಹ ಮಹನೀಯರ ಪುತ್ಥಳಿ ಲೋಕಾರ್ಪಣೆಗೆ ನಾನು ಅಗತ್ಯ ಸಹಕಾರ ನೀಡಲು ಸಿದ್ದ ಎಂದರು.

ವೀರಶೈವ ಲಿಂಗಾಯತ ಸಮಾಜ ಸಂಘದ ತಾಲೂಕು ಅಧ್ಯಕ್ಷ ಎಂ.ಎಸ್.ರಮೇಶ್ ಮಾತನಾಡಿ, ೨೦೨೧ರಲ್ಲಿ ಬಸವೇಶ್ವರರ ಪುತ್ಥಳಿ ಕಾಮಗಾರಿ ಪ್ರಾರಂಭಿಸಿ ಜಿಲ್ಲಾದ್ಯಂತ ಸಮುದಾಯದ ಮುಖಂಡರಿಂದ ದೇಣಿಗೆ ಸಂಗ್ರಹಿಸಿ ಶೇ.೫೦ರಷ್ಟು ಕಾಮಗಾರಿ ಮುಗಿದಿದೆ. ಉಳಿದ ಕಾಮಗಾರಿ ಪೂರ್ಣಗೊಳಿಸಲು ಸಚಿವರಿಗೆ ಮನವಿ ಮಾಡಿದ್ದು ಸಭೆಯಲ್ಲಿ ೨೮ ಲಕ್ಷ ನೀಡುವ ಭರವಸೆ ನೀಡಿದ್ದಾರೆ. ಉಳಿಕೆ ಹಣ ಸಮುದಾಯದಿಂದ ದೇಣಿಗೆ ಸಂಗ್ರಹಿಸಿ ಉಳಿದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು. ಸಭೆಯಲ್ಲಿ ಭಾಗವಹಿಸಿದ ಸಮುದಾಯದ ಜಿಲ್ಲೆ ಹಾಗೂ ತಾಲೂಕು ಸಮಿತಿ ಎಲ್ಲಾ ಪದಾಧಿಕಾರಿಗಳುಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಇದೆ ವೇಳೆ ಅಖಿಲಭಾರತ ವೀರಶೈವ ಮಹಾಸಭಾ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಪ್ರಸನ್ನಹಳ್ಳಿ ವಿರೂಪಾಕ್ಷಯ್ಯ, ಕಾರ್ಮಿಕ ಘಟಕದ ನಿರ್ದೇಶಕ ವಿರೂಪಾಕ್ಷ ಶಾಸ್ತ್ರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂತಕುಮಾರ್, ನಿರ್ದೇಶಕ ನೆಲಮಂಗಲ ಜಗದೀಶ್, ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ವಿಜಯ್‌ಕುಮಾರ್, ಉಪಾಧ್ಯಕ್ಷ ಎಸ್.ನಾಗೇಶ್, ಮಲ್ಲಾರಿಕುಮಾರ್, ಬಯಪ ಅಧ್ಯಕ್ಷ ಶಾಂತಕುಮಾರ್, ಬಯಪ ಸದಸ್ಯ ಪ್ರಸನ್ನಕುಮಾರ್, ಮಂಜುನಾಥ್, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ರಾಜಣ್ಣ, ತಾಲೂಕು ಅಧ್ಯಕ್ಷ ಸಿ.ಜಗನ್ನಾಥ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೆ.ಸಿ.ಮಂಜುನಾಥ್, ವೆಂಕಟೇಶ್, ಸಮುದಾಯದ ಮುಖಂಡರಾದ ವೀರಭದ್ರಪ್ಪ, ಕಾಂತರಾಜು ಇತರರಿದ್ದರು.

೨೧ ದೇವನಹಳ್ಳಿ ಚಿತ್ರಸುದ್ದಿ:೦೧

ದೇವನಹಳ್ಳಿಯಲ್ಲಿ ಬಸವೇಶ್ವರ ಪುತ್ಥಳಿ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆ ಕುರಿತ ವೀರಶೈವ ಲಿಂಗಾಯತ ಸಮಾಜದ ಮುಖಂಡರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ಅಭಿನಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ