ಮಂಡ್ಯ ವೈದ್ಯಕೀಯ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಕ್ರಮ : ಸಚಿವ ಎನ್.ಚಲುವರಾಯಸ್ವಾಮಿ

KannadaprabhaNewsNetwork |  
Published : Mar 07, 2025, 12:47 AM ISTUpdated : Mar 07, 2025, 12:44 PM IST
6ಕೆಎಂಎನ್‌ಡಿ-2ಬೆಂಗಳೂರಿನ ವಿಕಾಸಸೌಧದ ಸಮಿತಿ ಕೊಠಡಿಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ  ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ನಡೆದ ಮಂಡ್ಯ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಅಭಿವೃದ್ದಿ ಕುರಿತು ಚರ್ಚೆ ನಡೆಸಿದರು. | Kannada Prabha

ಸಾರಾಂಶ

ಹಾಲಿ ಮಂಡ್ಯ ವೈದ್ಯಕೀಯ ಆಸ್ಪತ್ರೆಯಲ್ಲಿ 400 ಹಾಸಿಗೆಗಳಿಗೆ ಅನುಮೋದನೆ ಇದ್ದರೂ ಸಹ 800ಕ್ಕೂ ಅಧಿಕ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಇದನ್ನು 850 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆರಿಸುವ ಅಗತ್ಯ ಇದೆ ಎಂದು ಸಚಿವ ಚಲುವರಾಯಸ್ವಾಮಿ ಸಭೆಯ ಗಮನಸೆಳೆದರು.

 ಮಂಡ್ಯ : ಮಂಡ್ಯ ವೈದ್ಯಕೀಯ ಕಾಲೇಜು ಮೇಲ್ದರ್ಜೆಗೆರಿಸುವ ಜೊತೆಗೆ ನವೀಕರಣ ಕಾಮಗಾರಿಗಳಿಗೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್‌ ತಿಳಿಸಿದ್ದಾರೆ.

ವಿಕಾಸಸೌಧದ ಸಮಿತಿ ಕೊಠಡಿಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ನಡೆದ ಮಂಡ್ಯ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಅಭಿವೃದ್ಧಿ ಕುರಿತು ವಿಸ್ತೃತ ಚರ್ಚೆ ನಡೆಸಿದ ನಂತರ ಉಭಯ ಸಚಿವರು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ನೆರವು ನೀಡುವ ಭರವಸೆ ನೀಡಿದರು.

ಹಾಲಿ ಆಸ್ಪತ್ರೆಯಲ್ಲಿ 400 ಹಾಸಿಗೆಗಳಿಗೆ ಅನುಮೋದನೆ ಇದ್ದರೂ ಸಹ 800 ಕ್ಕೂ ಅಧಿಕ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಇದನ್ನು 850 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆರಿಸುವ ಅಗತ್ಯ ಇದೆ ಎಂದು ಸಭೆಯಲ್ಲಿ ಸಚಿವ ಚಲುವರಾಯಸ್ವಾಮಿ ಗಮನಸೆಳೆದರು.

ಇದಕ್ಕೆ ಉತ್ತರಿಸಿದ ವೈದ್ಯಕೀಯ ಶಿಕ್ಷಣ ಸಚಿವರು, ಪರಿಸರ ಇಲಾಖೆ ಪರವಾನಗಿ ನವೀಕರಿಸಿ ಮೇಲ್ದರ್ಜೆಗೆರಿಸಲು ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ತಿಳಿಸಿದರು.

ಇದೇ ರೀತಿ ವಿದ್ಯಾರ್ಥಿಗಳ ಸಂಖ್ಯೆಯನ್ನು 200 ರಿಂದ 250 ಕ್ಕೆ ಹೆಚ್ಚಿಸುವಂತೆ ಕೃಷಿ ಸಚಿವ ಚಲುವರಾಯಸ್ವಾಮಿಯವರು ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ ಮಾಡಿದರು.

ಇದೇ ರೀತಿ ತುರ್ತು ಚಿಕಿತ್ಸಾ ಘಟಕ ಹಾಗೂ ಲಘು ಶಸ್ತ್ರ ಚಿಕಿತ್ಸಾ ಘಟಕಗಳ ಕೊಠಡಿ ನಿರ್ಮಾಣ, ನವೀಕರಣ, ಕ್ಯಾನ್ಸರ್ ಚಿಕಿತ್ಸಾ ಘಟಕ, ಲಾಂಡ್ರಿ ಸೌಲಭ್ಯ, ಹೆಚ್ಚುವರಿ ಕೊಠಡಿಗಳ ನಿರ್ಮಾಣ, ವಿದ್ಯುತ್ ಪೂರೈಕೆ ಸೇರಿದಂತೆ ಆಸ್ಪತ್ರೆಗೆ ಅಗತ್ಯವಿರುವ ಎಲ್ಲಾ ಕಾಮಗಾರಿಗಳನ್ನು ಪಟ್ಟಿ ಮಾಡಿ ವಿಸ್ತೃತ ಯೋಜನೆಯ ಪ್ರಸ್ತಾವನೆ ಸಲ್ಲಿಸುವಂತೆ ಸಚಿವರಾದ ಚಲುವರಾಯಸ್ವಾಮಿಯವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಶರಣ್ ಪ್ರಕಾಶ್ ಪಾಟೀಲ್ ಆಸ್ಪತ್ರೆಯ ಅಧಿಕಾರಿಗಳಿಗೆ ತಿಳಿಸಿದರು.

ಇನ್ನೂ ಸಭೆಯಲ್ಲಿ ಭಾಗವಹಿಸಿದ್ದ ಶ್ರೀರಂಗಪಟ್ಟಣ ಶಾಸಕರು, ಚೆಸ್ಕಾಂ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ ಹಾಗೂ ಮಂಡ್ಯ ಶಾಸಕ ರವಿಕುಮಾರ್ ಗಣಿಗರವರು ಮಂಡ್ಯ ವೈದ್ಯಕೀಯ ಕಾಲೇಜಿನ ಅಭಿವೃದ್ಧಿ ಬಗ್ಗೆ ಸಲಹೆ ಸೂಚನೆ ನೀಡಿದರು.

ಈ ಬಗ್ಗೆ ಮೇಲ್ವಿಚಾರಣೆ ವಹಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ರವರಿಗೆ ಸಚಿವರು ಸೂಚಿಸಿದರು.

ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹಮದ್ ಮೊಹಿಸಿನ್, ಮಂಡ್ಯ ವೈದ್ಯಕೀಯ ಕಾಲೇಜು ನಿರ್ದೇಶಕ ಹಾಗೂ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ರದ್ದು ಮಾಡಿ, ನರೇಗಾ ಮರುಸ್ಥಾಪಿಸಿ: ಸಿದ್ದು
ಸಚಿವ ತಿಮ್ಮಾಪುರ ರಾಜೀನಾಮೆಗೆ ಅಹೋರಾತ್ರಿ ಧರಣಿ