ಪ್ಲಾಸ್ಟಿಕ್‌ ಮುಕ್ತ ವಲಯ ಘೋಷಣೆಗೆ ಕ್ರಮ: ಮೊಹ್ಮದ್‌

KannadaprabhaNewsNetwork |  
Published : Oct 31, 2026, 01:30 AM IST
ಪೊಟೋ: 30ಎಸ್ಎಂಜಿಕೆಪಿ10ಶಿವಮೊಗ್ಗ  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಮಾಲೋಚನಾ ಸಭೆಯಲ್ಲಿ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಮೊಹ್ಮದ್‌ ತಬ್ರೇಝ ಆಲಂ ಷರೀಫ್‌ ಮಾತನಾಡಿದರು.  | Kannada Prabha

ಸಾರಾಂಶ

Steps towards declaring a plastic-free zone: Mohammad

-ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆಕನ್ನಡಪ್ರಭ ವಾರ್ತೆ ಶಿವಮೊಗ್ಗ

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಊಟಿಯ ಮಾದರಿಯಲ್ಲಿ ಪ್ಲಾಸ್ಟಿಕ್ ಮುಕ್ತ ವಲಯವೆಂದು ಘೋಷಿಸಲು ಅನುಕೂಲವಾಗುವಂತೆ ಹಾಗೂ ಎಲ್ಲೆಂದರಲ್ಲಿ ಕಸ ಹಾಕುವುದನ್ನು ನಿಯಂತ್ರಿಸಲು ಮತ್ತು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಲು ಎಲ್ಲಾ ಪ್ರವಾಸಿ ರೆಸಾರ್ಟ್‌ಗಳೊಂದಿಗೆ ಸೇರಿ ಜಾಗೃತಿ ಅಭಿಯಾನ ಕಾರ್ಯಕ್ರಮ ಆಯೋಜಿಸುವಂತೆ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಮೊಹ್ಮದ್‌ ತಬ್ರೇಝ ಆಲಂ ಷರೀಫ್‌ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿ, ಈವರೆಗೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ನೀಡಿರುವ ಕ್ವಾರಿ ಪರವಾನಗಿಗಳ ವಿವರದ ವರದಿ ನೀಡಬೇಕು. ಜೋಗ ಮತ್ತು ಪಶ್ಚಿಮ ಘಟ್ಟ ಅನುಭವ ಕೇಂದ್ರ ಸ್ಥಾಪಿಸಲು ಸಾಗರ ಶಾಸಕರು ಮತ್ತು ಪ್ರವಾಸೋದ್ಯಮ ಇಲಾಖೆ ಸಮನ್ವಯ ಸಾಧಿಸಿ ಕೈಗೊಂಡ ಕ್ರಮಗಳ ಬಗ್ಗೆ ತ್ವರಿತವಾಗಿ ಲಿಖಿತ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಶಿವಮೊಗ್ಗದ ಪಶ್ಚಿಮ ಘಟ್ಟ ಪ್ರದೇಶದಲ್ಲಿರುವ ಎಲ್ಲಾ ದರ್ಗಾಗಳಿಗೆ ಸಂಬಂಧಿಸಿದ ವಿಸ್ತೃತ ವರದಿ ನೀಡುವಂತೆ ಜಿಲ್ಲಾ ವಕ್ಫ್ ಅಧಿಕಾರಿಗೆ ಸೂಚಿಸಿದ ಅವರು, ಹೊಸನಗರ ತಾಲೂಕು ಹೆದ್ದಾರಿಪುರದ ವಿವಾದಿತ ಕೈಗಾರಿಕಾ ಜಮೀನಿನ ಬಗ್ಗೆಯೂ ವಿವರವಾದ ವರದಿ ನೀಡಬೇಕು. ಅಲ್ಲದೇ ವಿವಾದಿತ ಸ್ಥಳದ ಖುದ್ದು ಭೇಟಿಗೆ ದಿನಾಂಕ ನಿಗದಿಪಡಿಸುವಂತೆ ಸಾಗರದ ಉಪವಿಭಾಗಾಧಿಕಾರಿಗಳಿಗೆ ತಿಳಿಸಿದರು.

ಸಾಗರ ತಾಲೂಕಿನ ಚೌಡೇಶ್ವರಿ ದೇವಸ್ಥಾನದ ಜಮೀನಿನ ಹಕ್ಕುಪತ್ರ ಬಹಳ ದಿನಗಳಿಂದ ಬಾಕಿ ಇರುವ ಬಗ್ಗೆ ಅಧಿಕಾರಿಗಳಿಗೆ ಪ್ರಶ್ನಿಸಲಾಗಿ, ಅರಣ್ಯ ಇಲಾಖೆ (FC) ಮತ್ತು ವನ್ಯಜೀವಿ ಅನುಮತಿ ಸಿಕ್ಕ ನಂತರ ಹಕ್ಕುಪತ್ರ ವಿತರಿಸುವ ಬಗ್ಗೆ ಅರಣ್ಯ ಇಲಾಖಾಧಿಕಾರಿಗಳಿಂದ ಮಾಹಿತಿ ಪಡೆದ ಅವರು. ಅನುಮತಿ ಪ್ರಕ್ರಿಯೆ ಬಗ್ಗೆ ಲಿಖಿತ ವರದಿ ನೀಡುವಂತೆ ಅಧ್ಯಕ್ಷರು ಸೂಚಿಸಿದರು.

ಈ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಬಾಕಿ ಇರುವ ಕೇಸ್‌ಗಳ ವಿವರ, ಅರ್ಜಿದಾರರ ಹೆಸರು ಮತ್ತು ಕಾಲಮಿತಿ ಬಗ್ಗೆ ವರದಿ ನೀಡುವಂತೆಯೂ ಮುಜರಾಯಿ ತಹಸೀಲ್ದಾರ್‌ಗೆ ಸೂಚಿಸಿದರು.

ತೀರ್ಥಹಳ್ಳಿ ತಾಲೂಕು ಮಲೆಶಂಕರ ದೇವಸ್ಥಾನದ ಆವರಣದಲ್ಲಿ ಭೂಗತ ಕೇಬಲ್ ಅಳವಡಿಸಬೇಕು. ಪಶ್ಚಿಮ ಘಟ್ಟಗಳ ಶ್ರೀಮಂತ ಪರಂಪರೆಯನ್ನು ಬಿಂಬಿಸುವ ವೋಲ್ವೋ ಬಸ್‌ನಲ್ಲಿ ಸಂಚಾರಿ ವಸ್ತುಸಂಗ್ರಹಾಲಯ (Mobile Museum) ಸ್ಥಾಪನೆ ಮತ್ತು ಪಶ್ಚಿಮಘಟ್ಟ ಗೀತೆ(Anthem)ಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ಉದ್ದೇಶಿಸಲಾಗಿದ್ದು, ಶೀಘ್ರದಲ್ಲಿ ಬಿಡುಗಡೆಗೊಳಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್ , ಡಿಎಫ್‌ಒ ಅಜ್ಜಯ್ಯ, ವನ್ಯಜೀವಿ ಡಿಎಫ್‌ಒ ಪ್ರಸನ್ನ ಪಟಗಾರ್, ಸಾಗರ ಡಿಎಫ್‌ಒ ಫಯಾಜ್, ಜಿ.ಪಂ. ಉಪಕಾರ್ಯದರ್ಶಿ ಅನ್ನಪೂರ್ಣ, ಸಾಗರ ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಇದ್ದರು.ಪೊಟೋ: 30ಎಸ್ಎಂಜಿಕೆಪಿ10

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಮಾಲೋಚನಾ ಸಭೆಯಲ್ಲಿ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಮೊಹ್ಮದ್‌ ತಬ್ರೇಝ ಆಲಂ ಷರೀಫ್‌ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಡೆಯಾಜ್ಞೆ ಇದ್ದರೂ ಪೊಲೀಸರಿಂದ ಚಾರ್ಜ್‌ಶೀಟ್‌: ಹೈಕೋರ್ಟ್‌ ಗರಂ
ಪ್ರೀತಿಗೆ ಪೋಷಕರು ವಿರೋಧ: ಪ್ರೇಮಿಗಳಿಂದ ಆತ್ಮಹತ್ಯೆ ಯತ್ನ