ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್: ನಿಷ್ಪಕ್ಷಪಾತ ತನಿಖೆಗೆ ಸಿ.ಟಿ. ರವಿ ಆಗ್ರಹ

KannadaprabhaNewsNetwork |  
Published : Oct 30, 2026, 01:30 AM IST
ಸಿ.ಟಿ. ರವಿ | Kannada Prabha

ಸಾರಾಂಶ

ಚಿಕ್ಕಮಗಳೂರುಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಯಾರು, ಏಕೆ ಸ್ಟಿಂಗ್ ಆಪರೇಷನ್ ನಡೆಸಿದರು ಎಂಬುದನ್ನು ಸಿಸಿಬಿ ಸ್ಪಷ್ಟಪಡಿಸಿಲ್ಲ. ಪ್ರಕರಣದ ಹಿಂದಿನ ಉದ್ದೇಶ ಹಾಗೂ ಪಾತ್ರಧಾರಿಗಳನ್ನು ಪತ್ತೆಹಚ್ಚಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆಗ್ರಹಿಸಿದರು.

ಸಾಮಾನ್ಯ ಜನರ ಪರಿಸ್ಥಿತಿ ಏನಾಗಬೇಕು ?

(ಸಿ.ಟಿ.ರವಿ ಫೋಟೋ ಬಳಸಿ)ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಯಾರು, ಏಕೆ ಸ್ಟಿಂಗ್ ಆಪರೇಷನ್ ನಡೆಸಿದರು ಎಂಬುದನ್ನು ಸಿಸಿಬಿ ಸ್ಪಷ್ಟಪಡಿಸಿಲ್ಲ. ಪ್ರಕರಣದ ಹಿಂದಿನ ಉದ್ದೇಶ ಹಾಗೂ ಪಾತ್ರಧಾರಿಗಳನ್ನು ಪತ್ತೆಹಚ್ಚಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆಗ್ರಹಿಸಿದರು.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಜೀವನದಲ್ಲಿ ನಾಲ್ಕೂವರೆ ದಶಕಗಳ ಕಾಲ ಶಾಸಕರಾಗಿ, ಸಚಿವ ರಾಗಿ, ಉಪಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ ವ್ಯಕ್ತಿ ಮೇಲೆಯೇ ಸ್ಟಿಂಗ್ ಆಪರೇಷನ್ ನಡೆಸಲಾಗಿದೆ ಎಂದರೆ, ಇನ್ನು ಸಾಮಾನ್ಯ ಜನರ ಪರಿಸ್ಥಿತಿ ಏನಾಗಬೇಕು ಎಂದು ಪ್ರಶ್ನಿಸಿದರು.ಸ್ಟಿಂಗ್ ಆಪರೇಷನ್ ನಡೆಸಿದವರು ಯಾರು, ಅದಕ್ಕೆ ಕಾರಣವೇನು ಮತ್ತು ಅದರ ಹಿಂದಿನ ಉದ್ದೇಶವೇನು ಎಂಬ ಸತ್ಯ ಜನರಿಗೆ ತಿಳಿಯಬೇಕು. ಈ ಎಲ್ಲ ಅಂಶಗಳನ್ನು ಪತ್ತೆಹಚ್ಚುವುದು ಸಿಸಿಬಿ ಜವಾಬ್ದಾರಿಯಾಗಿದೆ. ತನಿಖೆಯಲ್ಲಿ ಸತ್ಯ ಹೊರ ಬರದಿದ್ದರೆ, ತನಿಖೆ ವಿಶ್ವಾಸಾರ್ಹತೆ ಬಗ್ಗೆಯೂ ಜನರಲ್ಲಿ ಅನುಮಾನ ಮೂಡುವ ಸಾಧ್ಯತೆಯಿದೆ ಎಂದು ಹೇಳಿದರು.ಸ್ಟಿಂಗ್ ಆಪರೇಷನ್‌ನ ಪಾತ್ರಧಾರಿಗಳು ಮತ್ತು ಸೂತ್ರಧಾರಿಗಳು ಇಬ್ಬರೂ ಕಾಂಗ್ರೆಸ್‌ನವರೇ ಆಗಿದ್ದಾರೆ ಎಂಬ ಅನು ಮಾನವನ್ನು ತಾವು ಮೊದಲಿನಿಂದಲೂ ವ್ಯಕ್ತಪಡಿಸುತ್ತಾ ಬಂದಿದ್ದಾಗಿ ತಿಳಿಸಿದರು. ಇದೀಗ ತನಿಖೆ ಭಾಗಶಃ ನಡೆದಿರುವುದು ತಮ್ಮ ಅನುಮಾನಕ್ಕೆ ಪುಷ್ಟಿ ನೀಡುವಂತಿದೆ ಎಂದು ಅಭಿಪ್ರಾಯಪಟ್ಟರು.ಪ್ರಕರಣದ ಕುರಿತು ಯಾವುದೇ ಪೂರ್ವಗ್ರಹವಿಲ್ಲದೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಸ್ಟಿಂಗ್ ಆಪರೇಷನ್ ನಡೆಸಿದವರು ಯಾರು, ಏಕೆ ನಡೆಸಿದರು ಮತ್ತು ಅದರ ಹಿಂದಿನ ಉದ್ದೇಶವೇನು ಎಂಬುದನ್ನು ಸ್ಪಷ್ಟವಾಗಿ ಬಹಿರಂಗಪಡಿಸಬೇಕು. ಇಲ್ಲದಿದ್ದರೆ ಸಿಸಿಬಿ ತನಿಖೆ ಬಗ್ಗೆ ಜನರ ಮನಸ್ಸಿನಲ್ಲಿ ಮೂಡಿದ ಅನುಮಾನಗಳು ಹಾಗೆಯೇ ಉಳಿಯಲಿವೆ ಎಂದು ಸಿ.ಟಿ. ರವಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೇಪ್‌ ಮಾಡಿದ್ದಕ್ಕಾಗಿ ಅಪಹರಣ ಮೂಲಕ ಪ್ರತೀಕಾರ
ಉತ್ತರ ಪಾಲಿಕೆಯಲ್ಲಿ 18 ಜಂಕ್ಷನ್‌ ಗುರುತು